ಮೈಸೂರಿಗೆ ಪ್ರಧಾನಿ ಮೋದಿ, ಜೂ. 21 ರಂದು ಯೋಗ ದಿನಾಚರಣೆಯಲ್ಲಿ ಭಾಗಿ…

ಮೈಸೂರು: ಜೂನ್ 21 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ.

ಮೈಸೂರು ಸಂಸದ ಪ್ರತಾಪಸಿಂಹ ಈ ಬಗ್ಗೆ ಪ್ರಧಾನಿಯವರಿಗೆ ಮನವಿ ಮಾಡಿದ್ದು, ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೋದಿ ಸಮ್ಮತಿಸಿದ್ದಾರೆ ಎನ್ನಲಾಗಿದೆ.

ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ವಿಶ್ವಸಂಸ್ಥೆಯ ನಿರ್ಣಯವನ್ನು ಅಂಗೀಕರಿಸುವಂತೆ ಮಾಡುವುದು ಸೇರಿದಂತೆ ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗವನ್ನು ಜನಪ್ರಿಯಗೊಳಿಸಲು ಮೋದಿಯವರ ಕೊಡುಗೆ ಮಹತ್ವದ್ದಾಗಿದೆ. ಪ್ರಪಂಚದಾದ್ಯಂತ 190 ಕ್ಕೂ ಹೆಚ್ಚು ದೇಶಗಳು ಪ್ರತಿ ವರ್ಷ ಜೂನ್ 21 ರಂದು ಯೋಗ ದಿನಾಚರಣೆ ಆಚರಿಸುತ್ತವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತಾಲಿಬಾನ್‌ ಸರ್ಕಾರದಿಂದ ಮತ್ತೊಂದು ಹೊಸ ರೂಲ್ಸ್.! ರೆಸ್ಟೋರೆಂಟ್‌ ನಲ್ಲಿ ಮಹಿಳೆ - ಪುರುಷರಿಗೆ ಪ್ರತ್ಯೇಕ ವಿಭಾಗ...

Sun May 15 , 2022
  ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ರಚನೆಯಾದ ಬಳಿಕ ಅಲ್ಲಿನ ಜನರು ಪ್ರತಿನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಅಮಾಯಕರ ಜೀವನದ ಜೊತೆ ಚೆಲ್ಲಾಟ ನಡೆಸುತ್ತಿರುವ ಇವರುಗಳು ದಿನಕ್ಕೊಂದು ಹೊಸ ರೂಲ್ಸ್ ಮಾಡಿ ಅಫ್ಘಾನ್ ಜನರು ಬದುಕುವುದೇ ದುಸ್ತರ ಮಾಡಿದ್ದಾರೆ. ಈಗ ಇದೇ ತಾಲಿಬಾನ್ ಸರ್ಕಾರ, ಮತ್ತೊಂದು ನಿಯಮವನ್ನ ಜಾರಿ ಮಾಡಿದೆ. ಪಶ್ಚಿಮ ಅಫ್ಘಾನಿಸ್ತಾನ್‌ನ ಹೆರಾತ್ ನಗರದಲ್ಲಿ ಪುರುಷರು ಮತ್ತು ಮಹಿಳೆಯರು ಒಟ್ಟಿಗೆ ಕುಳಿತು ಊಟ ಮಾಡುವುದು ಹಾಗೂ ಉದ್ಯಾನವನಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ […]

Advertisement

Wordpress Social Share Plugin powered by Ultimatelysocial