ʻಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರʼ ಪುರಸ್ಕೃತರೊಂದಿಗೆ ಇಂದು ಮೋದಿ ಸಂವಾದ.

ವದೆಹಲಿ: ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ  ಪುರಸ್ಕೃತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂವಾದ ನಡೆಸಲಿದ್ದಾರೆ. ಇಂದು ಸಂಜೆ 4 ಗಂಟೆಗೆ ನವದೆಹಲಿಯಲ್ಲಿರುವ ಸ್ವ ನಿವಾಸದಲ್ಲಿ ಸಂವಾದ ನಡೆಸಲಿದ್ದಾರೆ.

ನಾವೀನ್ಯತೆ, ಸಮಾಜ ಸೇವೆ, ಪಾಂಡಿತ್ಯಪೂರ್ಣ, ಕ್ರೀಡೆ, ಕಲೆ ಮತ್ತು ಸಂಸ್ಕೃತಿ ಮತ್ತು ಶೌರ್ಯ ಎಂಬ ಆರು ವಿಭಾಗಗಳಲ್ಲಿ ಅಸಾಧಾರಣ ಸಾಧನೆಗಾಗಿ ಭಾರತ ಸರ್ಕಾರವು ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ನೀಡುತ್ತಿದೆ. ಪ್ರತಿಯೊಬ್ಬ ಪ್ರಶಸ್ತಿ ಪುರಸ್ಕೃತರಿಗೆ ಪದಕ, 1 ಲಕ್ಷ ರೂಪಾಯಿ ನಗದು ಮತ್ತು ಪ್ರಮಾಣ ಪತ್ರ ನೀಡಲಾಗುತ್ತದೆ.

ಈ ವರ್ಷ, ದೇಶದಾದ್ಯಂತ 11 ಮಕ್ಕಳನ್ನು ಬಾಲ ಶಕ್ತಿ ಪುರಸ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ PMRBP-2023 ಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೇರಿದ ಆರು ಹುಡುಗರು ಮತ್ತು ಐದು ಹುಡುಗಿಯರು ಸೇರಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಸ್ಸಾಂ: ಕಡಿಮೆ ವಯಸ್ಸಿನ ಹುಡುಗಿಯರನ್ನು ಮದುವೆಯಾಗುವ ಪುರುಷರ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಕೇಸ್.

Tue Jan 24 , 2023
ಅಸ್ಸಾಂ ಸರ್ಕಾರ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯರನ್ನು ಮದುವೆಯಾಗುವ ಪುರುಷರ ವಿರುದ್ಧ ಪೋಕ್ಸೊ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ರಾಜ್ಯದಲ್ಲಿ ಬಾಲ್ಯ ವಿವಾಹದ ವಿರುದ್ಧ ಬೃಹತ್ ಶಿಸ್ತುಕ್ರಮವನ್ನು ಪ್ರಾರಂಭಿಸಿದೆ. 14 ರಿಂದ 18 ವರ್ಷದೊಳಗಿನ ಬಾಲಕಿಯರನ್ನು ಮದುವೆಯಾಗುವ ಪುರುಷರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ರ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು. ರಾಜ್ಯ ಸಚಿವ ಸಂಪುಟ ಬಾಲ್ಯ ವಿವಾಹದ ವಿರುದ್ಧ ರಾಜ್ಯಾದ್ಯಂತ ಬೃಹತ್ ಅಭಿಯಾನವನ್ನು ಪ್ರಾರಂಭಿಸಲು ನಿರ್ಧರಿಸಿದೆ ಎಂದು […]

Advertisement

Wordpress Social Share Plugin powered by Ultimatelysocial