ಶೀಘ್ರದಲ್ಲಿಯೇ ತಮಿಳುನಾಡು ಕರ್ನಾಟಕ ನಡುವೆ ಮೆಟ್ರೊ ಸಂಚಾರ!

(ನ್ಯೂಸ್ ಕಡಬ) ಬೆಂಗಳೂರು,ಫೆ.21. ಹೊಸೂರು ಮತ್ತು ಬೆಂಗಳೂರು ನಡುವೆ ಮೆಟ್ರೊ ಸಂಪರ್ಕ ಕಲ್ಪಿಸುವಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಚೆನ್ನೈ ಮೆಟ್ರೊ ರೈಲು ನಿಗಮವು ಬೊಮ್ಮಸಂದ್ರದಿಂದ ರೈಲು ಸಂಪರ್ಕ ನಿರ್ಮಾಣಕ್ಕೆ ಕಾರ್ಯಸಾಧ್ಯತೆ ಅಧ್ಯಯನ ನಡೆಸಲು ಅನುಮತಿ ಕೋರಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿದೆ.

ಸಚಿವಾಲಯ ಪ್ರಸ್ತಾವನೆಯನ್ನು ಅನುಮೋದಿಸಿದ ನಂತರ ಸಿಎಂಆರ್‌ಎಲ್‌, ಹೊಸೂರಿನಿಂದ ಕರ್ನಾಟಕದ ಬೊಮ್ಮಸಂದ್ರದವರೆಗಿನ 20.5 ಕಿ.ಮೀ. ಉದ್ದದ ಮೆಟ್ರೊ ರೈಲು ಸಂಪರ್ಕದ ನಿರ್ಮಾಣದ ಅಧ್ಯಯನ ನಡೆಸಲು ಟೆಂಡರ್‌ ಕರೆಯಲಿದೆ. ತಮಿಳುನಾಡು ಸರಕಾರ ಸಿಎಂಆರ್‌ಎಲ್‌ಗೆ 75 ಲಕ್ಷ ರೂಪಾಯಿ ಮಂಜೂರು ಮಾಡಿ ಕಾರ್ಯ ಸಾಧ್ಯತೆ ಅಧ್ಯಯನ ನಡೆಸುವಂತೆ ಸೂಚಿಸಿತ್ತು. ಬಿಎಂಆರ್‌ಸಿಎಲ್‌ಗೆ ಈ ಮೆಟ್ರೊ ಯೋಜನೆಯನ್ನು ಬೊಮ್ಮಸಂದ್ರದಿಂದ ಹೊಸೂರುವರೆಗೆ ವಿಸ್ತರಿಸಲು ಕರ್ನಾಟಕ ಸರಕಾರವು ಈಗಾಗಲೇ ಅನುಮೋದನೆ ನೀಡಿ 2022 ರಲ್ಲಿ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಿತ್ತು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೆ. ಎಸ್. ಎಲ್. ಸ್ವಾಮಿ ನಿರ್ಮಾಪಕ.

Tue Feb 21 , 2023
ಕೆ. ಎಸ್. ಎಲ್. ಸ್ವಾಮಿ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಗಾಯಕರಾಗಿ, ಕೆಲವೊಮ್ಮೆ ನಟರಾಗಿ, ಚಿತ್ರಸಾಹಿತಿಗಳಾಗಿ, ಜೊತೆಗೆ ಕನ್ನಡ – ಸಂಸ್ಕೃತ ವಿದ್ವಾಂಸರಾಗಿ ಕನ್ನಡ ಚಿತ್ರರಂಗದಲ್ಲಿ ವಿಶಿಷ್ಟರಾಗಿದ್ದವರು. ಕಿಕ್ಕೇರಿ ಶಾಮಣ್ಣ ಲಕ್ಷ್ಮೀನರಸಿಂಹಸ್ವಾಮಿ ಅವರು 1939ರ ಫೆಬ್ರವರಿ 21ರಂದು ಮೈಸೂರಿನಲ್ಲಿ ಜನಿಸಿದರು. ಅವರದ್ದು ಸಂಪ್ರದಾಯಸ್ಥ ಪುರೋಹಿತರ ಮನೆ. ಮೈಸೂರಿನಲ್ಲಿಯೇ ವಿದ್ಯಾರ್ಜನೆ ನಡೆಯಿತು. ವಿಜ್ಞಾನ ಪದವೀಧರರಾಗುವ ಮೊದಲೇ ಅವರಲ್ಲಿ ಚಿತ್ರರಂಗದ ಕುರಿತು ಒಲವು-ಆಕರ್ಷಣೆಗಳು ಮೂಡಿದ್ದವು.ಸ್ವಾಮಿ ಅವರು ‘ರತ್ನಮಂಜರಿ’ ಚಿತ್ರದಲ್ಲಿ ಸಣ್ಣ ಪಾತ್ರವೊಂದರ ನಿರ್ವಹಣೆ ಮಾಡಿ ಚಿತ್ರರಂಗ […]

Advertisement

Wordpress Social Share Plugin powered by Ultimatelysocial