ಬಿಜೆಪಿ ತೊರೆದು ಆದ್ಮಿ ಪಾರ್ಟಿ ಸೇರಿದ ಶಾಸಕಿ ಅಲಿನಾ ಸಲ್ದಾನಾ

ಗೋವಾದ ಮಾಜಿ ಸಚಿವೆ ಮತ್ತು ಎರಡು ಬಾರಿಯ ಶಾಸಕಿ ಅಲಿನಾ ಸಲ್ದಾನಾ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿ, ರಾಷ್ಟ್ರ ರಾಜಧಾನಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿ ಸೇರಿದ್ದಾರೆ. ಇದು ರಾಜ್ಯ ಬಿಜೆಪಿ ಪಾಲಿಗೆ ಆಘಾತಕಾರಿ ಬೆಳವಣಿಗೆಯಾಗಿದೆ.ಪ್ರಸಕ್ತ ವಿಧಾನಸಭಾ ಅವಧಿಯಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ಮೊದಲ ಶಾಸಕಿ ಇವರಾಗಿದ್ದಾರೆ. ಈ ಬೆಳವಣಿಗೆಗೆ ಕ್ಷಿಪ್ರವಾಗಿ ಸ್ಪಂದಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಸದಾನಂದ ಶೇಟ್ ತಾನಾವಡೆ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಸಲ್ದಾನಾ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದಾರೆ. “ಶಾಸಕಿ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಸಲಾಗುವುದು” ಎಂದು ಪ್ರಕಟಿಸಿದ್ದಾರೆ.

ರವಿವಾರ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಕಾರ್ಯಕ್ರಮವಿದ್ದು, ಈ ಸಂಬಂಧ ಕಾರ್ಯಯೋಜನೆಗಳನ್ನು ರೂಪಿಸಲು ಬುಧವಾರ ಸಂಜೆ ನಡೆಸಿದ ಸಭೆಯಲ್ಲಿ ಪಾಲ್ಗೊಂಡಿದ್ದ ಸಲ್ಡಾನಾ, ಸ್ಪೀಕರ್ ಕಚೇರಿಗೆ ಯಾವುದೇ ಮಾಹಿತಿ ನೀಡದೇ ತಮ್ಮ ರಾಜೀನಾಮೆ ಪತ್ರವನ್ನು ಶಾಸಕಾಂಗ ಕಾರ್ಯದರ್ಶಿಗಳಿಗೆ ನೀಡಿದ್ದಾರೆ. ಸ್ಪೀಕರ್ ರಾಜೇಶ್ ಪಠಾಣ್‌ ಕರ್ ಇನ್ನೂ ರಾಜೀನಾಮೆಯನ್ನು ಸ್ವೀಕರಿಸಿಲ್ಲ.ಮೌಲಿಕ ಕಾರಣಕ್ಕಾಗಿ ನಾನು ರಾಜೀನಾಮೆ ನೀಡಿದ್ದೇನೆ. ಪಕ್ಷ ಬಹುಶಃ ಎಲ್ಲ ತತ್ವಗಳನ್ನು ಮರೆತಿದೆ ಹಾಗೂ ರಾಜ್ಯದ ಸ್ಥಿತಿ ದಯನೀಯವಾಗಿದೆ. ಪಕ್ಷಕ್ಕೆ ಯಾರು ಬರುತ್ತಿದ್ದಾರೆ ಹಾಗೂ ಪಕ್ಷದಿಂದ ಯಾರು ಹೊರಹೋಗುತ್ತಿದ್ದಾರೆ ಎನ್ನುವುದು ಯಾರಿಗೂ ತಿಳಿದಿಲ್ಲ” ಎಂದು ಸಲ್ದಾನಾ ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಅತ್ಯಾಚಾರ ಬಗ್ಗೆ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ವಿವಾದಾತ್ಮಕ ಹೇಳಿಕೆಗೆ :ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾತೀವ್ರ ವಾಗ್ದಾಳಿ

Fri Dec 17 , 2021
  ಅತ್ಯಾಚಾರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಅತ್ಯಂತ ದುಃಖಕರ, ದುರದೃಷ್ಟದ ಹೇಳಿಕೆಯಾಗಿದೆ.ದೇಶವು ಇನ್ನೂ ಸ್ತ್ರೀದ್ವೇಷ ಹೊಂದಿರುವ ಸಾರ್ವಜನಿಕ ಪ್ರತಿನಿಧಿಗಳನ್ನು ಹೊಂದಿದೆ ಎಂದಿದ್ದಾರೆ.ಅತ್ಯಾಚಾರ ತೆಡಯಲು ಸಾಧ್ಯವಾಗದಿದ್ದಾಗ ಮಲಗಿ ಆನಂದಿಸಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಗುರುವಾರ ಸದನದಲ್ಲಿ ನೀಡಿದ್ದ ಹೇಳಿಕೆ ರಾಷ್ಟ್ರದಾದ್ಯಂತ ತೀವ್ರ […]

Advertisement

Wordpress Social Share Plugin powered by Ultimatelysocial