ದಕ್ಷಿಣ ಕನ್ನಡದಲ್ಲಿ ಕಟ್ಟಡವೊಂದರ ಮೇಲಿಂದ ಸುರಿಯಿತು ಹಣದ ಮಳೆ!

 

ಬಂಟ್ವಾಳ(ದಕ್ಷಿಣ ಕನ್ನಡ): ಬಿ.ಸಿ.ರೋಡ್​ನ ಹೃದಯಭಾಗದಲ್ಲಿರುವ ಕಟ್ಟಡವೊಂದರ ಕೊಠಡಿಯಿಂದ ಗುರುವಾರ ಹಣದ ಮಳೆ ಸುರಿದಿದೆ!

ಕಟ್ಟಡದ ಮೇಲಿಂದ ಹಣ ಬೀಳುವುದನ್ನು ಕಂಡ ಜನ ಹಣ ಹೆಕ್ಕಲು ಮುಗಿಬಿದ್ದಿದ್ದರಿಂದ ಕೆಲಕಾಲ ಸರ್ವೀಸ್​ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಬಿ.ಸಿ.ರೋಡ್​ನ ಕಟ್ಟಡದಲ್ಲಿ ನಡೆಯುತ್ತಿದ್ದ ರಿಕ್ರಿಯೇಶನ್​ ಕ್ಲಬ್​ನಲ್ಲಿ ಅಕ್ರಮ ಜೂಜಾಟ ನಡೆಯುತ್ತಿರುವ ಬಗ್ಗೆ ದೂರು ಬಂದಿತ್ತು. ಈ ಹಿನ್ನೆಲೆ ಸಹಾಯಕ ಪೊಲೀಸ್​ ಅಧೀಕ್ಷಕರ ಅನುಮತಿ ಪಡೆದು ಪೊಲೀಸ್​ ನಿರೀಕ್ಷಕ ವಿವೇಕಾನಂದ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು. 28 ಆರೋಪಿಗಳು ಅಕ್ರಮ ಜೂಜಾಟದಲ್ಲಿ ತೊಡಗಿದ್ದರು. ಪೊಲೀಸ್​ ದಾಳಿಯಿಂದ ಆತಂಕಕ್ಕೊಳಗಾದ ಕೆಲವರು ಕಿಟಕಿಗಳ ಮೂಲಕ ನೋಟುಗಳನ್ನು ಕೆಳಗೆ ಎಸೆದಿದ್ದು, ನೋಟುಗಳು ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಕಟ್ಟಡದ ಮೇಲಿಂದ ಹಣ ಬೀಳುವುದನ್ನು ಕಂಡ ಜನ ನೋಟುಗಳನ್ನು ಹಾಯ್ದುಕೊಳ್ಳಲು ನಾ ಮುಂದು- ತಾ ಮುಂದು ಎಂಬಂತೆ ಮುಗಿಬಿದ್ದಿದ್ದರು. ಅತ್ತ ಪೊಲೀಸರು ಆರೋಪಿಗಳನ್ನು ಬಂಧಿಸಿ 26,900 ರೂ. ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗೃಹ ಬಳಕೆಯ ಎಲ್‍ಜಿಪಿ ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡುವುದಿಲ್ಲ:

Fri Jun 3 , 2022
  ನವದೆಹಲಿ,ಜೂ.3- ಗೃಹ ಬಳಕೆಯ ಎಲ್‍ಜಿಪಿ ಸಿಲಿಂಡರ್‍ಗಳಿಗೆ ಸಬ್ಸಿಡಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಿದೆ. ಇದರಿಂದ ಸಾಮಾನ್ಯ ಗ್ರಾಹಕರು ಮಾರುಕಟ್ಟೆ ದರಕ್ಕೆ ಅಡುಗೆ ಅನಿಲವನ್ನು ಖರೀದಿಸಬೇಕಾಗುತ್ತದೆ. ಕೋವಿಡ್ ಶುರುವಾದ ದಿನದಿಂದ ಎಲ್‍ಪಿಜಿ ವಿನಿಯೋಗದಾರರಿಗೆ ಸಬ್ಸಿಡಿ ನೀಡಿಲ್ಲ. ಇನ್ಮುಂದೆಯೂ ಕೂಡ ನೀಡಲು ಸಾಧ್ಯವಿಲ್ಲ ಎಂದು ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಸ್ಪಷ್ಟಪಡಿಸಿದ್ದಾರೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಹೊಂದಿದವರಿಗೆ ಮಾತ್ರ ಈಗ ಸಬ್ಸಿಡಿ […]

Advertisement

Wordpress Social Share Plugin powered by Ultimatelysocial