ಅತಂತ್ರ ವಿಧಾನಸಭೆ ನಿರೀಕ್ಷೆ ಬೆನ್ನಲ್ಲೇ ಮೈತ್ರಿಗೆ ಮುಂದಾದ ಮೇಘಾಲಯ ಸಿಎಂ,

ಕೊರ್ನಾಡ್ ಸಂಗ್ಮಾ

ತುರಾ (ಮೇಘಾಲಯ): ಮೇಘಾಲಯದಲ್ಲಿ ಸೋಮವಾರ ನಡೆದ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷ ಬಹುಮತ ಸಾಧಿಸುವ ಸಾಧ್ಯತೆ ಇಲ್ಲ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದ ಬೆನ್ನಲ್ಲೇ, ತನ್ನ ಹಳೆ ಮಿತ್ರ ಪಕ್ಷವಾದ ಬಿಜೆಪಿ ಜತೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಾಗಿ ಮೇಘಾಲಯ ಸಿಎಂ ಕೊರ್ನಾಡ್ ಸಂಗ್ಮಾ ಪ್ರಕಟಿಸಿದ್ದಾರೆ.

ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, ಸಂಗ್ಮಾ ಅವರ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‍ಪಿಪಿ) ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ.

ಸುಭದ್ರ ಸರ್ಕಾರ ಸ್ಥಾಪನೆ ನಿಟ್ಟಿನಲ್ಲಿ ತಮ್ಮ ಪಕ್ಷ ಎಲ್ಲ ಸಾಧ್ಯತೆಗಳನ್ನು ಮುಕ್ತವಾಗಿ ಇರಿಸಿಕೊಳ್ಳಲಿದೆ ಎಂದು ಸಂಗ್ಮಾ ಸ್ಪಷ್ಟಪಡಿಸಿದ್ದಾರೆ. ಕಳೆದ ಬಾರಿ ನಾವು ಗಳಿಸಿದ್ದಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಈ ಬಾರಿ ನಾವು ನಿರೀಕ್ಷಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಸುಭದ್ರ ಸರ್ಕಾರ ರಚನೆಯ ವಿಚಾರ ಬಂದಾಗ, ಪರಿಸ್ಥಿತಿಗೆ ಅನುಗುಣವಾಗಿ ರಾಜ್ಯದ ಹಿತಾಸಕ್ತಿಗೆ ಪೂರಕವಾಗುವಂತೆ ಹೆಜ್ಜೆ ಇಡುವ ಬಗ್ಗೆ ಪರಿಗಣಿಸುತ್ತಿದ್ದೇವೆ ಎಂದು ಎಎನ್‍ಐ ಜತೆ ಮಾತನಾಡಿದ ಅವರು ಸ್ಪಷ್ಟಪಡಿಸಿದರು.

ರಾಷ್ಟ್ರಮಟ್ಟದಲ್ಲಿ ಈಶಾನ್ಯ ರಾಜ್ಯಗಳಿಗೆ ಯಾವುದೇ ಪಕ್ಷ ಧ್ವನಿ ನೀಡುವುದಾದಲಿ ಆ ನಿಟ್ಟಿನಲ್ಲಿ ಎನ್‍ಪಿಪಿ ಕಾರ್ಯ ನಿರ್ವಹಿಸಲಿದೆ ಎಂದು ಎನ್‍ಡಿಟಿವಿ ಜತೆ ಮಾತನಾಡುವ ವೇಳೆ ಅಭಿಪ್ರಾಯಪಟ್ಟರು.

“ಅತಂತ್ರ ವಿಧಾನಸಭೆ ನಿರ್ಮಾಣವಾದಲ್ಲಿ ಸರ್ಕಾರ ರಚನೆ ಬಗ್ಗೆ ನಾವು ಮಾತುಕತೆ ನಡೆಸಬೇಕಾಗುತ್ತದೆ. ರಾಷ್ಟ್ರಮಟ್ಟದಲ್ಲಿ ಈಶಾನ್ಯ ರಾಜ್ಯಗಳಿಗೆ ಯಾವುದೇ ಪಕ್ಷ ಧ್ವನಿ ನೀಡುವುದಾದಲಿ ಆ ನಿಟ್ಟಿನಲ್ಲಿ ಎನ್‍ಪಿಪಿ ಕಾರ್ಯ ನಿರ್ವಹಿಸಲಿದೆ” ಎಂದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತಿಪ್ಪೇಸ್ವಾಮಿಗೆ ಟಿಕೆಟ್ ಕೊಡಲು ಶ್ರೀರಾಮುಲು ಯಾರು?

Tue Feb 28 , 2023
ಮೊಳಕಾಲ್ಮುರು: ಮಾಜಿ ಶಾಸಕ ಎಸ್‌. ತಿಪ್ಪೇಸ್ವಾಮಿ ಅವರನ್ನು ಬಿಜೆಪಿಗೆ ವಾಪಸ್‌ ಕರೆತಂದ ಸಚಿವ ಶ್ರೀರಾಮುಲು ಅವರ ಬಗ್ಗೆ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ, ಎಸ್‌ಟಿ ಮೋರ್ಚಾ ರಾಜ್ಯ ಸಮಿತಿ ಸದಸ್ಯ ಪ್ರಭಾಕರ ಮ್ಯಾಸನಾಯಕ ಅವರು ಮಾತನಾಡಿರುವ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ‘ಮಾಜಿ ಶಾಸಕ ತಿಪ್ಪೇಸ್ವಾಮಿ ಅವರನ್ನು ಪಕ್ಷಕ್ಕೆ ಕರೆತಂದು ಟಿಕೆಟ್ ಕೊಡುತ್ತೇನೆ ಎಂದು ಹೇಳಲು ಶ್ರೀರಾಮುಲು ಯಾರು ?. ಬಿಜೆಪಿಯನ್ನು ಬಿಎಸ್‌ಆರ್‌ ಕಾಂಗ್ರೆಸ್‌ ಪಾರ್ಟಿ ಎಂದು […]

Advertisement

Wordpress Social Share Plugin powered by Ultimatelysocial