ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಫೆ. 28ರವರೆಗೆ ಅವಧಿ ವಿಸ್ತರಣೆ

 

 

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ‘ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ’, ‘ಶುಲ್ಕ ವಿನಾಯಿತಿ’, ‘ವಿದ್ಯಾಸಿರಿ-ಊಟ ಮತ್ತು ಸಹಾಯ ಯೋಜನೆ’ ಸೌಲಭ್ಯಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿ ಸಲ್ಲಿಸಲು 2022ರ ಫೆಬ್ರವರಿ 28ರವರೆಗೆ ಅವಧಿ ‌ವಿಸ್ತರಣೆ ಮಾಡಲಾಗಿದೆ.ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‍ಸೈಟ್ www.bcwd.karnataka.gov.in ಅನ್ನು ಸಂಪರ್ಕಿಸಬಹುದು ಹಾಗೂ ವೆಬ್‍ಸೈಟ್ www.ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2022ರ ಫೆಬ್ರವರಿ 28 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ದೂರವಾಣಿ ಸಂಖ್ಯೆ.: 8050770005, 8050770004, ಇಮೇಲ್‌: www.scholarship@karnataka.gov.in, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmetrichelpdesk@karnataka.gov.in ಹಾಗೂ ಸಹಾಯವಾಣಿ ಸಂಖ್ಯೆ: 080-35254757 ಹಾಗೂ ಸಹಾಯವಾಣಿ: 080-29787440 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಭವ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

OCEAN:ಸಾಗರಗಳಿಗೆ ವಿಪರೀತ ಶಾಖ ,ಅಧ್ಯಯನವು ಕಂಡುಹಿಡಿದಿದೆ;

Wed Feb 2 , 2022
2014 ರಿಂದ ಸಮುದ್ರದ ಮೇಲ್ಮೈಯ ಅರ್ಧಕ್ಕಿಂತ ಹೆಚ್ಚು ಭಾಗವು ಐತಿಹಾಸಿಕ ಶಾಖದ ವಿಪರೀತ ಮಿತಿಯನ್ನು ನಿಯಮಿತವಾಗಿ ಮೀರಿದೆ ಎಂದು ಹೊಸ ಅಧ್ಯಯನವು ಕಂಡುಹಿಡಿದಿದೆ. ಈ ಸಂಶೋಧನೆಯನ್ನು ‘PLOS ಕ್ಲೈಮೇಟ್ ಜರ್ನಲ್’ ನಲ್ಲಿ ಪ್ರಕಟಿಸಲಾಗಿದೆ. ಮತ್ತು ಹವಳದ ಬಂಡೆಗಳು, ಸೀಗ್ರಾಸ್ ಹುಲ್ಲುಗಾವಲುಗಳು ಮತ್ತು ಕೆಲ್ಪ್ ಕಾಡುಗಳು ಸೇರಿದಂತೆ ನಿರ್ಣಾಯಕ ಸಮುದ್ರ ಪರಿಸರ ವ್ಯವಸ್ಥೆಗಳ ಕುಸಿತದ ಅಪಾಯವನ್ನು ಹೆಚ್ಚಿಸುವ ಈ ಶಾಖದ ವಿಪರೀತಗಳ ಅಪಾಯವನ್ನು ಹೆಚ್ಚಿಸುತ್ತದೆ – ಅವುಗಳ ರಚನೆ ಮತ್ತು ಕಾರ್ಯವನ್ನು […]

Advertisement

Wordpress Social Share Plugin powered by Ultimatelysocial