SMART PHONE:ಮೊಟೊರೊಲಾ ಕಂಪೆನಿ ಬೆಲೆ ಏರಿಕೆ;

ಭಾರತದ ಮಾರುಕಟ್ಟೆಯಲ್ಲಿ ಮೊಟೊರೊಲಾ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿನ ಸ್ಮಾರ್ಟ್‌ಫೋನ್‌ ಪ್ರಿಯರಿಗೆ ಮೊಟೊರೊಲಾ ಕಂಪೆನಿ ಬೆಲೆ ಏರಿಕೆಯ ಶಾಕ್‌ ನೀಡಿದೆ.

ಮೋಟೋ G31 ಮತ್ತು ಮೋಟೋ G51:
ಹೌದು, ಭಾರತದಲ್ಲಿ ಮೊಟೊರೊಲಾ ಕಂಪೆನಿ ಮೋಟೋ G31 ಮತ್ತು ಮೋಟೋ G51 ಸ್ಮಾರ್ಟ್‌ಫೋನ್‌ ಬೆಲೆಯನ್ನು ಹೆಚ್ಚಿಸಿದೆ. ಇದರಲ್ಲಿ ಮೋಟೋ G31 ಸ್ಮಾರ್ಟ್‌ಫೋನ್‌ ಅನ್ನು ನವೆಂಬರ್ 29 ರಂದು ಬಿಡುಗಡೆ ಮಾಡಿತ್ತು. ಆದರೆ ಮೋಟೋ G51 ಅನ್ನು ಡಿಸೆಂಬರ್ 10 ರಂದು ಬಿಡುಗಡೆ ಮಾಡಲಾಗಿತ್ತು. ಇದೀಗ ಬಿಡುಗಡೆಯಾದ ಕೇವಲ ಒಂದು ತಿಂಗಳ ಅವಧಿಯಲ್ಲಿ ಬೆಲೆ ಹೆಚ್ಚಳವನ್ನು ಮಾಡಲಾಗಿದೆ. ಹಾಗಾದ್ರೆ ಮೊಟೊರೊಲಾ ಬೆಲೆ ಹೆಚ್ಚಳ ಮಾಡಿದ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೊಟೊರೊಲಾ ಕಂಪೆನಿ ಭಾರತದಲ್ಲಿ ಮೋಟೋ G31 ಸ್ಮಾರ್ಟ್‌ಫೋನ್ 4GB+64GB ವೇರಿಯಂಟ್‌ ಆಯ್ಕೆಯನ್ನು 12,999ರೂ.ಗಳಿಗೆ ಬಿಡುಗಡೆ ಮಾಡಿತ್ತು. ಇದೀಗ 4GB+64GB ವೇರಿಯಂಟ್‌ ಆಯ್ಕೆಯ ಸ್ಮಾರ್ಟ್‌ಫೋನ್‌ ಬೆಲೆಯನ್ನು 13,999ರೂ.ಗಳಿಗೆ ಏರಿಕೆ ಮಾಡಿದೆ. ಇನ್ನು 14,999ರೂ. ಬೆಲೆಯಲ್ಲಿ ಲಭ್ಯವಾಗುತ್ತಿದ್ದ 6GB ರೂಪಾಂತರವು ಈಗ ಭಾರತದಲ್ಲಿ 16,999 ರೂ.ಗಳಿಗೆ ಲಭ್ಯವಾಗಲಿದೆ. ಅದೇ ರೀತಿ, ಮೋಟೋ G51 ಸ್ಮಾರ್ಟ್‌ಫೋನ್‌ 4GB/64GB ಆಯ್ಕೆಗೆ 14,999ರೂ ಬೆಲೆಯಲ್ಲಿ ಲಾಂಚ್‌ ಮಾಡಲಾಗಿತ್ತು. ಈ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ 3000ರೂ.ಗಳಷ್ಟು ಏರಿಕೆ ಮಾಡಲಾಗಿದ್ದು, ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಬೆಲೆ ಈಗ 17,999ರೂ. ಆಗಿದೆ. ಸದ್ಯಕ್ಕೆ ಬೆಲೆ ಏರಿಕೆಯ ಹಿಂದಿನ ಕಾರಣವನ್ನು ಮೊಟೊರೊಲಾ ಕಂಪೆನಿ ಇನ್ನು ಕೂಡ ಬಹಿರಂಗಪಡಿಸಿಲ್ಲ.

 

ಮೋಟೋ G31 ಸ್ಮಾರ್ಟ್‌ಫೋನ್‌:

ಮೋಟೋ G31 ಸ್ಮಾರ್ಟ್‌ಫೋನ್‌ ಮೊಟೊ G31 ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್‌ ಪಡೆದಿದ್ದು, 6.4 ಇಂಚಿನ ಪೂರ್ಣ ಹೆಚ್‌ಡಿ OLED ಡಿಸ್‌ಪ್ಲೇ ಪಡೆದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G85 ಪ್ರೊಸೆಸರ್‌ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 4GB RAM + 64GB ಮತ್ತು 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ನಲ್ಲಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾ 13 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಹಾಗೆಯೇ 20W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ.

ಮೋಟೋ G51 ಸ್ಮಾರ್ಟ್‌ಫೋನ್‌:

ಮೋಟೋ G51 ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8-ಇಂಚಿನ LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480+ SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ v11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ S5JKN1 ಸೆನ್ಸಾರ್‌ ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಆಟೋ ಫೋಕಸ್‌, ಫ್ಲ್ಯಾಶ್‌, ಅನ್ನು ಪಡೆದುಕೊಂಡಿದೆ. ಮೋಟೋ G51 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ, Wi-Fi 5, ಬ್ಲೂಟೂತ್ v5.2, GPS, USB ಟೈಪ್-C ಪೋರ್ಟ್ ಮತ್ತು 3.5mm ಆಡಿಯೊ ಜಾಕ್‌ ಅನ್ನು ಬೆಂಬಲಿಸಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

iPhone ಖರೀದಿಸುವಾಗ ಈ ಅಂಶ ಮರೆಯದೆ ಗಮನಿಸಿ;

Fri Dec 31 , 2021
ಜನಪ್ರಿಯ ಆಪಲ್ ಕಂಪನಿಯ ಐಫೋನ್‌ಗಳು ಆಂಡ್ರಾಯ್ಡ್‌ ಗಿಂತ ಭಿನ್ನ ರಚನೆ ಪಡೆದಿವೆ. ಥರ್ಡ್‌ ಪಾರ್ಟಿ ರಿಪೇರಿಗೆ ಬಂದಾಗ ಆಪಲ್ ಈಗಾಗಲೇ ತುಂಬಾ ಆಕ್ರಮಣಕಾರಿಯಾಗಿದೆ. ಐಒಎಸ್ 15.2 ರ ಹಿಂದಿನ ಐಫೋನ್‌ಗಳು ರಿಪೇರಿ ಮಾಡುವ ಸಮಯದಲ್ಲಿ ಬಳಸಿದ ಅಪರಿಚಿತ ಭಾಗಗಳ ಬಗ್ಗೆ ಬಳಕೆದಾರರಿಗೆ ಎಚ್ಚರಿಕೆ ನೀಡುತ್ತಿವೆ. ಆದಾಗ್ಯೂ, iOS 15.2 ಅಪ್‌ಡೇಟ್‌ನೊಂದಿಗೆ, ಕಂಪನಿಯು ಒಂದು ಹೆಜ್ಜೆ ಮುಂದಿಟ್ಟಿದೆ, ಅದು ಈಗ ಬಳಕೆದಾರರಿಗೆ ಐಫೋನ್ ರಿಪೇರಿಯಾಗಿದೆಯೇ ಮತ್ತು ನಿಜವಾದ ಭಾಗಗಳನ್ನು ಬಳಸಲಾಗಿದೆಯೇ ಎಂದು […]

Advertisement

Wordpress Social Share Plugin powered by Ultimatelysocial