ಭಾರತದಲ್ಲಿ ಅನೇಕ ರೀತಿಯ ಮಸಾಲೆಗಳನ್ನು ಅಡುಗೆಗೆ ಬಳಸಲಾಗುತ್ತದೆ.

ಭಾರತದಲ್ಲಿ ಅನೇಕ ರೀತಿಯ ಮಸಾಲೆಗಳನ್ನು ಅಡುಗೆಗೆ ಬಳಸಲಾಗುತ್ತದೆ. ಮಸಾಲೆಗಳನ್ನು ಬಳಸಿ ಅಡುಗೆಯನ್ನು ರುಚಿಕರವಾಗಿಸುವುದಲ್ಲದೆ, ಆರೋಗ್ಯಕ್ಕೂ ಪ್ರಯೋಜನವನ್ನು ನೀಡುತ್ತದೆ. ಮಸಾಲೆಗಳನ್ನು ಬಳಸುವುದು ಕೆಲವೊಮ್ಮೆ ಜೀರ್ಣಕ್ರಿಯೆಯನ್ನು ಹಾನಿಗೊಳಿಸುತ್ತದೆ.

ಈ ಕಾರಣದಿಂದಾಗಿ ಹೆಚ್ಚಿನ ವೈದ್ಯರು ಮಸಾಲೆಯುಕ್ತ ಆಹಾರವನ್ನು ಸೇವಿಸದಂತೆ ಸಲಹೆ ನೀಡುತ್ತಾರೆ. ಆದರೆ ಕೆಲವು ಮಸಾಲೆಗಳನ್ನು ಆಹಾರದಲ್ಲಿ ಬಳಸಲೇಬೇಕು. ಈ ಮಸಾಲೆಗಳನ್ನು ಬಳಸುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಅಡುಗೆ ಮಾಡುವಾಗ ಈ ಮಸಾಲೆಯನ್ನು ಖಂಡಿತವಾಗಿಯೂ ಬಳಸಿ :

ಜೀರಿಗೆ :
ಜೀರಿಗೆ ಬಳಕೆಯಿಂದಆಹಾರದ ಘಮ ಹೆಚ್ಚುವುದು ಮಾತ್ರವಲ್ಲ, ರುಚಿಯೂ ಹೆಚ್ಚುತ್ತದೆ. ಇದರೊಂದಿಗೆ ಜೀರಿಗೆಯು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಆದ್ದರಿಂದ ಯಾವುದೇ ರೀತಿಯ ಅಡುಗೆ ಮಾಡಿದರೂ ಅದರಲ್ಲಿ ಜೀರಿಗೆ ಸೇರಿಸುವುದನ್ನು ಮರೆಯಬೇಡಿ.

 ಓಮ ಕಾಳು :
ಓಮ ಕಾಳು ಹೊಟ್ಟೆಯ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ತೂಕವನ್ನು ಕಡಿಮೆ ಮಾಡಲು ಮತ್ತು ಶೀತದಿಂದ ಪರಿಹಾರಕ್ಕಾಗಿ ಓಮ ಕಾಳನ್ನು ಬಳಸಲಾಗುತ್ತದೆ. ಯಾವುದೇ ಮಸಾಲೆಯುಕ್ತ ಆಹಾರವನ್ನು ತಯಾರಿಸುತ್ತಿದ್ದರೆ, ಅದರಲ್ಲಿ ಒಮಕಾಳನ್ನು ಸೇರಿಸಿ. ಇದು ಎಲ್ಲಾ ರೀತಿಯ ಮಸಾಲೆಗಳು ಮತ್ತು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ.

ಇಂಗು :
ಇಂಗನ್ನು ಬೇಳೆಯಿಂದ ಹಿಡಿದು, ಎಲ್ಲಾ ಅಡುಗೆಗಳಲ್ಲಿಯೂ ಬಳಸಲಾಗುತ್ತದೆ. ಹೊಟ್ಟೆ ನೋವು, ಗ್ಯಾಸ್, ಅಜೀರ್ಣದಂತಹ ಸಮಸ್ಯೆಗಳನ್ನು ತೊಡೆದು ಹಾಕಲು ಇಂಗು ಸಹಾಯ ಮಾಡುತ್ತದೆ. ಹೊಟ್ಟೆಯ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲಾ ರೀತಿಯ ಅಡುಗೆಯಲ್ಲಿ ಇಂಗನ್ನು ಬಳಸಿ.

ಸೋಂಫು :
ಸೋಂಫನ್ನುಅನೇಕ ರೀತಿಯ ಅಡುಗೆಯಲ್ಲಿ ಬಳಸಲಾಗುತ್ತದೆ. ಈ ಮಸಾಲೆ ಅಡುಗೆಯ ರುಚಿಯನ್ನು ಹೆಚ್ಚಿಸುವುದಲ್ಲದೆ, ಜೀರ್ಣ ಕ್ರಿಯೆಯನ್ನು ಕೂಡಾ ಸುಧಾರಿಸುತ್ತದೆ. ಅದಕ್ಕಾಗಿಯೇಪ್ರತಿ ಅಡುಗೆಯಲ್ಲಿ ಇಂಗನ್ನು ಬಳಸುವಂತೆ ಸೂಚಿಸಲಾಗುತ್ತದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಾಗಲಕಾಯಿಯ 7 ಅಚ್ಚರಿಯ ಪ್ರಯೋಜನಗಳು ಇಲ್ಲಿವೆ.

Thu Feb 2 , 2023
ಜೇನುತುಪ್ಪದೊಂದು ಹಾಗಲಕಾಯಿ ರಸವನ್ನು ಸೇವಿಸಿದರೆ ಕಿಡ್ನಿಯಲ್ಲಿರುವ ಕಲ್ಲು ಕರಗುತ್ತದೆ. ಹಾಗಲಕಾಯಿಯು ಪೊಟ್ಯಾಸಿಯಮ್ ಮತ್ತು ಕಬ್ಬಿಣದಂತಹ ಇತರ ಪ್ರಮುಖ ಖನಿಜಗಳನ್ನು ಸಹ ಒಳಗೊಂಡಿದೆ. ಇದು ರೋಗನಿರೋಧಕ ವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಅವಶ್ಯಕವಾಗಿದೆ.ಜೇನುತುಪ್ಪದೊಂದು ಹಾಗಲಕಾಯಿ ರಸವನ್ನು ಸೇವಿಸಿದರೆ ಕಿಡ್ನಿಯಲ್ಲಿರುವ ಕಲ್ಲು ಕರಗುತ್ತದೆ. ಹಾಗಲಕಾಯಿಯು ಪೊಟ್ಯಾಸಿಯಮ್ ಮತ್ತು ಕಬ್ಬಿಣದಂತಹ ಇತರ ಪ್ರಮುಖ ಖನಿಜಗಳನ್ನು ಸಹ ಒಳಗೊಂಡಿದೆ. ಇದು ರೋಗನಿರೋಧಕ ವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಅವಶ್ಯಕವಾಗಿದೆ.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please […]

Advertisement

Wordpress Social Share Plugin powered by Ultimatelysocial