ಮತ್ತೆ ಕೊಹ್ಲಿಯನ್ನು ಕಡೆಗಣಿಸಿದ ಬಿಸಿಸಿಐ? ನಾಯಕ ಕೊಹ್ಲಿ ಮಾಡಬೇಕಿದ್ದ ಕೆಲಸ ಈಗ ರಾಹುಲ್ ಪಾಲು!

ಬಿಸಿಸಿಐ ಮತ್ತು ಟೀಮ್ ಇಂಡಿಯಾ ಆಟಗಾರರ ನಡುವೆ ಎಲ್ಲವೂ ಸರಿಯಿಲ್ಲ, ಬಿಸಿಸಿಐ ತನ್ನ ಆಟಗಾರರಿಗೆ ಸ್ಪಷ್ಟವಾದ ಮಾಹಿತಿಯನ್ನು ನೀಡದೇ ತನ್ನ ಪಾಡಿಗೆ ತಾನು ಕ್ರಮಗಳನ್ನು ಕೈಗೊಳ್ಳುತ್ತೆ, ಯಾವುದಾದರೂ ಮಹತ್ವದ ನಿರ್ಧಾರವನ್ನು ಕೈಗೊಳ್ಳಬೇಕಾದರೆ ಸಂಬಂಧಪಟ್ಟ ಆಟಗಾರನಿಗೆ ಮುಂಚಿತವಾಗಿ ತಿಳಿಸದೇ ಆ ಆಟಗಾರನನ್ನು ಕಡೆಗಣಿಸುತ್ತದೆ ಎಂಬ ದೊಡ್ಡ ಆರೋಪವನ್ನು ಬಿಸಿಸಿಐ ಈ ಹಿಂದಿನಿಂದಲೂ ಎದುರಿಸುತ್ತಿದೆ.

ಆದರೆ ಈ ಎಲ್ಲಾ ಆರೋಪಗಳನ್ನು ಪದೇಪದೇ ತಳ್ಳಿಹಾಕುತ್ತಿದ್ದ ಬಿಸಿಸಿಐ ತನ್ನ ಮತ್ತು ಆಟಗಾರರ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಾಗಲಿ ಅಥವಾ ಮನಸ್ತಾಪಗಳಾಗಲಿ ಇಲ್ಲ, ಆಟಗಾರರ ಜೊತೆ ಅಗತ್ಯವಾದ ಸಂಪರ್ಕವನ್ನು ಬೆಳೆಸಿ ವಿಷಯಗಳನ್ನು ಚರ್ಚಿಸಿದ ನಂತರವೇ ಮುಂದಿನ ಹೆಜ್ಜೆಯನ್ನು ಯಾವಾಗಲೂ ಇಡುವುದಾಗಿ ಹೇಳಿಕೆಗಳನ್ನು ನೀಡಿತ್ತು.

ಆದರೆ ಬಿಸಿಸಿಐ ವಿರುದ್ಧದ ಈ ಎಲ್ಲಾ ಸುದ್ದಿಗಳು ಕೇವಲ ವದಂತಿಯಲ್ಲ ಎಂಬ ಅನುಮಾನಗಳು ದೊಡ್ಡ ಮಟ್ಟದಲ್ಲಿ ಹೆಚ್ಚಾಗುವಂತೆ ಮಾಡಿದ್ದು ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳುವ ಮುನ್ನ ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ನಡೆಸಿದ ಮಾಧ್ಯಮ ಗೋಷ್ಠಿ. ಹೌದು, ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳುವ ಮುನ್ನ ವಿಶೇಷ ಮಾಧ್ಯಮಗೋಷ್ಠಿಯನ್ನು ನಡೆಸಿದ ವಿರಾಟ್ ಕೊಹ್ಲಿ ಬಿಸಿಸಿಐ ನಡೆಯ ಕುರಿತು ನೇರವಾದ ಹೇಳಿಕೆಗಳನ್ನು ನೀಡುವುದರ ಮೂಲಕ ತಾನು ಏಕದಿನ ನಾಯಕತ್ವದಿಂದ ಕೆಳಗಿಳಿಯುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿಲ್ಲ, ಬದಲಾಗಿ ಬಿಸಿಸಿಐ ಭಾರತ ಏಕದಿನ ತಂಡದ ನೂತನ ನಾಯಕನನ್ನು ಘೋಷಿಸುವ 90 ನಿಮಿಷಗಳ ಹಿಂದಷ್ಟೇ ನನಗೆ ವಿಷಯವನ್ನು ತಿಳಿಸಿತ್ತು ಮತ್ತು ಅದಕ್ಕೆ ನಾನು ವಿರೋಧ ವ್ಯಕ್ತಪಡಿಸದೇ ಒಪ್ಪಿಗೆಯನ್ನೂ ಸೂಚಿಸಿದ್ದೆ ಎಂದು ಹೇಳಿಕೆಗಳನ್ನು ನೀಡಿದ್ದರು. ಅಷ್ಟೇ ಅಲ್ಲದೇ ತಾನು ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ತ್ಯಜಿಸುವ ನಿರ್ಧಾರವನ್ನು ಬಿಸಿಸಿಐಗೆ ಸಲ್ಲಿಸಿದಾಗ ಯಾವುದೇ ಪ್ರತಿರೋಧವನ್ನು ವ್ಯಕ್ತಪಡಿಸದ ಬಿಸಿಸಿಐ ಒಪ್ಪಿಗೆಯನ್ನು ಸೂಚಿಸಿತ್ತು ಎಂಬ ಆಶ್ಚರ್ಯಕರ ಹೇಳಿಕೆಯನ್ನು ನೀಡಿದರು.

ವಿರಾಟ್ ಕೊಹ್ಲಿ ನೀಡಿದ ಇಷ್ಟು ಹೇಳಿಕೆಗಳು ಕ್ರಿಕೆಟ್ ಅಭಿಮಾನಿಗಳನ್ನು ಬಿಸಿಸಿಐ ವಿರುದ್ಧ ಕಿಡಿ ಕಾರುವಂತೆ ಮಾಡಿದ್ದವು. ಹೌದು, ಈ ಹಿಂದೆ ಸೌರವ್ ಗಂಗೂಲಿ ವಿರಾಟ್ ಕೊಹ್ಲಿ ಟಿ ಟ್ವೆಂಟಿ ನಾಯಕತ್ವ ತ್ಯಜಿಸಲು ಮುಂದಾದಾಗ ಬಿಸಿಸಿಐ ಅವರ ನಿರ್ಧಾರವನ್ನು ತಿರಸ್ಕರಿಸಿತ್ತು ಆದರೂ ಸಹ ಕೊಹ್ಲಿ ತಮ್ಮ ನಿರ್ಧಾರದಲ್ಲಿಯೇ ಮುಂದುವರಿದರು ಎಂಬ ಹೇಳಿಕೆಯನ್ನು ನೀಡಿದ್ದರು. ಹೀಗಾಗಿ ಸೌರವ್ ಗಂಗೂಲಿ ಅಂದು ಕೊಹ್ಲಿ ಕುರಿತು ಸುಳ್ಳು ಹೇಳಿಕೆಯನ್ನು ನೀಡಿದ್ದರು ಎಂದು ಕೆಂಡಾಮಂಡಲವಾದ ವಿರಾಟ್ ಕೊಹ್ಲಿ ಅಭಿಮಾನಿಗಳು ಬಿಸಿಸಿಐ ಬೇಕಂತಲೇ ಕೊಹ್ಲಿ ಅವರನ್ನು ಕಡೆಗಣಿಸುತ್ತಿದೆ ಎಂಬ ಆರೋಪವನ್ನು ಮಾಡಿದ್ದರು. ಇಷ್ಟೆಲ್ಲಾ ಬೆಳವಣಿಗೆಗಳ ನಡುವೆಯೇ ಇದೀಗ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿದ್ದು ಇಲ್ಲಿನ ಬೆಳವಣಿಗೆಯೊಂದು ಇದೀಗ ಮತ್ತೆ ಕೊಹ್ಲಿ ಅಭಿಮಾನಿಗಳನ್ನು ಕೆರಳಿಸುವ ಮುನ್ಸೂಚನೆಯನ್ನು ನೀಡಿದೆ. ಆ ಕುರಿತಾದ ವಿವರ ಈ ಕೆಳಕಂಡಂತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜತಾಂತ್ರಿಕ ಮಾರ್ಗದಲ್ಲಿ ಕನಕಪುರ 'ಬಂಡೆ'; ಡಿಕೆಶಿ 'ಪ್ಯಾನ್ ಕರ್ನಾಟಕ ಲೀಡರ್'!

Fri Dec 24 , 2021
newup ಬೆಂಗಳೂರು: ಮಾತಿನಲ್ಲೇ ದರ್ಪ ದಾಷ್ಟ್ಯ ತೋರುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬದಲಾಗಿದ್ದಾರೆ. ತಮ್ಮ ರಾಜತಾಂತ್ರಿಕ ನಿಲುನಿವಿನೊಂದಿಗೆ ತಮ್ಮ ವ್ಯಕ್ತಿತ್ವದಲ್ಲಿ ಪರಿವರ್ತನೆಗೊಂಡಿರುವ ಡಿಕೆಶಿ ಪಕ್ಷದಲ್ಲಿ ತಮ್ಮ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸಿದ್ದಾರೆ. ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಹೊಸ ಇಮೇಜ್ ಕಟ್ಟಿಕೊಂಡಿದ್ದು, ಪಕ್ಷದೊಳಗಿನ ನಾಯಕರ ಜೊತೆಗೆ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳುತ್ತಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಹಿರಿಯ ನಾಯಕ ಎಂ ಬಿ ಪಾಟೀಲ್ ಅವರೊಂದಿಗಿರುವ ಫೋಟೋಗಳನ್ನು ಟ್ವಿಟರ್‌ನಲ್ಲಿ ಶಿವಕುಮಾರ್ ಹಂಚಿಕೊಂಡಿದ್ದರು, ಈ ಫೋಟೋ ಇಮೇಜ್ […]

Advertisement

Wordpress Social Share Plugin powered by Ultimatelysocial