ಮೊಬೈಲ್ ನಲ್ಲಿ ಕೇಂದ್ರ ಬಜೆಟ್-2022; ಡೌನ್ ಲೋಡ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ…

ನವದೆಹಲಿ: ಈ ಬಾರಿಯ ಬಜೆಟ್ ಕೂಡ ಡಿಜಿಟಲ್ ಆಗಲಿದ್ದು ಪ್ರತಿ ಬಜೆಟ್ ಮಾಹಿತಿಯೂ ಜನಸಾಮಾನ್ಯರಿಗೆ ಸುಲಭವಾಗಿ ಸಿಗುವಂತೆ ಮಾಡಲು ಸರ್ಕಾರ ಆಯಪ್ ಬಿಡುಗಡೆ ಮಾಡಿದೆ.ಬಜೆಟ್ ಮಾಹಿತಿಯು ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಲು ಸರ್ಕಾರವು ಈ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ.ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಸಂಪೂರ್ಣ ಬಜೆಟ್ ಅನ್ನು ವೀಕ್ಷಿಸಲು ಈ ಅಪ್ಲಿಕೇಶನ್ ನಿಂದ ಸಾಧ್ಯವಾಗಲಿದೆ.ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದ ಸಾಮಾನ್ಯ ಬಜೆಟ್ ಅನ್ನು ಬೆಳಗ್ಗೆ 11 ಗಂಟೆಗೆ ಮಂಡಿಸಲಿದ್ದಾರೆ. ಬಜೆಟ್ ಮಂಡನೆ ಬಳಿಕ ಈ ಆಯಪ್ ಮೂಲಕ ಜನ ಸಾಮಾನ್ಯರು ತಮ್ಮ ಮೊಬೈಲ್ ನಲ್ಲಿ ಅವರದೇ ಭಾಷೆಯಲ್ಲಿ ಓದಬಹುದಾಗಿದೆ. ಮೊಬೈಲ್ ಅಪ್ಲಿಕೇಶನ್‌ನಲ್ಲಿ ಜನರು ಕೇಂದ್ರ ಬಜೆಟ್‌ಗೆ ಸಂಬಂಧಿಸಿದ ಎಲ್ಲ ಮಾಹಿತಿಗಳು ದೊರೆಯಲಿದೆ. ಈ ಬಜೆಟ್ ಅನ್ನು ಜನರಿಗೆ ಸುಲಭವಾಗಿ ತಲುಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕ್ರಮಕೈಗೊಂಡಿದೆ.

ಆಯಪ್ ಡೌನ್‌ಲೋಡ್ ಮಾಡುವುದು ಹೇಗೆ?

ಬಳಕೆದಾರರು https://indiabudget.gov.in ನಿಂದ ಡೌನ್‌ಲೋಡ್ ಮಾಡಬಹುದು. ಇದರ ಹೊರತಾಗಿ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು. ಇದರೊಂದಿಗೆ ಡಿಜಿಟಲ್ ಪಾರ್ಲಿಮೆಂಟ್ ಆಯಪ್ ಮೂಲಕ ಮೊಬೈಲ್‌ನಲ್ಲಿ ಬಜೆಟ್ 2022 ಅನ್ನು ಲೈವ್ ಆಗಿ ವೀಕ್ಷಿಸಲು ಸಾಧ್ಯವಾಗಲಿದೆ. ಇದು ಬಜೆಟ್‌ಗೆ ಸಂಬಂಧಿಸಿದ ಮಾಹಿತಿ ನೀಡುವ ಮತ್ತೊಂದು ಅಪ್ಲಿಕೇಶನ್ ಆಗಿದೆ. ಸಂಸತ್ತಿನ ಉಭಯ ಸದನಗಳ ಕಲಾಪಗಳನ್ನು ಡಿಜಿಟಲ್ ಪಾರ್ಲಿಮೆಂಟ್ ಆಯಪ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದ. ಅಂದರೆ, ಈ ಅಪ್ಲಿಕೇಶನ್‌ನಲ್ಲಿ ನೀವು ಸಾಮಾನ್ಯ ಬಜೆಟ್ ಅನ್ನು ಲೈವ್ ಆಗಿ ವೀಕ್ಷಿಸಲು ಸಾಧ್ಯವಾಗಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಈ ಬಾರಿಯು ಸಾಂಪ್ರದಾಯಿಕ 'ಬಹಿ ಖಾತಾ' ಬದಲು ಟ್ಯಾಬ್​ ಮೂಲಕ ಬಜೆಟ್​ ಮಂಡಿಸಲಿರುವ ವಿತ್ತ ಸಚಿವೆ

Tue Feb 1 , 2022
ನವದೆಹಲಿ: ಕರೊನಾ ಸಂಕಷ್ಟದ ನಡುವೆಯೂ ಮಂಡನೆಯಾಗಲಿರುವ 2022ನೇ ಸಾಲಿನ ಬಜೆಟ್​ ಮೇಲೆ ಜನರ ನಿರೀಕ್ಷೆ ಹೆಚ್ಚಾಗಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಬಜೆಟ್​ ಮಂಡನೆ ತುಂಬಾ ವಿಶಿಷ್ಟವಾಗಿದ್ದು, ಕಳೆದ ಬಾರಿಯಂತೆ ‘ಬಹಿ ಖಾತಾ’ ಸಂಪ್ರದಾಯವನ್ನು ಬದಿಗಿಟ್ಟು ಟ್ಯಾಬ್​ ಮೂಲಕ ಆಯವ್ಯಯ ಮಂಡನೆ ಮಾಡಲಿದ್ದಾರೆ.ಇಂದೆಲ್ಲ ಬಜೆಟ್​ ಪ್ರತಿಗಳಿದ್ದ ಸೂಟ್​ಕೇಸ್ ಹಿಡಿದುಕೊಂಡು ಸಂಸತ್ತಿಗೆ ಆಗಮಿಸಲಾಗುತ್ತಿತ್ತು. ಸೂಟ್​ಕೇಸ್​ ವಿದೇಶಿ ಸಂಸ್ಕೃತಿ ಆಗಿದ್ದರಿಂದ ಅದಕ್ಕೆ […]

Advertisement

Wordpress Social Share Plugin powered by Ultimatelysocial