ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಕರೆದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!

ಹುಬ್ಬಳ್ಳಿ : ಏಪ್ರಿಲ್ 27 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ( PM Modi ) ರಾಷ್ಟ್ರದ ಕೋವಿಡ್ ಪರಿಸ್ಥಿತಿ ( Coronavirus ) ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಕರೆದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ತಿಳಿಸಿದರು.

ಈ ಮೂಲಕ ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿರ್ಧಾರವನ್ನು ಕೈಗೊಳ್ಳೋ ನಿರೀಕ್ಷೆಯಿದೆ.

ಹುಬ್ಬಳ್ಳಿಯ ವಿಮಾನನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೋವಿಡ್ ಬಗ್ಗೆ ಜಾಗೃತರಾಗಿರುವಂತೆ ಕೇಂದ್ರ ಸರ್ಕಾರ ಈಗಾಗಲೇ ಸೂಚನೆಯನ್ನು ಕೊಟ್ಟಿದೆ. ಕಳೆದ 8-10 ದಿನಗಳಿಂದ ಅಲ್ಪಮಟ್ಟದ ಪ್ರಕರಣಗಳು ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕಂಡುಬಂದಿದೆ. ಮೂರು ಅಲೆಗಳನ್ನು ನಿಭಾಯಿಸಿರುವ ಅನುಭವದಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತ ಎನ್ನುವ ಮಾತನ್ನು ಪರಿಣಿತರು ಹೇಳಿದ್ದಾರೆ. ಈಗಾಗಲೇ ಆರೋಗ್ಯ ಸಚಿವರೂ ಹಲವಾರು ಸೂಚನೆಗಳನ್ನು ನೀಡಿದ್ದಾರೆ. ಎಪ್ರಿಲ್ 27 ರಂದು ಪ್ರಧಾನ ಮಂತ್ರಿಗಳ ವೀಡಿಯೋ ಸಂವಾದದ ನಂತರ ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಸ್ಪಷ್ಟ ಸೂಚನೆಗಳನ್ನು ನೀಡುತ್ತೇವೆ ಎಂದರು.

ಜನ ಜಾಗೃತರಾಗಿರಬೇಕು

ಜನರು ಜಾಗೃತರಾಗಿರುವುದು ಬಹಳ ಮುಖ್ಯ. ಕೋವಿಡ್ 2 ನೇ ಅಲೆ ಬಂದಾಗ ಅತ್ಯಂತ ಕಡಿಮೆ ಸಂಖ್ಯೆ ಯಲ್ಲಿ ಪ್ರಾರಂಭವಾಗಿ ನಂತರ ಉಲ್ಬಣವಾಯಿತು. ಈಗಾಗಲೇ ವಿಜ್ಞಾನಿಗಳು ಯಾವ ಮಾದರಿಯಲ್ಲಿದೆ ಎಂದು ಪರೀಕ್ಷಿಸುತ್ತಿದ್ದಾರೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮಾಜಿ ಗೆಳೆಯ ತನ್ನ ಖಿನ್ನತೆಯ ಸಮಸ್ಯೆಗಳನ್ನು ಗುರುತಿಸಲು ಹೇಗೆ ಸಹಾಯ ಮಾಡಿದ್ದಾನೆ ಎಂಬುದನ್ನು ಬಹಿರಂಗಪಡಿಸಿದ್ದ,ಶಮಿತಾ ಶೆಟ್ಟಿ!

Sun Apr 24 , 2022
ಶಮಿತಾ ಶೆಟ್ಟಿ ಇದೀಗ ಬಿಗ್‌ಬಾಸ್‌ನಲ್ಲಿ ಗಳಿಸಿದ ಎಲ್ಲಾ ಖ್ಯಾತಿಯನ್ನು ಆನಂದಿಸುತ್ತಿದ್ದಾರೆ. ನಟಿ ಇದೀಗ ಬಲವಾದ ಅಭಿಮಾನಿಗಳನ್ನು ಹೊಂದಿದ್ದಾಳೆ ಮತ್ತು ಅವರು ಎಲ್ಲ ರೀತಿಯಲ್ಲಿಯೂ ಅವರನ್ನು ಪ್ರೇರೇಪಿಸುವಂತೆ ಮಾಡಲು ಸಾಧ್ಯವಿರುವ ಎಲ್ಲ ರೀತಿಯಲ್ಲಿ ಕುಳಿತುಕೊಳ್ಳುತ್ತಾರೆ. ಇದೀಗ ಶಮಿತಾ ಅವರ ಸಹೋದರಿ ಶಿಲ್ಪಾ ಶೆಟ್ಟಿ ಅವರ ಶೋನಲ್ಲಿ ಸಂವಾದವು ವೈರಲ್ ಆಗುತ್ತಿದೆ, ಅಲ್ಲಿ ಅವರು ಖಿನ್ನತೆಯಿಂದ ಹೊರಬರುವ ಬಗ್ಗೆ ಮಾತನಾಡಿದರು. ಹೌದು! ಆ ಸಮಯದಲ್ಲಿ ಮಾನಸಿಕ ಆರೋಗ್ಯದ ವಿರುದ್ಧ ಹೋರಾಡುತ್ತಿದ್ದರೂ ಬಿಗ್ ಬಾಸ್ […]

Advertisement

Wordpress Social Share Plugin powered by Ultimatelysocial