ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಸಚಿವ ಜೋಶಿ ಸಂತಾಪ: ಕಂಬನಿ ಮೀಡಿದ ಕೇಂದ್ರ ಸಚಿವ.

ಹುಬ್ಬಳ್ಳಿ: ನಡೆದಾಡುವ ದೇವರೆಂದೇ ಕರೆಯಲ್ಪಡುವ ಜ್ಞಾನ ಯೋಗಾಶ್ರಮದ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಅವರು ಇಹಲೋಕ ತ್ಯಜಿಸಿರುವ ಸಂಗತಿ ನಿಜಕ್ಕೂ ಊಹಿಸಲು ಅಸಾದ್ಯ. ಎರಡು ದಿನಗಳ ಹಿಂದೆಯಷ್ಟೇ ಅವರ ಯೋಗಕ್ಷೇಮ ವಿಚಾರಿಸಿಕೊಂಡು ಬಂದಿದ್ದೆ. ಪ್ರಧಾನಿ ನರೇಂದ್ರ ಮೋದಿಯವರೂ ಸಹ ಸ್ವಾಮೀಜಿಗಳ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸಿದ್ದರು. ಇಷ್ಟು ಬೇಗ ನಮ್ಮನ್ನೆಲ್ಲ ಬಿಟ್ಟುಹೋಗಿರುವುದು ನಿಜಕ್ಕೂ ಶೋಚನೀಯ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ತಮ್ಮ ದುಃಖ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪಬ್ಲಿಕ್ ನೆಕ್ಸ್ಟ್ ಗೆ ಮಾಹಿತಿ ನೀಡಿರುವ ಅವರು, ಸ್ವಾಮೀಜಿಗಳು ನೀಡಿರುವ ಜ್ಞಾನದ ಬೆಳಕು, ತೋರಿರುವ ಹಾದಿ ನಮಗೆಲ್ಲಾ ಸಾರ್ಥಕ ಬದುಕು ನಡೆಸಲು ಪ್ರೇರಕ ಶಕ್ತಿಯಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು. ಶ್ರೀಗಳ ಆಶೀರ್ವಾದ ನಮ್ಮೆಲ್ಲರ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ. ಅವರ ದಿವ್ಯಾತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜಾಪು ರ ಜಿಲ್ಲೆ ಮತ್ತು ತಾಲೂಕು ವರದಿಗಾರ ಇಲ್ಲ ಏನ ಸರ್ ಅಲ್ಲಿ ಯಾರು

Tue Jan 3 , 2023
ಸಿದ್ದೇಶ್ವರ ಶ್ರೀಗಳು ದೈವಾಧೀನ.. ನುಡಿದಂತೆ ನಡೆದ, ಸಾವಿನಲ್ಲೂ ಸರಳತೆ ಸಾರಿದ ಸಂತ.. ಶರಣರ ಗುಣವನ್ನು ಮರಣದಲ್ಲಿ ಕಾಣು.. ಜ್ಞಾನಯೋಗಿಯ ಅಂತಿಮ ಇಚ್ಛೆ.. 1. ದೇಹವನ್ನ ಭೂಮಿಯಲ್ಲಿಡುವ ಬದಲಾಗಿ ಅಗ್ನಿಯಾರ್ಪಿತ ಮಾಡುವುದು. 2. ಶ್ರಾದ್ಧಿಕ ವಿಧಿವಿಧಾನಗಳು ಅನಗತ್ಯ. 3. ಚಿತಾಭಸ್ಮವನ್ನು ನದಿ ಅಥವಾ ಸಾಗರದಲ್ಲಿ ವಿಸರ್ಜಿಸಿ. 4. ಯಾವುದೇ ಬಗೆಯ ಸ್ಮಾರಕ ನಿರ್ಮಿಸಲಾಗದು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial