ಗಂಡನ ಅಕಾಲಿಕ ಸಾವಿನ ಬೆನ್ನಲ್ಲೇ ನಟಿ ಮೀನಾ ನೋವಿನ ಮಾತು!

ಚೆನ್ನೈ: ಖ್ಯಾತ ಬಹುಭಾಷಾ ನಟಿ ಹಾಗೂ 90ರ ದಶಕದಲ್ಲಿ ದಕ್ಷಿಣ ಭಾರತದ ಸಿನಿ ರಂಗದ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದ ಮೀನಾ, ತಮ್ಮ ಪತಿಯ ಅಕಾಲಿಕ ಮರಣದ ದುಃಖದಲ್ಲಿದ್ದಾರೆ. ಉದ್ಯಮಿ ವಿದ್ಯಾಸಾಗರ್​ 48ನೇ ವಯಸ್ಸಿನಲ್ಲಿ ಶ್ವಾಸಕೋಸ ಸಮಸ್ಯೆಯಿಂದ ಮಂಗಳವಾರ (ಜೂನ್​ 28) ರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಗಂಡನ ಸಾವು ಮೀನಾ ಅವರಿಗೆ ಬರಸಿಡಿಲು ಬಡಿದಂತಾಗಿದೆ. ಅಂತ್ಯಸಂಸ್ಕಾರ ಮುಗಿಸಿ ಪತಿಯ ಅಗಲಿಕೆಯ ನೋವಿನಲ್ಲಿರುವ ಮೀನಾ ಇನ್​ಸ್ಟಾಗ್ರಾಂನಲ್ಲಿ ಭಾವುಕವಾಗಿ ಬರೆದುಕೊಂಡಿದ್ದಾರೆ. ಹಾಗೆಯೇ ಮನವಿವೊಂದನ್ನು ಮಾಡಿಕೊಂಡಿದ್ದಾರೆ.

ಕಳೆದ ಕೆಲವು ತಿಂಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಗಂಡನನ್ನು ಉಳಿಸಿಕೊಳ್ಳಲು ಮೀನಾ, ನಾನಾ ಕಸರತ್ತು ಮಾಡಿದರು. ಆದರೆ, ಅವರ ಪ್ರಯತ್ನವೆಲ್ಲ ವ್ಯರ್ಥವಾಯಿತು. ಇದೀಗ ಮೀನಾ ಅವರ ಮನೆಯಲ್ಲಿ ಕತ್ತಲೆ ಆವರಿಸಿದೆ. ಗಂಡನ ಸಾವಿನ ಬಳಿಕ ಮೊದಲ ಬಾರಿಗೆ ಇನ್​ಸ್ಟಾಗ್ರಾಂ ಮೂಲಕ ಪ್ರತಿಕ್ರಿಯಿಸಿದ್ದಾರೆ. ವಿದ್ಯಾಸಾಗರ್​ ಸಾವಿಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುಳ್ಳು ವರದಿಗಳಿಗೆ ಬ್ರೇಕ್​ ಹಾಕುವಂತೆ ಮಾಧ್ಯಮದವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮೀನಾ ಅವರ ಇನ್​ಸ್ಟಾಗ್ರಾಂ ಪೋಸ್ಟ್​ ಸಾರಾಂಶ ಈ ಕೆಳಕಂಡಂತಿದೆ
ನನ್ನ ಪ್ರೀತಿಯ ಗಂಡ ವಿದ್ಯಾಸಾಗರ್​ ಅವರನ್ನು ಕಳೆದುಕೊಂಡು ತೀವ್ರ ದುಃಖದಲ್ಲಿ ಮುಳುಗಿದ್ದೇನೆ. ಈ ಪರಿಸ್ಥಿತಿಯಲ್ಲಿ ನನ್ನ ಮೇಲೆ ಸಹಾನುಭೂತಿ ತೋರಿ ಮತ್ತು ನಮ್ಮ ಖಾಸಗಿತನವನ್ನು ಗೌರವಿಸಬೇಕೆಂದು ಮಾಧ್ಯಮದವರಲ್ಲಿ ಕೇಳಿಕೊಳ್ಳುತ್ತೇನೆ. ಈ ವಿಚಾರ ಸಂಬಂಧ ಯಾವುದೇ ತಪ್ಪು ಮಾಹಿತಿಯನ್ನು ಪ್ರಚಾರ ಮಾಡುವುದನ್ನು ಈ ಕ್ಷಣವೇ ನಿಲ್ಲಿಸುವಂತೆ ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ. ಇಂತಹ ಸಂಕಷ್ಟದ ಸಮಯದಲ್ಲಿ ನನ್ನ ಕುಟುಂಬಕ್ಕೆ ಬೆಂಗಾವಲಾಗಿ ನಿಂತು, ನೆರವು ನೀಡಿದ ಎಲ್ಲ ಸಹೃದಯಿಗಳಿಗೆ ನಾನು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನನ್ನ ಪತಿಯನ್ನು ಉಳಿಕೊಡಲು ತಮ್ಮ ಶಕ್ತಿ ಮೀರಿ ಪ್ರಯತ್ನಿಸಿದ ವೈದ್ಯಕೀಯ ತಂಡಕ್ಕೆ ಹಾಗೂ ನನಗಾಗಿ ಪ್ರಾರ್ಥಿಸಿದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​, ಆರೋಗ್ಯ ಮಂತ್ರಿ ಎಂ. ಸುಬ್ರಮಣಿಯನ್​, ರಾಧಾಕೃಷ್ಣನ್​ (ಐಎಎಸ್​), ಸಹೋದ್ಯೋಗಿಗಳು, ಸ್ನೇಹಿತರು, ಕುಟುಂಬ, ಮಾಧ್ಯಮ ಮತ್ತು ನನ್ನ ಪ್ರೀತಿಯ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಮೀನಾ ಅವರ ಪತಿ ವಿದ್ಯಾಸಾಗರ್​ ಮಂಗಳವಾರ (ಜೂನ್​ 28) ರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ವಿದ್ಯಾಸಾಗರ್​ ಅವರ ಅಕಾಲಿಕ ಮರಣ ಮೀನಾ ಕುಟುಂಬಕ್ಕೆ ಮಾತ್ರವಲ್ಲದೆ, ಕಾಲಿವುಡ್​ ಸಿನಿರಂಗಕ್ಕೂ ಶಾಕಿಂಗ್ ಸಂಗತಿಯಾಗಿದೆ. ವಿದ್ಯಾಸಾಗರ್​ ಅವರ ಅಂತಿಮ ಸಂಸ್ಕಾರವನ್ನು ಬುಧವಾರ (ಜೂನ್ 29) ಬೆಸಂತ್​ ನಗರದ ಚಿತಾಗಾರದಲ್ಲಿ ನಡೆಸಲಾಗಿದೆ. ಪತ್ನಿ ಮೀನಾ ಅವರು ಕಣ್ಣಲ್ಲಿ ನೀರು ತುಂಬಿಕೊಂಡೇ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಮೀನಾ ಮತ್ತು ವಿದ್ಯಾಸಾಗರ್​ ಅವರು 2009ರ ಜುಲೈ 12ರಲ್ಲಿ ಮದುವೆಯಾದರು. ದಂಪತಿಗೆ ನೈನಿಕಾ ಹೆಸರಿನ ಹೆಣ್ಣು ಮಗಳಿದ್ದಾಳೆ. ನೈನಿಕಾ, ಅಟ್ಲೀ ನಿರ್ದೇಶನದ ಥೇರಿ ಸಿನಿಮಾದಲ್ಲಿ ನಟ ವಿಜಯ್​

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿದ್ಯುತ್ ಸಂಪರ್ಕ ಪಡೆಯಲು ಒಸಿ ಕಡ್ಡಾಯವಲ್ಲ: ಸಚಿವ ಸುನೀಲ್‌ ಕುಮಾರ್‌ ಘೋಷಣೆ !

Sat Jul 2 , 2022
  ವಿದ್ಯುತ್ ಸಂಪರ್ಕ ಪಡೆಯಲು ಓಸಿ ನಿಯಮವನ್ನು  ತೆಗೆದು ಹಾಕಿದ್ದು, ಇನ್ಮುಂದೆ ವಿದ್ಯುತ್ ಸಂಪರ್ಕ ಪಡೆಯಲು ಒಸಿ ಕಡ್ಡಾಯವಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್​​​​ ತಿಳಿಸಿದ್ದಾರೆ. ಈ ಕುರಿತು ಶನಿವಾರ ಟ್ವೀಟ್​ ಮಾಡಿರುವ ಅವರು, ಉದ್ಯಮ, ವಾಣಿಜ್ಯ ಮಳಿಗೆ, ವಾಸದ ಮನೆಗೆ ಒಸಿ ಅಗತ್ಯವಿತ್ತು. BBMP ಸ್ಥಳೀಯ ಸಂಸ್ಥೆಗಳಿಂದ ಒಸಿ ಪಡೆಯಬೇಕಾಗಿತ್ತು. ಒಸಿ ಇದ್ದವರಿಗೆಮಾತ್ರ ವಿದ್ಯುತ್ ಸಂಪರ್ಕ ನೀಡಲಾಗುತ್ತಿತ್ತು. ಸಿಎಂ ಅನುಮೋದನೆಯೊಂದಿಗೆ ಸರ್ಕಾರ ಮನವಿ ಸಲ್ಲಿಸಿದ್ದು, ರಾಜ್ಯ ವಿದ್ಯುತ್ […]

Advertisement

Wordpress Social Share Plugin powered by Ultimatelysocial