ಭಾರತೀಯ ಬಾಹ್ಯಾಕಾಶ ಸಂಘಕ್ಕೆ ಪ್ರದಾನಿ ಮೋದಿ ಚಾಲನೆ

 ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾರತೀಯ ಬಾಹ್ಯಾಕಾಶ ಸಂಘಕ್ಕೆ ಚಾಲನೆ ನೀಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ಪ್ರಧಾನಿ ಮೋದಿ ಬಾಹ್ಯಾಕಾಶ ಕ್ಷೇತ್ರದ ಉದ್ಯಮಿಗಳೊಂದಿಗೆ ಸಂವಾದ ನಡೆಸಿದ್ದಾರೆಪ್ರಧಾನ ಮಂತ್ರಿಯವರ ಆತ್ಮನಿರ್ಭರ ಭಾರತ ದೃಷ್ಟಿಕೋನವನ್ನು ಪ್ರತಿಧ್ವನಿಸುವ .ಎಸ್.ಪಿ.. ಭಾರತವನ್ನು ಸ್ವಾವಲಂಬಿ, ತಾಂತ್ರಿಕವಾಗಿ ಮುಂದುವರಿದ ಹಾಗೂ ಬಾಹ್ಯಾಕಾಶ ರಂಗದಲ್ಲಿ ಪ್ರಮುಖ ಪ್ಲೇಯರ್ಆಗಿ ಮಾಡಲು ಸಹಾಯ ಮಾಡುತ್ತದೆ ಎಂದು ಬಗ್ಗೆ ಅಧಿಕೃತ ಹೇಳಿಕೆ ನೀಡಿದ ಪ್ರಧಾನ ಮಂತ್ರಿಗಳ ಕಚೇರಿ ತಿಳಿಸಿದೆ.

ಐಎಸ್ಪಿಎ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ಮೂಲಕ ತಿಳಿಸಿದ್ದು ನಾನು ಭಾರತೀಯ ಬಾಹ್ಯಾಕಾಶ ಅಸೋಸಿಯೇಷನ್ ಪ್ರಾರಂಭಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದೇನೆ. ಸಂದರ್ಭ ಕ್ಷೇತ್ರದ ಪ್ರಮುಖ ಪಾಲುದಾರರ ಜೊತೆಗೆ ಸಂವಹನ ನಡೆಸಲು ಸಿಕ್ಕಿದ್ದು ನನಗೆ ಸಂತೋಷವಾಗಿದೆ. ಬಾಹ್ಯಾಕಾಶ ಹಾಗೂ ನಾವೀನ್ಯತೆಯ ಜಗತ್ತಿನಲ್ಲಿ ಆಸಕ್ತಿ ಇದ್ದವರು ನಾಳಿನ ಕಾರ್ಯಕ್ರಮವನ್ನು ವೀಕ್ಷಿಸಬೇಕು ಎಂದು ಹೇಳಿದ್ದರು.. ಐಎಸ್ಪಿಎ ಭಾರತೀಯ ಬಾಹ್ಯಾಕಾಶ ಉದ್ಯಮದ ಸಾಮೂಹಿಕ ಧ್ವನಿಯಾಗಲು ಬಯಸುವ ಬಾಹ್ಯಾಕಾಶ ಹಾಗೂ ಉಪಗ್ರಹ ಕಂಪೆನಿಗಳ ಪ್ರಮುಖ ಉದ್ಯಮ ಸಂಘವಾಗಿದೆ  ಎಂದು ಪ್ರಧಾನ ಮಂತ್ರಿಗಳ ಕಚೇರಿ ತಿಳಿಸಿದೆ.

 

Please follow and like us:

Leave a Reply

Your email address will not be published. Required fields are marked *

Next Post

ಶೀಘ್ರವೇ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ;ಸಚಿವ ಸಿ.ಸಿ.ಪಾಟೀಲ್‌

Mon Oct 11 , 2021
ರಾಜ್ಯದ ಕೆಲವೆಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಹದಗೆಟ್ಟಿರುವುದು ತಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ಕಾಲಮಿತಿಯೊಳಗೆ ತುರ್ತಾಗಿ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕೆಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು ರಾಷ್ಟ್ರೀಯ ಹೆದ್ದಾರಿ ನಿರ್ವಹಣಾಧಿಕಾರಿಗಳಿಗೆ ಗಡುವು ನೀಡಿದ್ದಾರೆ.. ವಿಕಾಸಸೌಧದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕೈಗೊಂಡಿರುವ ಕೆಲಸ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದ ಬಳಿಕ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಈ ಬಾರಿ ಮಳೆಯ ಪರಿಣಾಮದಿಂದಾಗಿ ಪೂನಾ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯೂ ಸೇರಿದಂತೆ ಹಲವು ಹೆದ್ದಾರಿಗಳಲ್ಲಿ ಗುಂಡಿಗಳು ನಿರ್ಮಾಣವಾಗಿ ವಾಹನ […]

Advertisement

Wordpress Social Share Plugin powered by Ultimatelysocial