ಕರ್ನಾಟಕಕ್ಕೆ ಇಲ್ಲ “ಮೇಕೆದಾಟು” ಯೋಜನೆ…!?

ಮೇಕೆದಾಟು ಯೋಜನೆ ಪ್ರಾರಂಭಕ್ಕೆ , ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ ಡಿಕೆಶಿ…!

ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಈ ಹಿಂದೆ ನೀರಾವರಿ ಸಚಿವರಾಗಿದ್ದವರು. ಅದಕ್ಕೆ ಸಂಬಂಧಿಸಿದ ಕಾನೂನು ಬಲ್ಲವರು. ಮೇಕೆದಾಟು ಯೋಜನೆಗೆ ಅಡ್ಡಿಪಡಿಸಲು ತಮಿಳುನಾಡಿಗೆ ಹಕ್ಕಿಲ್ಲ ಎಂದು ಅವರೆ ಹೇಳಿದ್ದಾರೆ. ಇದನ್ನೇ ನಾವು ಕೂಡ ಇಷ್ಟುದಿನಗಳಿಂದ ಹೇಳುತ್ತಾ ಬಂದಿದ್ದೇವೆ.ನೀವು ಮುಖ್ಯಮಂತ್ರಿಗಳಾದಾಗಿನಿಂದ ಈ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ, ಯಾಕೆ? ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿ ಕೂತಿರುವ ನೀವು ಕೃಷ್ಣ, ಮಹದಾಯಿ ಯೋಜನೆ ಕಾರ್ಯಾರಂಭ ಮಾಡಲು ಸಾಧ್ಯವಾಗುತ್ತಿಲ್ಲ, ಯಾಕೆ? ಎಂದು ಡಿಕೆ ಶಿವಕುಮಾರ್‌ ವಾಗ್ವಾದ ನಡೆಸಿದು.

ಕೃಷ್ಣ ವಿಚಾರದಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ. ಮೇಕೆದಾಟು ವಿಚಾರದಲ್ಲಿ ತಮಿಳುನಾಡಿನ ನೀರು, ಜಮೀನು, ಹಣ ಯಾವುದೂ ಬೇಕಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಇದೆ. ಕಾನೂನು ವ್ಯಾಪ್ತಿಯಲ್ಲಿ ಕೆಲಸ ಆರಂಭಿಸಬೇಡಿ ಎಂದು ನಾವ್ಯಾರೂ ಹೇಳಿಲ್ಲ. ಈ ಯೋಜನೆಗೆ ಬೇಕಾದ ಎಲ್ಲ ಅನುಮತಿ ತೆಗೆದುಕೊಂಡು, ಕಾರ್ಯರೂಪಕ್ಕೆ ತರಲು ಸಾಧ್ಯವಾಗುತ್ತಿಲ್ಲ ಯಾಕೆ? ಸದ್ಯ ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ನೀರಾವರಿ ವಿಚಾರಗಳು ಹಾಗೂ ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಮೇಕೆದಾಟು ಯೋಜನೆಗಳ ಕಾಮಗಾರಿ ಆರಂಭಿಸಲು ಬೇಕಾದ ಕಾರ್ಯಕ್ರಮ ರೂಪಿಸಲು ಸರ್ಕಾರಕ್ಕೆ 1 ತಿಂಗಳ ಗಡುವು ನೀಡುತ್ತೇವೆ. ಅಷ್ಟರಲ್ಲಿ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಿ.

ಸರ್ಕಾರ ನೀರಾವರಿ ಹಾಗೂ ಕುಡಿಯುವ ನೀರಿನ ವಿಚಾರದಲ್ಲಿ ವಿಳಂಬ ನೀತಿ ನಿಲ್ಲಿಸಿ, ಯೋಜನೆಗಳ ಕಾಮಗಾರಿ ಆರಂಭಿಸದಿದ್ದರೆ ನಾವು ಮುಂದಿನ ಹೋರಾಟ ನಡೆಸುತ್ತೇವೆ. ಮುಂದಿನ ದಿನಗಳಲ್ಲಿ ನಮ್ಮ ಹೋರಾಟ ಯಾವ ರೀತಿ ಇರಲಿದೆ ಎಂದು ಮುಂದೆ ತಿಳಿಸುತ್ತೇವೆ.ಇತ್ತೀಚೆಗೆ ಪ್ರತಿಭಟನೆಗೆ ಮುಂದಾದ ರೈತರನ್ನು ಮಾರ್ಗಮಧ್ಯದಲ್ಲೇ ತಡೆಹಿಡಿಯಲಾಗಿದೆ. ಅವರನ್ನು ತಡೆ ಹಿಡಿದಿದ್ದು ಏಕೆ? ಅವರು ಯಾವ ಅಪರಾಧ ಮಾಡಿದ್ದರು? ಪ್ರತಿಭಟನೆ ಮಾಡುವುದಾಗಿ ಮುಂಚಿತವಾಗಿ ಮಾಹಿತಿ ನೀಡಿದ್ದರೂ ಅವರನ್ನು ತಡೆದು, ಅವರ ಧ್ವನಿ ಹತ್ತಿಕ್ಕುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ. ಈ ವಿಚಾರವಾಗಿಯೂ ನಮ್ಮ ಮುಂದಿನ ಹೆಜ್ಜೆ ಬಗ್ಗೆ ಚರ್ಚಿಸುತ್ತೇವೆ ಎಂದು ಡಿಕೆ ಶಿವಕುಮಾರ್‌ ಸ್ಪಷ್ಟನೆ ನೀಡಿದರು.

Please follow and like us:

Leave a Reply

Your email address will not be published. Required fields are marked *

Next Post

200 ಕೋಟಿ ಜೀವನಾಂಶ ವಲ್ಲೆ ಅಂದ ಸ್ಯಾಮ್ - ಸೆಲ್ಫ್‌ ಮೇಡ್‌ ವುಮೆನ್‌..!

Mon Oct 4 , 2021
ಲವ್‌ ,ಈ ಪದ ಕೇಳುದ್ರೆ ರೊಮಾಂಚನ ಆಗುತ್ತೆ .ಇನ್ನು ನಾವು ಇಷ್ಟಪಟ್ಟು ಲವ್‌ ಮಾಡಿದವರನ್ನೇ  ಮದುವೆ ಆದರೆ ಬಾಯಿಗೆ ಬಂದು ಲಡ್ಡು ಬಿದ್ದಂತೆ. ಸ್ವರ್ಗಕ್ಕೆ ಮೂರೇ ಗೇನು .ಲವ್‌ ಮಾಡಿ ಮದುವೆ ಆದರೆ ಸಾಲದು ಆ ಪವಿತ್ರ ಭಾಂದವ್ಯವನ್ನ ಎಂತ ದುಸ್ತಿತಿ ಬಂದ್ರು ಉಳಿಸಿಕೊಂಡು ಮುಂದೊರೆಯುವ ತಾಕತ್ತು ಸಂಸಾರವೆನ್ನುವ ಬಂಡಿಯನ್ನು ಜೊಡೆತ್ತು ಸಾಗಿಸೊ ಹಾಗೆ ದಂಪತಿಗಳ ಪಯಣ ಸಾಗಬೇಕು. ಆದರೆ ಇತ್ತೀಚಿನ ದಿನಗಳಲ್ಲಿ  ಲವ್‌ ಅನ್ನೊದು ಜಸ್ಟ್‌ flirt .ಇನ್ನು […]

Advertisement

Wordpress Social Share Plugin powered by Ultimatelysocial