ಐಪಿಎಲ್ 15ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಅತ್ಯಂತ ಕಳಪೆ!

 

ಐಪಿಎಲ್ 15ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಅತ್ಯಂತ ಕಳಪೆ ಪ್ರದರ್ಶನ ನಿಡುತ್ತಿದ್ದು ಮೊದಲ ನಾಲ್ಕು ಪಂದ್ಯಗಳಲ್ಲಿ ನಾಲ್ಕನ್ನು ಕೂಡ ಕಳೆದುಕೊಂಡಿದೆ. ಸಹಜವಾಗಿಯೇ ಇಡೀ ತಂಡ ಈ ಸೋಲುಗಳಿಂದ ಆತ್ಮವಿಶ್ವಾಸ ಕಳೆದುಕೊಂಡಿದೆ. ಈ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ವಿಶೇಷ ಸಂದೇಶವೊಂದು ಬಂದಿದೆ.

ಈ ಮೂಲಕ ತಂಡದ ಆಟಗಾರರ ಆತ್ಮವಿಶ್ವಾಸ ಹೆಚ್ಚಾಗಲಿದೆಯೇ ಎಂಬುದು ಕುತೂಹಲ ಮೂಡಿಸಿದೆ.

ಶನಿವಾರ ನಡೆದ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಮುಂಬೈ ಸೋಲು ಅನುಭವಿಸಿದ ಬಳಿಕ ನಾಯಕ ರೋಹಿತ್ ಶರ್ಮಾ ಮಾತನಾಡಿದರು. ಈ ಸಂದರ್ಭದಲ್ಲಿ ಶರ್ಮಾ ಆರ್‌ಸಿಬಿ ವಿರುದ್ಧದ ಸೋಲು ಅರಗಿಸಿಕೊಳ್ಳಲು ಬಹಳ ಕಷ್ಟ ಎಂದಿದ್ದಾರೆ. ಇದರ ಜೊತೆಗೆ ಮುಂಬೈ ಇಂಡಿಯನ್ಸ್ ತಂಡಕ್ಕೆ ತಂಡದ ಮಾಲಕಿ ನೀತಾ ಅಂಬಾನಿಯಿಂದ ವಿಶೇಷ ಸಂದೇಶ ಬಂದಿದೆ. ಈ ಸಂದೇಶವನ್ನು ಎಂಐ ಫ್ರಾಂಚೈಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

“ನಿಮ್ಮೆಲ್ಲರ ಮೇಲೆ ನನಗೆ ನಂಬಿಕೆ ಹಾಗೂ ವಿಶ್ವಾಸವಿದೆ. ನಾವು ಈ ಸ್ಥಿತಿಯಿಂದ ಹೊರಗೆ ಬರಲಿದ್ದೇವೆ. ನಾವು ಇಲ್ಲಿಂದ ಮುಂದೆ ಮೇಲಕ್ಕೇರುತ್ತಾ ಸಾಗಬೇಕಿದೆ. ನಾವು ನಮ್ಮ ಮೇಲೆ ನಂಬಿಕೆಯನ್ನು ಇರಿಸಿಕೊಳ್ಳಬೇಕು. ಹಾಗಾಗಿ ನಾವು ನಮ್ಮ ಗುರಿಯನ್ನು ಸಾಧಿಸಬಹುದು” ಎಂದು ನೀತಾ ಅಂಬಾನಿ ಈ ಮೂಲಕ ಆಟಗಾರರಿಗೆ ವಿಶೇಷ ಸಂದೇಶ ನೀಡಿದ್ದಾರೆ.

ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಆರಂಭೀಕ ಹಂತದಲ್ಲಿ ಸೋಲುಗಳೊಂದಿಗೆ ಟೂರ್ನಿಯನ್ನು ಆರಂಭಿಸುವುದು ಇದೇನು ಮೊದಲಲ್ಲ. 2014ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಮೊದಲ ಐದು ಪಂದ್ಯಗಳಲ್ಲಿ ಸೋಲು ಅನುಭವಿಸಿತ್ತು. ಮೊದಲ ಗೆಲುವನ್ನು ಕಿಂಗ್ಸ್ ಇಲವೆನ್ ಪಂಜಾಬ್(ಈಗ ಪಂಜಾಬ್ ಕಿಂಗ್ಸ್) ವಿರುದ್ಧ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಾಧಿಸಿತ್ತು. ಆ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಲೀಗ್ ಹಂತವನ್ನು 14 ಅಂಕಗಳೊಂದಿಗೆ 4ನೇ ಸ್ಥಾನಿಯಾಗಿ ಪ್ಲೇಆಫ್‌ಗೆ ಪ್ರವೇಶ ಪಡೆದುಕೊಂಡಿತ್ತು.

ಅದಾದ ಬಳಿಕ 2015ರಲ್ಲಿ ಮೂಡ ಮುಂಬೈ ಇಂಡಿಯನ್ಸ್ ತಂಡ ಮೊದಲ 4 ಪಂದ್ಯಗಳಲ್ಲಿ ಸೋಲು ಅನುಭವಿಸಿತ್ತು. ಆದರೆ ಅದಾದ ಬಳಿಕ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಟ್ರೋಫಿಯನ್ನು ಕೂಡ ಗೆದ್ದುಕೊಂಡಿತ್ತು. ಈ ಬಾರಿಯ ಟೂರ್ನಿಯಲ್ಲಿಯೂ ಕಳಪೆ ಆರಂಭದ ಹೊರತಾಗಿಯೂ ಆತ್ಮವಿಶ್ವಾಸವನ್ನು ಕಳೆದುಕೊಳ್ಳದೆ ಬಲಿಷ್ಠವಾಗಿ ಕಮ್‌ಬ್ಯಾಕ್ ಮಾಡಲು ಹೇಳಿದ್ದಾರೆ.

“ನಾವು ಇಂತಾ ಪರಿಸ್ಥಿತಿಯನ್ನು ಬಹಳ ಸಲ ಮೀರಿ ನಿಂತಿದ್ದು ಟ್ರೋಫಿಯನ್ನು ಕೂಡ ಗೆದ್ದುಕೊಂಡಿದ್ದೇವೆ. ಹಾಗಾಗಿ ನನಗೆ ನಿಮ್ಮೆಲ್ಲರ ಮೇಲೆ ಸಂಪೂರ್ಣ ನಂಬಿಕೆಯಿದೆ. ನಿಮ್ಮೆಲ್ಲರಲಗಲಿಯೂ ಈ ಆತ್ಮವಿಶ್ವಾಸವಿದ್ದರೆ ನಾವು ಈ ಸಾಧನೆಯನ್ನು ಮಾಡಲು ಸಾಧ್ಯವಿದೆ. ನಾನು ನಿಮ್ಮನ್ನು ಮತ್ತೊಂದು ಭಾಗದಲ್ಲಿ ನೋಡಲು ಬಯಸುತ್ತೇನೆ” ಎಂದಿದ್ದಾರೆ ನೀತಾ ಅಂಬಾನಿ.

“ನಿಮ್ಮೆಲ್ಲರಿಗೆ ಏನೆಲ್ಲಾ ಅಗತ್ಯವಿದೆಯೋ ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಎಲ್ಲರೂ ಎಲ್ಲರ ಮೇಲೆಯೂ ನಂಬಿಕೆ ವಿಶ್ವಾಸವನ್ನು ಕಳೆದುಕೊಳ್ಳಬೇಡಿ. ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಯಾವಾಗಲೂ ನಿಮಗೆ ಬೆಂಬಲವಾಗಿರುತ್ತದೆ” ಎಂದು ನೀತಾ ಅಂಬಾನಿ ಹೇಳಿಕೆ ನೀಡಿದ್ದಾರೆ. ಮುಂಬೈ ಇಂಡಿಯನ್ಸ್ ತಂಡ ತನ್ನ ಮುಂದಿನ ಪಂದ್ಯವನ್ನು ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಆಡಲಿದ್ದು ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ಏಪ್ರಿಲ್ 13 ಬುಧವಾರದಂದು ಈ ಪಂದ್ಯ ನಡೆಯಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

-ಗುಜರಾತ್‍ನ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ!

Mon Apr 11 , 2022
  ಅಹಮದಾಬಾದ್.ಏ.11-ಗುಜರಾತ್‍ನ ಭರೂಚ್ ಜಿಲ್ಲಾಯ ದಹೇಜ್ ಕೈಗಾರಿಕಾ ಪ್ರದೇಶದಲ್ಲಿನ ಇಂದು ಮುಂಜಾನೆ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು ಸಂಭವಿಸಿದ ಸ್ಫೋಟ ದಲ್ಲಿ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ . ರಾತ್ರಿ ಪಾಳಯದಲ್ಲಿ ಕೆಲಸ ಮಾಡುತಿದ್ದ ಕಾರ್ಮಿಕರು ಮುಂಜಾನೆ 3 ಗಂಟೆ ಸುಮಾರಿಗೆ ದ್ರಾವಕ ಬಟ್ಟಿ ಇಳಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದರು ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿತು, ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಭರೂಚ್ ಪೊಲೀಸ್ ಅೀಧಿಕ್ಷಕರಾದ ಲೀನಾ ಪಾಟೀಲ್ […]

Advertisement

Wordpress Social Share Plugin powered by Ultimatelysocial