ಅಂತಾರಾಜ್ಯ ಜಲ ವಿವಾದ ಕುರಿತು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಮಾಲೋಚನೆ!

ನವದೆಹಲಿ: ಅಂತಾರಾಜ್ಯ ಜಲ ವಿವಾದ ಕುರಿತು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಕಾನೂನು ತಜ್ಞರೊಂದಿಗೆ ಸಭೆ ನಡೆಯಿತು. ‌ನವದೆಹಲಿಯ ಕರ್ನಾಟಕ ಭವನದಲ್ಲಿ ಸಭೆ ನಡೆಸಿದ್ದು, ಸಚಿವರಾದ ಜೆ.ಸಿ.ಮಾಧುಸ್ವಾಮಿ, ಗೋವಿಂದ ಕಾರಜೋಳ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಸೇರಿದಂತೆ ಹಿರಿಯ ಕಾಣುತ್ತಿದ್ದರು ಸಭೆಯಲ್ಲಿ ಉಪಸ್ಥಿತರಿದ್ದರು.ಸಭೆಯಲ್ಲಿ ಕೃಷ್ಣಾ ಮತ್ತು ಕಾವೇರಿ ಕೊಳ್ಳದ ಜಲ ವ್ಯಾಜ್ಯಗಳ ಕುರಿತು ಕಾನೂನು ಹೋರಾಟಗಳ ಬಗ್ಗೆ ಮಹತ್ವದ ಸಮಾಲೋಚನೆ ನಡೆಸಲಾಯಿತು.ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆ ನೋಟಿಫಿಕೇಷನ್, ಮೇಕೆದಾಟು ವಿವಾದ, ನದಿ ಜೋಡಣೆ ಕುರಿತು ಕಾನೂನಾತ್ಮಕವಾಗಿ ರಾಜ್ಯ ಹೊಂದಬೇಕಾದ ನಿಲುವು ಸೇರಿದಂತೆ ಎಲ್ಲ ಆಯಾಮದಲ್ಲಿ ಚರ್ಚೆ ನಡೆಯಿತು ಎಂದು ತಿಳಿದುಬಂದಿದೆ.ಈ ನಡುವೆ ಚುನಾವಣಾ ಪ್ರಚಾರ ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ.ನಡ್ಡಾ ಅವರು, ಇಂದು ದೆಹಲಿಗೆ ವಾಪಸ್ಸಾಗುತ್ತಿದ್ದು, ಸಂಜೆ ವೇಳೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ನಡ್ಡಾ ಅವರನ್ನು ಭೇಟಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.ಜೆಪಿ ನಡ್ಡಾ ಭೇಟಿ ವೇಳೆ ರಾಜ್ಯ ರಾಜಕೀಯ ವಿಚಾರಗಳ ಕುರಿತಂತೆ ಚರ್ಚೆಗಳು ನಡೆಯಲಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಟ್ರಾಫಿಕ್ ಪೊಲೀಸರು ಕಡ್ಡಾಯವಾಗಿ ಬಾಡಿ ಕ್ಯಾಮೆರಾ ಧರಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.

Tue Feb 8 , 2022
ಬೆಂಗಳೂರು : ಟ್ರಾಫಿಕ್ ಪೊಲೀಸರು ಕಡ್ಡಾಯವಾಗಿ ಬಾಡಿ ಕ್ಯಾಮೆರಾ ಧರಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ. ಟ್ರಾಫಿಕ್ ಪೊಲೀಸರ ವಿರುದ್ಧ ಭ್ರಷ್ಟಾಚಾರ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆ ಬಾಡಿ ಕ್ಯಾಮೆರಾ ಧರಿಸುವಂತೆ ಟ್ರಾಫಿಕ್ ಪೊಲೀಸರಿಗೆ ಸೂಚನೆ ನೀಡಲಾಗಿದೆ .ಈ ಕುರಿತು ಹೈಕೋರ್ಟ್ ವಿಭಾಗಿಯ ಪೀಠ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದು, ಬೆಂಗಳೂರಿನಲ್ಲಿ ಸ್ಮಾರ್ಟ್ ಟ್ರಾಫಿಕ್ ನಿರ್ವಹಣೆ ಜಾರಿಗೊಳಿಸಿ ಕರ್ತವ್ಯದ ವೇಳೆ ಬಾಡಿ ಕ್ಯಾಮೆರಾ ಧರಿಸಲು ಸೂಚಿಸಬೇಕು ಎಂದು ಹೇಳಿದೆ.ಇನ್ನೂ, ಪೊಲೀಸ್ ಇಲಾಖೆಯಲ್ಲಿ ಇದುವರೆಗೆ […]

Advertisement

Wordpress Social Share Plugin powered by Ultimatelysocial