ಮೊಬೈಲ್‌ ಕಳ್ಳನಿಗೆ ತೂಗು ಹಾಕಿ ಹಿಂಸೆ ನೈತಿಕ ಪೊಲೀಸ್‌ ಗಿರಿ ಮೆರೆದ ಸಹ ಮೀನುಗಾರರು

ಮೀನುಗಾರರೋರ್ವರನ್ನು ತೂಗು ಹಾಕಿ ದೌರ್ಜನ್ಯ ಎಸಗಿದ ಘಟನೆ ಮಂಗಳೂರು ನಗರದ ಬಂದರ್ ದಕ್ಕೆಯಲ್ಲಿ‌‌ ಬೆಳಕಿಗೆ ಬಂದಿದೆ. ಮೊಬೈಲ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೀನುಗಾರನೊಬ್ಬನನ್ನು ಇತರ ಮೀನುಗಾರ ಕಾರ್ಮಿಕರೇ ಕಾಲು ಕಟ್ಟಿ ತೂಗು ಹಾಕಿ‌ ಹಿಂಸಿಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯನ್ನು ಆಂಧ್ರಪ್ರದೇಶ‌ ಮೂಲದ ಬೆಸ್ತ ಸಮುದಾಯದ ವೈಲ ಶೀನು ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಾಹಿತಿ ಅರಿತ ಮಂಗಳೂರು ನಗರದ ಪೊಲೀಸ್ ಕಮಿಷನರ್ ಶಶಿಕುಮಾರ್ ಪ್ರತಿಕ್ರಿಯಿಸಿದ್ದು, ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿದೆ. ದೌರ್ಜನ್ಯ ಎಸಗಿದ ಆರೋಪಿಗಳ ವಿರುದ್ಧ ಕೇಸ್ ದಾಖಲಿಸಲು ಪಾಂಡೇಶ್ವರ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಅದರಂತೆ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರಿ ಉರ್ದು ಶಾಲೆಗಳ ಜಾಗದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆ ಪ್ರಾರಂಭ : ಸಿಎಂ ಬೊಮ್ಮಾಯಿ

Thu Dec 23 , 2021
ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರ ಪ್ರಶ್ನೆಗೆ ಉತ್ತರಿಸಿ,ಮಾತನಾಡಿದರು. ಶಾಲೆಗಳಿಂದ ಹೊರಗುಳಿದ ಅಲ್ಪಸಂಖ್ಯಾತರ ಮಕ್ಕಳನ್ನು ಮರಳಿ ಶಾಲೆಗೆ ತರಲು ಈಗಾಗಲೇ ಮುಚ್ಚಲ್ಪಟ್ಟ ಸರ್ಕಾರಿ ಉರ್ದು ಶಾಲೆಗಳ ಜಾಗದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಿ ಕಾರ್ಯನಿರ್ವಹಿಸಲಾಗುತ್ತಿದೆ. ಹೊಸದಾಗಿ ಶಾಲೆಗಳನ್ನು ಪ್ರಾರಂಭಿಸಲು ಜನಪ್ರತಿನಿಧಿಗಳಿಂದ ಪ್ರಸ್ತಾವನೆಗಳು ಬಂದಿವೆ. ಇವುಗಳ ಕಾರ್ಯಸಾಧ್ಯತೆಗಳನ್ನು ಪರಿಶೀಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸದಾಗಿ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು […]

Advertisement

Wordpress Social Share Plugin powered by Ultimatelysocial