ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಇನ್ನಿಲ್ಲ

ಬೆಂಗಳೂರು, ಜೂ.29- ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ವಿಧಿವಶರಾಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ವಿದ್ಯಾಸಾಗರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೊರೊನಾ ಸೋಂಕು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು ಮಗಳು ಮತ್ತು ಪತ್ನಿಯನ್ನು ಅಗಲಿದ್ದಾರೆ.

ಚಿತ್ರರಂಗದ ಗಣ್ಯರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ಬೆಂಗಳೂರು ಮೂಲದ ವಿದ್ಯಾಸಾಗರ್ ಅವರನ್ನು ನಟಿ ಮೀನಾ ವಿವಾಹವಾಗಿದ್ದರು. ಸಾಫ್ಟ್‍ವೇರ್ ಉದ್ಯೋಗಿಯಾಗಿದ್ದ ವಿದ್ಯಾಸಾಗರ್ ಚೆನ್ನೈನಲ್ಲಿ ನೆಲೆಸಿದ್ದರು.

ಮೀನಾ ಜೊತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ನಟ ಶರತ್ ಕುಮಾರ್ ಅವರು ವಿದ್ಯಾಸಾಗರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮೀನಾ ಪತಿ ವಿದ್ಯಾಸಾಗರ್ ಅವರ ಅಕಾಲಿಕ ಮರಣದ ಸುದ್ದಿ ತಿಳಿದು ಆತಂಕವಾಯಿತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವಿಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಪುಷ್ಪ 2'ಗೆ ಎಂಟ್ರಿಕೊಟ್ಟ ವಿಜಯ್ ಸೇತುಪತಿ!

Wed Jun 29 , 2022
  ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ: ದಿ ರೈಸ್’ ಸಿನಿಮಾ ಹಿಟ್ ಲಿಸ್ಟ್ ಸೇರಿದೆ. ಇನ್ನು ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಪಟ್ಟಿಯಲ್ಲಿ ಸೇರಿಕೊಂಡಿದೆ. ಸುಕುಮಾರ್ ನಿರ್ದೇಶನದ ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 322.6 ಕೋಟಿ ಗಳಿಸಿದೆ ಎನ್ನಲಾಗಿದೆ. ಪುಷ್ಪ ಭಾಗ ಒಂದು ರಿಲೀಸ್ ಆದ ಬಳಿಕ, ಈ ಚಿತ್ರದ ಮುಂದುವರೆದ ಭಾಗಕ್ಕಗಾಗಿ ಜನ ಕಾಯುತ್ತಿದ್ದಾರೆ. ಸದ್ಯ ‘ಪುಷ್ಪ 2’ ಚಿತ್ರದ […]

Advertisement

Wordpress Social Share Plugin powered by Ultimatelysocial