ತಾಯಿ, ಮಗು ದುರ್ಮರಣ.

ಬೆಂಗಳೂರ: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ರಾಡುಗಳು ರಸ್ತೆಗೆ ಉರುಳಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ತಾಯಿ, ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ನಡೆದಿದೆ. ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಆದರೆ ರಸ್ತೆಯಲ್ಲಿ ಪತಿ, ಪತ್ನಿ ಹಾಗೂ ಮಗು ಬೈಕ್‍ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮೇಲೆ ಕಬ್ಬಿಣದ ಪಿಲ್ಲರ್‌ಗಳು ಬಿದ್ದಿದೆ . ಇದರ ಪರಿಣಾಮವಾಗಿ ಮಗು ಹಾಗೂ ಪತ್ನಿಯ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ತಾಯಿ, ಮಗು ಸಾವನ್ನಪ್ಪಿದ್ದಾರೆ. ಮೃತರನ್ನು ತೇಜಸ್ವಿನಿ (28) ಎರಡೂವರೆ ವರ್ಷದ ವಿಹಾನ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಡಿ.ಕೆ ಶಿವಕುಮಾರ್ ಹೇಳಿಕೆ

Tue Jan 10 , 2023
ಈಗ ಕಾಂಗ್ರೆಸ್ ಪಕ್ಷದ ವಿಜಯ ಪರ್ವ ಆರಂಭವಾಗಿದೆ ಕಾಂಗ್ರೆಸ್ ಜನರ ಭಾವನೆಯನ್ನ ತಿಳಿಸಬೇಕು ಅಂತಾ ಎರಡೂವರೆ ವರ್ಷದಿಂದ ಪ್ರಯತ್ನಿಸಿದ್ದೆವು ಪ್ರಜಾಧ್ವನಿ ಪ್ರಜೆಗಳ ಧ್ವನಿ, ಪ್ರಜೆಗಳ ಭಾವನೆ ನಾವು ಸಕಾರಾತ್ಮಕವಾಗಿ ಯೋಚಿಸುತ್ತಿದ್ದೇವೆ ಮೂರೂವರೆ ವರ್ಷ ಬಿಜೆಪಿ ಸರ್ಕಾರ ಯಾವುದರಲ್ಲಿ ವಿಫಲವಾಗಿದೆ ಎಂಬುದನ್ನ ಜನರಿಗೆ ತಿಳಿಸಬೇಕಿದೆ.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial