ದೇಶದಲ್ಲಿ ಪ್ರತಿದಿನ 20 ಸಾವಿರ ಕೋಟಿ ರೂಪಾಯಿ ಮೌಲ್ಯದ ಡಿಜಿಟಲ್ ವಹಿವಾಟು ನಡೆಯುತ್ತಿದೆ !

 

ನವದೆಹಲಿ, ಏ.24- ದೇಶದಲ್ಲಿ ಪ್ರತಿದಿನ 20 ಸಾವಿರ ಕೋಟಿ ರೂಪಾಯಿ ಮೌಲ್ಯದ ಡಿಜಿಟಲ್ ವಹಿವಾಟು ನಡೆಯುತ್ತಿದೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತಮ್ಮ ಮಾಸಿಕ ಮನ್ ಕಿ ಬಾತ್ ರೇಡಿಯೊ ಸರಣಿಯಲ್ಲಿ ಮಾತನಾಡಿದ ಅವರು, ಸಣ್ಣ ಆನ್‍ಲೈನ್ ಪಾವತಿಗಳು ದೊಡ್ಡ ಡಿಜಿಟಲ್ ಆರ್ಥಿಕತೆ ನಿರ್ಮಿಸಲು ಸಹಾಯ ಮಾಡುತ್ತಿವೆ.

ಈ ವಲಯದಲ್ಲಿ ಅನೇಕ ಹೊಸ ಫಿನ್‍ಟೆಕ್ ಸ್ಟಾರ್ಟ್-ಅಪ್‍ಗಳು ಬರಲಿವೆ.

ಸರ್ಕಾರ ಕುಡ ಸೌಲಭ್ಯಗಳನ್ನು ಹೆಚ್ಚಿಸುವುದಲ್ಲದೆ, ಆನ್ ವಹಿವಾಟಿನಲ್ಲಿ ಪ್ರಾಮಾಣಿಕತೆ ವಾತಾವರಣ ನಿರ್ಮಾಣ ಮಾಡಲು ಪ್ರಯತ್ನಿಸುತ್ತಿದೆ ಎಂದರು. ಡಿಜಿಟಲ್ ಪಾವತಿಗಳು ಮತ್ತು ಸಾರ್ಟ್ ಅಪ್ ಕುರಿತಂತೆ ತಮ್ಮ ಅನುಭವಗಳನ್ನು ಜನರು ಇತರರೊಂದಿಗೆ ಹಂಚಿಕೊಳ್ಳಬೇಕು. ನಿಮ್ಮ ಅನುಭವಗಳು ದೇಶದ ಇತರರಿಗೆ ಸೂರ್ತಿಯ ಮೂಲವಾಗಬಹುದು ಎಂದು ಹೇಳಿದರು.

ನಮ್ಮ ದೇಶದಲ್ಲಿ ಪ್ರಸ್ತುತ ಪ್ರತಿದಿನ 20 ಸಾವಿರ ಕೋಟಿ ರೂಪಾಯಿ ಮೌಲ್ಯದ ಡಿಜಿಟಲ್ ವಹಿವಾಟು ನಡೆಯುತ್ತಿದೆ. ಮಾರ್ಚ್‍ನಲ್ಲಿ ಯುಪಿಐ (ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್) ವಹಿವಾಟುಗಳು 10 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿವೆ ಎಂದು ಹೇಳಿದರು.

ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನವಾದ ಏಪ್ರಿಲ್ 14 ರಂದು ಉದ್ಘಾಟನೆಗೊಂಡ ಪ್ರಧಾನಮಂತ್ರಿ ಸಂಗ್ರಹಾಲಯದ ಬಗ್ಗೆ ದೇಶಾದ್ಯಂತ ಜನರು ತಮ್ಮ ಅಭಿಪ್ರಾಯಗಳನ್ನು ಉಲ್ಲೇಖಿಸಿ ಪತ್ರ ಮತ್ತು ಸಂದೇಶಗಳನ್ನು ಕಳುಹಿಸಿದ್ದಾರೆ. ಪ್ರಧಾನಿಗಳ ಕೊಡುಗೆಗಳನ್ನು ಸ್ಮರಿಸಲು ಭಾರತಕ್ಕೆ ಸ್ವಾತಂತ್ರ್ಯ ಬಂದ 75 ವರ್ಷಗಳಿಕ್ಕಿಂತ ಇನ್ನೊಂದು ಉತ್ತಮ ಸಮಯ ಇಲ್ಲ.

ರಜಾದಿನಗಳಲ್ಲಿ ಜನ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಲು ಉತ್ತೇಜಿಸುವ ಸಲುವಾಗಿ ಮ್ಯೂಸಿಯಂಮೆಮೊರೀಸ್ ಎಂಬ ಹ್ಯಾಶ್‍ಟ್ಯಾಗ್ ಬಳಸಿ ತಮ್ಮ ಅನುಭವಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸಿದರು. ಕ್ರೀಡೆಯಂತೆಯೇ, ಕಲೆ, ಶೈಕ್ಷಣಿಕ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ದಿವ್ಯಾಂಗರು ಅದ್ಭುತ ಸಾಧನೆಗಳನ್ನು ಮಾಡುತ್ತಿದ್ದಾರೆ. ತಂತ್ರಜ್ಞಾನದ ಶಕ್ತಿಯಿಂದ ಅವರು ಮತ್ತಷ್ಟು ಸಾಧನೆ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ಮುಂಬರುವ ಮೇ ತಿಂಗಳಲ್ಲಿ ಹಲವು ಹಬ್ಬಗಳು ಎದುರಾಗಲಿವೆ. ಕೋವಿಡ್ ಸೋಂಕಿನಿ ನಿಗ್ರಹಕ್ಕಾಗಿ ಎಲ್ಲಾ ಸುರಕ್ಷಿತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಅವರು ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕೆಜಿಎಫ್ ಅಧ್ಯಾಯ 2 ಬಾಕ್ಸ್ ಆಫೀಸ್ ಕಲೆಕ್ಷನ್ ದಿನ 10:ಯಶ್ ಅವರ ಬ್ಲಾಕ್ಬಸ್ಟರ್ನ ಹಿಂದಿ ಆವೃತ್ತಿಯು ರೂ 300 ಕೋಟಿ ದಾಟಿದೆ!

Sun Apr 24 , 2022
ಯಶ್ ಅವರ ಕೆಜಿಎಫ್: ಅಧ್ಯಾಯ 2 ಬಾಕ್ಸ್ ಆಫೀಸ್‌ನಲ್ಲಿ ಅಗಾಧ ಯಶಸ್ಸನ್ನು ಕಂಡಿದೆ. ಯಶ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಚಿತ್ರವು ಮೊದಲ ವಾರದಲ್ಲಿ ವಿಶ್ವದಾದ್ಯಂತ 750 ಕೋಟಿ ರೂ. ಇದೀಗ, ಅದರ ಕನಸಿನ ಓಟ ಎರಡನೇ ವಾರದಲ್ಲಿ ಮುಂದುವರಿಯುತ್ತದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ಸಂಜಯ್ ದತ್, ರವೀನಾ ಟಂಡನ್ ಮತ್ತು ಶ್ರೀನಿಧಿ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕೆಜಿಎಫ್: ಅಧ್ಯಾಯ 2 ಬಾಕ್ಸ್ ಆಫೀಸ್‌ನಲ್ಲಿ ಡ್ರೀಮ್ […]

Advertisement

Wordpress Social Share Plugin powered by Ultimatelysocial