ರಷ್ಯಾ-ಉಕ್ರೇನ್ ಯುದ್ಧದ್ದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಜರ್ಮನಿ, ಡೆನ್ಮಾರ್ಕ್ ಮತ್ತು ಫ್ರಾನ್ಸ್ ಗೆ ಭೇಟಿ

 

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧದ್ದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಜರ್ಮನಿ, ಡೆನ್ಮಾರ್ಕ್ ಮತ್ತು ಫ್ರಾನ್ಸ್ ಗೆ ಭೇಟಿ ನೀಡುತ್ತಿದ್ದು, ತಮ್ಮ ಭೇಟಿಯಿಂದ ಯುರೋಪಿಯನ್ ರಾಷ್ಟ್ರಗಳು ಮತ್ತು ಭಾರತದೊಂದಿಗೆ ಸಹಕಾರ ಬಲವರ್ಧನೆಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ .

ಜರ್ಮನಿ ಛಾನ್ಸಲರ್ ಓಲಾಫ್ ಸ್ಕೋಲ್ಜ್ ಅವರ ಆಹ್ವಾನದ ಮೇರೆಗೆ ನಾಳೆ ಬರ್ಲಿನ್ ಗೆ ತೆರಳುತ್ತಿದ್ದು,ಡ್ಯಾನಿಶ್ ಪ್ರಧಾನ ಮಂತ್ರಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರ ಆಹ್ವಾನದ ಮೇರೆಗೆ ಮೇ 3 ಮತ್ತು 4 ರಂದು ಕೋಪನ್ ಹ್ಯಾಗನ್ ಗೆ ಭೇಟಿ ನೀಡುತ್ತಿದ್ದು, ದ್ವಿಪಕ್ಷೀಯ ಸಂಬಂಧ ಮತ್ತು ಎರಡನೇ ಭಾರತ- ನಾರ್ಡಿಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಾಗಿ ಮೋದಿ ಹೇಳಿದ್ದಾರೆ.

ಭಾರತಕ್ಕೆ ವಾಪಸ್ಸಾಗುವಾಗ ಪ್ಯಾರಿಸ್ ನಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಸಭೆ ನಡೆಸಲಿದ್ದು, ಯುರೋಪಿಯನ್ ರಾಷ್ಟ್ರಗಳೊಂದಿಗೆ ಸಹಕಾರ ಬಲವರ್ಧನೆ ತಮ್ಮ ಪ್ರವಾಸದ ಉದ್ದೇಶವಾಗಿದೆ. ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಲ್ಲಿ ಆ ರಾಷ್ಟ್ರಗಳ ಪಾತ್ರವೂ ಪ್ರಮುಖವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಾಲೆ ಆರಂಭದ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಮುಖ್ಯ ಮಾಹಿತಿ

Sun May 1 , 2022
  ತುಮಕೂರು: ಪ್ರಧಾನಿಗಳ ಆಶಯದಂತೆ ವ್ಯಾಕ್ಸಿನ್ ನೀಡಿ ಶಾಲೆ ಆರಂಭಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ತುಮಕೂರು ಜಿಲ್ಲೆ ಶಿರಾ ನಗರದಲ್ಲಿ ಮಾತನಾಡಿದ ಅವರು, ವ್ಯಾಕ್ಸಿನ್ ಹಾಕಿರುವುದರಿಂದ ನಾಲ್ಕನೇ ಎದುರಿಸಲು ಅನುಕೂಲವಾಗಿದೆ. ಅದೇ ಧೈರ್ಯದ ಮೇಲೆ ಶಾಲೆಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಹೊಸಬರಿಗೆ ಅವಕಾಶ ನೀಡಲಾಗುವುದು ಎಂದು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಯಾವ ದೃಷ್ಟಿಯಲ್ಲಿ ಹೇಳಿದ್ದಾರೆಯೋ ನನಗೆ […]

Advertisement

Wordpress Social Share Plugin powered by Ultimatelysocial