ಬೋರ್ ವೆಲ್ ಕೊರೆಸಲು ಫಲಾನುಭವಿಗಳ ಖಾತೆಗೆ ಹಣ ಜಮಾ!

ಡುಪಿ : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಸಲು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಅವರು ಇಂದು ಕಳತ್ತೂರು ನಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ,ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಮತ್ತು ಗ್ರಾಮ ಪಂಚಾಯತ್ ಕುತ್ಯಾರು ಇವರ ಸಹಯೊಗದೊಂದಿಗೆ , 25 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಮೊರಾರ್ಜಿ ದೇಸಾಯಿ ವಸತಿ ಶಾಲಾ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದರು.

ಈ ಹಿಂದೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಬೋರ್ವೆಲ್ ಕರೆಯಲು ಟೆಂಡರ್ ಕರೆಯಲಾಗುತ್ತಿದ್ದು, ಪ್ರಸ್ತುತ ಬೋರ್ ವೆಲ್ ಕೊರೆಯುವ ಮೊತ್ತವನ್ನು ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಜಮೆ ಮಾಡುವ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು, ಇದರಿಂದಾಗಿ ಪಾರದರ್ಶಕತೆಯೊಂದಿಗೆ ಫಲಾನುಭವಿಗೆ ತ್ವರಿತವಾಗಿ ಬೋರ್ವೆಲ್ ಸಂಪರ್ಕ ದೊರೆಯುತ್ತಿದೆ. 24000 ನಿರುದ್ಯೋಗಿಗಳಿಗೆ ಸಣ್ಣ ವ್ಯಾಪಾರ ಮಾಡಲು ಅನುಕೂಲವಾಗುವಂತೆ ಸಬ್ಸಿಡಿಯೊಂದಿಗೆ ಕಡಿಮೆ ಸಾಲದಲ್ಲಿ ದ್ವಿಚಕ್ರ ವಾಹನ ನೀಡುವ ಯೋಜನೆ ಆರಂಭಿಸಿದ್ದು, ಕಾಪು ಕ್ಷೇತ್ರದಲ್ಲಿ 150 ಕ್ಕೂ ಅಧಿಕ ಮಂದಿಗೆ ಸೌಲಭ್ಯ ನೀಡಲಾಗುತ್ತಿದ್ದು, ಹಿಂದುಗಳಿದ ವರ್ಗದವರಿಗೆ ಉಚಿತ ಹೊಲಿಗೆ ಯಂತ್ರ ನೀಡುವ ಯೋಜನೆಯಡಿ 95 ಜನಕ್ಕೆ ಸೌಲಭ್ಯ ನೀಡಲಾಗುವುದು ಎಂದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯಗಳು ಹವಾಮಾನ ವೈಪರಿತ್ಯದ ದುಷ್ಪರಿಣಾಮಗಳನ್ನು ಎದುರಿಸುವ ಭೀತಿಯಲ್ಲಿವೆ.

Mon Feb 20 , 2023
ಹವಾಮಾನ ವೈಪರಿತ್ಯದಿಂದ ಅತ್ಯಂತ ಅಪಾಯ ಸ್ಥಿತಿಯಲ್ಲಿರುವ ವಿಶ್ವದ 100 ನಗರಗಳ ಪಟ್ಟಿಯಲ್ಲಿ ಭಾರತದ 14 ರಾಜ್ಯಗಳು ಸ್ಥಾನ ಪಡೆದಿವೆ. ದೇಶದ ಅತ್ಯಂತ ಸದೃಢ ಹಾಗೂ ಅರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಹಾಗೂ ಅತೀ ಹರಚ್ಚು ಜನಸಂಖ್ಯೆ ಹೊಂದಿರುವ ಕರ್ನಾಟಕ, ತಮಿಳುನಾಡು, ಮಹಾರಾಷ್ಡ್ರ, ಉತ್ತರ ಪ್ರದೇಶ ಮುಂತಾದ ರಾಜ್ಯಗಳು ಹವಾಮಾನ ವೈಪರಿತ್ಯದ ದುಷ್ಪರಿಣಾಮಗಳನ್ನು ಎದುರಿಸುವ ಭೀತಿಯಲ್ಲಿವೆ. ಹವಾಮಾನ ವೈಪರಿತ್ಯದಿಂದ ಪ್ರವಾಹ ಸೇರಿದಂತೆ ವಿವಿಧ ಪ್ರಾಕೃತಿಕ ವಿಕೋಪಗಳಿಗೆ ಜಗತ್ತಿನ 100 ದೇಶಗಳಲ್ಲಿ […]

Advertisement

Wordpress Social Share Plugin powered by Ultimatelysocial