ದೇಶದಲ್ಲಿ ಕೊರೊನಾ 4 ನೇ ಅಲೆ ಭೀತಿ :

ನವದೆಹಲಿ: ಕೋವಿಡ್ ಪ್ರಕರಣಗಳು ( Covid-19 cases ) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ( Prime Minister Narendra Modi ) ಮಹತ್ವದ ಕೊರೋನಾ ನಿಯಂತ್ರಣ ಸಭೆಯನ್ನು ನಡೆಸಲಿದ್ದಾರೆ.

ಈ ಬಗ್ಗೆ ಪ್ರಧಾನಿ ಕಚೇರಿ ಮೂಲಗಳಿಂದ ಖಚಿತ ಮಾಹಿತಿ ನೀಡಿದ್ದು, ದೇಶಾದ್ಯಂತ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿ, ಚರ್ಚಿಸಲಿದ್ದಾರೆ ಎಂದು ಹೇಳಿದೆ.

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನಿಂದ ಮಧ್ಯಾಹ್ನ 12 ಗಂಟೆಗೆ ವರ್ಚುವಲ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಸಹ ಭಾಗಿಯಾಗಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಂದಿನ ಸಭೆಯಲ್ಲಿ ಪ್ರಧಾನಿ ಮೋದಿ ಸಿಎಂಗಳಿಗೆ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಹಲಸು ಸಲಹೆ ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ.

ವಿವಿಧ ವಯೋಮಾನದ ಮಕ್ಕಳಿಗೆ ಕೊರೋನಾ ಲಸಿಕೆಗೆ DCGI ಅನುಮತಿ: ಯಾವ ವಯಸ್ಸಿನ ಮಕ್ಕಳಿಗೆ ಯಾವ ಲಸಿಕೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (Drugs Controller General of India – DCGI) ಮಂಗಳವಾರ ಕೋವಿಡ್ -19 ಲಸಿಕೆಗಳಾದ ( Covid-19 vaccines ) ಕಾರ್ಬೆವ್ಯಾಕ್ಸ್, ಝೈಕೋವ್-ಡಿ ಮತ್ತು ಕೋವ್ಯಾಕ್ಸಿನ್ ಗೆ ( Corbevax, ZyCoV-D and Covaxin ) ವಿವಿಧ ವಯೋಮಾನದ ಮಕ್ಕಳಿಗೆ ಇನಾಕ್ಯುಲೇಷನ್ಗಾಗಿ ತುರ್ತು ಬಳಕೆಯ ಅಧಿಕಾರ (emergency use authorisation – EUA) ನೀಡಿದೆ.

ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರು ಟ್ವಿಟರ್ನಲ್ಲಿ ಕೋವಿಡ್ ವಿರುದ್ಧದ ಭಾರತದ ಹೋರಾಟವು ಈಗ ಬಲವಾಗಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

 

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್‌ ಕುರಿತು ಚರ್ಚೆ ನಡೆಸಲು 'ಚಿಂತನ ಶಿಬಿರ' ಆಯೋಜನೆ ಮಾಡಿದೆ.

Wed Apr 27 , 2022
ನವದೆಹಲಿ, ಏಪ್ರಿಲ್ 27; ಪಕ್ಷ ಸಂಘಟನೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡುತ್ತಿರುವ ಕಾಂಗ್ರೆಸ್‌  ಪಕ್ಷ, ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಲು ‘ಚಿಂತನ ಶಿಬಿರ’ ಆಯೋಜನೆ ಮಾಡಿದೆ. ರಾಜಸ್ಥಾನದ ಉದಯಪುರದಲ್ಲಿ ಈ ಶಿಬಿರ ನಡೆಯಲಿದೆ. When you deposit using one of these methods you will receive the agreed on bonus clickmiamibeach.com code. ಮೇ 13, 14, 15 ರಂದು ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ಚಿಂತನ ಶಿಬಿರದಲ್ಲಿ […]

Advertisement

Wordpress Social Share Plugin powered by Ultimatelysocial