ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಇಲ್ಲ!

ಬಸ್ತಿ, ಫೆಬ್ರವರಿ 26: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಇಲ್ಲ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಸ್ಪಷ್ಟಪಡಿಸಿದ್ದಾರೆ.ಬಿಎಸ್‌ಪಿ-ಬಿಜೆಪಿ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುತ್ತವೆ ಎಂದು ವಿರೋಧ ಪಕ್ಷಗಳು ಈ ಎರಡೂ ಹೇಳಿಕೆಗಳ ನಂತರ ಆರೋಪಿಸಿದ್ದವು.ಸಮಾಜವಾದಿ ಪಕ್ಷವು, ‘ಬಿಎಸ್‌ಪಿಯು ಬಿಜೆಪಿಯ ಬಿ ಟೀಂ’ ಎಂದು ಆರೋಪಿಸಿತ್ತು.ಈ ಆರೋಪಗಳಿಗೆ ಮಾಯಾವತಿ ಅವರು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ನಮ್ಮ ಪಕ್ಷವು ಬಿಜೆಪಿಯ ಬಿ ಟೀಂ ಆಗಿದ್ದೇ ನಿಜವಾದರೆ, ಲೋಕಸಭಾ ಉಪಚುನಾವಣೆಯಲ್ಲಿ ನಮ್ಮ ಜೊತೆ ಸಮಾಜವಾದಿ ಪಕ್ಷವು ಮೈತ್ರಿ ಮಾಡಿಕೊಂಡಿದ್ದು ಏಕೆ’ ಎಂದು ಅವರು ಪ್ರಶ್ನಿಸಿದ್ದಾರೆ.ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಎಸ್‌ಪಿ ಇನ್ನೂ ಪ್ರಸ್ತುತವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಮಾಯಾವತಿ ಅವರು, ಸತ್ಯವನ್ನು ಒಪ್ಪಿಕೊಳ್ಳುವ ದೊಡ್ಡತನವನ್ನು ಅಮಿತ್ ಶಾ ತೋರಿದ್ದಾರೆ ಎಂದು ಹೇಳಿದ್ದರು.ಕಾಂಗ್ರೆಸ್‌ನ ಅಧ್ಯಕ್ಷೆ ಸೋನಿಯಾ ಗಾಂಧಿ ಇರುವಂತೆ, ನಾನು ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷೆ. ಸಂತ್ರಸ್ತರ ಮನೆಗೆ ಹೋಗಿ ಭೇಟಿ ನೀಡಲು, ನೆರವು ನೀಡಲು ನಮ್ಮ ಪಕ್ಷದಲ್ಲಿ ಪದಾಧಿಕಾರಿಗಳಿದ್ದಾರೆ. ಅವರು ಆ ಕೆಲಸ ಮಾಡುತ್ತಾರೆ’ ಎಂದು ಅವರು ಮಾಧ್ಯಮಗಳ ವಿರುದ್ಧವೂ ಹರಿಹಾಯ್ದಿದ್ದಾರೆ.’ಅತ್ಯಾಚಾರ, ಹಲ್ಲೆಗೆ ಗುರಿಯಾದ ದಲಿತರ ಮನೆಗೆ ಬೆಹೆನ್‌ಜೀ (ಮಾಯಾವತಿ) ಭೇಟಿ ನೀಡಿಲ್ಲ ಎಂದು ಈ ಮಾಧ್ಯಮಗಳು ಕೇಳುತ್ತಿವೆ. ಪ್ರಿಯಾಂಕಾ ಗಾಂಧಿಯಂತೆ ಸಂತ್ರಸ್ತರ ಮನೆಗೆ ಹೋಗಿ, ನಾಟಕವಾಡಲು ನಾನು ಯಾವುದೇ ಪಕ್ಷದ ಉಸ್ತುವಾರಿ ಅಥವಾ ಪ್ರಧಾನ ಕಾರ್ಯದರ್ಶಿ ಅಲ್ಲ.2013ರ ವಿಧಾನಸಭಾ ಚುನಾವಣೆಗೆ ಕಲಬುರಗಿಯಲ್ಲಿ ಪ್ರಚಾರದ ನಡೆಸುತ್ತಿದ್ದ ವೇಳೆ ನಗದು ಪತ್ತೆಯಾಗಿದ್ದ ಆರೋಪದಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ ರದ್ದುಗೊಳಿಸಿದೆ.ಪ್ರಕರಣ ರದ್ದು ಕೋರಿ ಮಾಯಾವತಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ.ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕ ಸದಸ್ಯಪೀಠ, ನಗದು ಪತ್ತೆ ವಿಚಾರ ಸಂಬಂಧ ಅರ್ಜಿದಾರರು ನೀಡಿದ ವಿವರಣೆಯನ್ನು ಕೇಂದ್ರ ಚುನಾವಣಾ ಆಯೋಗ ಒಪ್ಪಿದೆ.ಹಾಗಾಗಿ ನ್ಯಾಯದ ದೃಷ್ಟಿಯಿಂದ ಪ್ರಕರಣ ಮುಂದುವರಿಸುವುದು ಸರಿಯಲ್ಲ. ಈ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆ ಮತ್ತು ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಆದೇಶ ನೀಡಿದೆ. ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಪ್ರಮೀಳಾ ನೇಸರ್ಗಿ ವಾದ ಮಂಡಿಸಿದ್ದರು.2013ರ ಏ.30ರಂದು ಮಾಯಾವತಿ ಕಲಬುರಗಿಯ ಜೇವರ್ಗಿಗೆ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದರು. ಆಗ ಚುನಾವಣಾ ವೀಕ್ಷಕರ ತಂಡ ಪರಿಶೀಲನೆ ನಡೆಸಿದಾಗ 1,50,000 ರು. ನಗದು ಪತ್ತೆಯಾಗಿತ್ತು. ಆಗ ಮಾಯಾವತಿ ತಮ್ಮ ಹಣ 50,000 ರು. ಉಳಿದ 1,00,000 ರು. ಪಕ್ಷದ ಪ್ರಧಾನ ಕಾರ್ಯದರ್ಶಿ ಸತೀಶ್‌ ಚಂದ್ರ ಮಿಶ್ರ ಅವರಿಗೆ ಸೇರಿದ್ದು ಎಂದು ಹೇಳಿಕೆ ನೀಡಿದ್ದರು. ಅದನ್ನು ಆಯೋಗ ಒಪ್ಪಿತ್ತು.ಆದರೂ ಅವರ ವಿರುದ್ಧ ಜೇವರ್ಗಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಮುಂದುವರಿಸಲಾಗಿತ್ತು. ಜತೆಗೆ, ನಗರದ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಅದನ್ನು ಪ್ರಶ್ನಿಸಿ ಮಾಯಾವತಿ ನ್ಯಾಯಾಲಯದ ಮೊರೆ ಹೋಗಿದ್ದರು.ಫೆಬ್ರವರಿ 23 ರಂದು ಯುಪಿ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕನೇ ಹಂತದ ಮತದಾನ ಪೂರ್ಣಗೊಂಡಿದೆ. ಎಲ್ಲಾ ರಾಜಕೀಯ ಪಕ್ಷಗಳು ಮುಂದಿನ ಹಂತಗಳಿಗೆ ಸಂಪೂರ್ಣವಾಗಿ ಸಿದ್ಧತೆ ನಡೆಸಿವೆ. ಹೀಗಿರುವಾಗ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಅವರು 2007 ರಂತೆ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವ ಸಾಧನೆಗೆ ಮರಳಿ ಯತ್ನಿಸುತ್ತೇವೆ.ಈ ಮೂಲಕ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಸರ್ಕಾರ ರಚಿಸುವ ಎಲ್ಲಾ ಕನಸುಗಳು ನುಚ್ಚು ನೂರಾಗುತ್ತವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ, ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಬಿಎಸ್‌ಪಿಯ ಪ್ರಸ್ತುತತೆ ಹಾಗೇ ಉಳಿಯಬೇಕು ಎಂದು ಉಲ್ಲೇಖಿಸಿದ್ದ ಅಮಿತ್ ಶಾ ಅವರನ್ನುದ್ದೇಶಿಸಿ ಸತ್ಯ ಒಪ್ಪಿಕೊಂಡಿರುವುದು ಅವರ ದೊಡ್ಡತನ ಎಂದು ಹೊಗಳಿದ್ದಾರೆ.ವಾಸ್ತವವಾಗಿ ಮಾಯಾವತಿ ಅವರು ಮತ ಚಲಾಯಿಸಿದ ನಂತರ ಸಾಮಾಜಿಕ ಮಾಧ್ಯಮ ಟ್ವಿಟರ್ ಹ್ಯಾಂಡಲ್‌ನಿಂದ ಪತ್ರಿಕಾ ಪ್ರಕಟಣೆಯನ್ನು ಶೇರ್ ಮಾಡಿಕೊಂಡಿದ್ದಾರೆ. ಬುಧವಾರ ಬೆಳಗ್ಗೆ 7 ಗಂಟೆಗೆ ಬಿಎಸ್‌ಪಿ ಮುಖ್ಯಸ್ಥರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದೂ ಹೇಳಲಾಗಿದೆ. ಈ ನಡುವೆ ಮಾಧ್ಯಮದವರೊಂದಿಗೆ ಸಂವಾದ ನಡೆಸಿದ್ದಾರೆ. ಹೀಗಿರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಎಸ್‌ಪಿ ಕೂಡ ಚುನಾವಣೆಯಲ್ಲಿ ಪ್ರಬಲವಾಗಿ ಹೋರಾಡುತ್ತಿದೆ. ದಲಿತರು ಮತ್ತು ಮುಸ್ಲಿಮರ ಮತಗಳನ್ನು ಹೆಚ್ಚು ಪಡೆಯುತ್ತಿದೆ ಎಂಬ ಬಗ್ಗೆ ಪ್ರಶ್ನಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಈ ಗಾಳಿ ತಂಗಾಳಿ' ಹಾಡನ್ನ ಬಿಡುಗಡೆ ಮಾಡಿ 'ಕನ್ನೇರಿ' ಚಿತ್ರತಂಡಕ್ಕೆ ಶುಭಕೋರಿದ ಶಾಸಕ ಸತೀಶ್ ಜಾರಕಿಹೊಳಿ!

Sat Feb 26 , 2022
ನೀನಾಸಂ ಮಂಜು ನಿರ್ದೇಶನದಲ್ಲಿ ಮೂಡಿ ಬಂದಿರುವ ನೈಜ ಘಟನೆ ಆಧಾರಿತ ಮಹಿಳಾ ಪ್ರಧಾನ ಚಿತ್ರ ಕನ್ನೇರಿ ಮಾರ್ಚ್ 4ರಂದು ಬಿಡುಗಡೆಯಾಗಿ ಪ್ರೇಕ್ಷಕರೆದುರು ಬರಲು ರೆಡಿಯಾಗಿದೆ. ರಿಲೀಸ್ ಗೆ ರೆಡಿಯಾಗಿರೋ ಕನ್ನೇರಿಯ ಒಂದೊಂದೇ ಝಲಕ್ ಗಳನ್ನ ಸಿನೆಮಾ ತಂಡ ರಿಲೀಸ್ ಮಾಡ್ತ ಸಿನೆಮಾ ಮೇಲಿನ ಕ್ಯೂರಿಯಾಸಿಟಿಯನ್ನ ಇಮ್ಮಡಿಯಾಗಿಸುತ್ತಿದೆ.’ ಕನ್ನೇರಿ’ ಸಿನಿಮಾದ ಮಗದೊಂದು ಹಾಡು ‘ಈ ಗಾಳಿ ತಂಗಾಳಿ’ ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆಯಾಗಿದೆ. ಕಾಂಗ್ರೇಸ್ ಶಾಸಕರಾದ ಸತೀಶ್ ಜಾರಕಿಹೊಳಿ ಈ ಹಾಡನ್ನು […]

Advertisement

Wordpress Social Share Plugin powered by Ultimatelysocial