68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಿದ ವಾಣಿಜ್ಯ ಚಲನಚಿತ್ರ ಮಂಡಳಿ!

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡಕ್ಕೆ ಮೂರು ಪ್ರಶಸ್ತಿಗಳು ಲಭಿಸಿವೆ. ವಿಶಿಷ್ಟ ಕಥಾಹಂದರದ ‘ಡೊಳ್ಳು’ ಸಿನಿಮಾಗೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ದೊರೆತಿದೆ. ‘ತಲೆದಂಡ’ ಚಿತ್ರಕ್ಕೆ ಪರಿಸರ ಕಾಳಜಿಯ ಕಥಾವಸ್ತುವುಳ್ಳ ರಾಷ್ಟ್ರ ಪ್ರಶಸ್ತಿಯ ಗರಿ ಒಲಿದಿದೆ. ‘ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ’ ವಿಭಾಗದಲ್ಲಿ ಗಿರೀಶ್​ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ’ ಚಿತ್ರ ಪ್ರಶಸ್ತಿಗೆ ಭಾಜನವಾಗಿದ್ದು, ಇದು ಕನ್ನಡಿಗರಿಗೆ ಹೆಮ್ಮಯ ಸಂಗತಿ.

ಇಂದು ಫಿಲ್ಮ್‌ ಚೇಂಬರ್ ವತಿಯಿಂದ ರಾಷ್ಟ್ರ ಪ್ರಶಸ್ತಿ ವಿಜೇತರಿಗಾಗಿ ಸನ್ಮಾನ ಮಾಡಲಾಯಿತು. ಡೊಳ್ಳು ಸಿನಿಮಾ ನಿರ್ಮಾಪಕರಾದ ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ದಂಪತಿ, ಚಿತ್ರದ ನಿರ್ದೇಶಕ ಸಾಗರ್ ಪುರಾಣಿಕ್ ಹಾಗೂ ‘ತಲೆದಂಡ’ ಚಿತ್ರದ ನಿರ್ಮಾಪಕಿ ಡಾ. ಹೇಮಾಮಾಲಿನಿ ಕೃಪಾಕರ್ ಸೇರಿದಂತೆ ಈ ಬಾರಿ ಪ್ರಶಸ್ತಿ ವಿಜೇತರಿಗೆ ಫಿಲ್ಮಂ ಚೇಂಬರ್ ಅಧ್ಯಕ್ಷರಾದ ಭಾ.ಮಾ.ಹರೀಶ್ ಸಾರಥ್ಯದಲ್ಲಿ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಫಿಲ್ಮಂ ಚೇಂಬರ್ ಪದಾಧಿಕಾರಿಗಳು, ಮಾಜಿ ಅಧ್ಯಕ್ಷ ಚಿನ್ನೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮಾಲೂರು ಜೆಡಿಎಸ್ ಅಭ್ಯರ್ಥಿಗೆ ವೋಟ್ ಹಾಕಿದ್ರೆ ಉಚಿತ ಕಟ್ಟಿಂಗ್!

Tue Jul 26 , 2022
ಮಾಲೂರು ಜೆಡಿಎಸ್ ಅಭ್ಯರ್ಥಿಯ ಬೆಂಬಲಿಗರಿಂದ ವಿಭಿನ್ನ ಪ್ರಯತ್ನ, ಮಾಲೂರು ಜೆಡಿಎಸ್ ಅಭ್ಯರ್ಥಿ ಜಿ.ಇ.ರಾಮೇಗೌಡರಿಗೆ ವೋಟ್ ಹಾಕಿದ್ರೆ ಉಚಿತ ಕಟ್ಟಿಂಗ್, ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕುಡಿಯನೂರು ಗ್ರಮದಲ್ಲಿ ಉಚಿತ ಕಟ್ಟಿಂಗ್, ಮಾಜಿ ಸೈನಿಕರು, ವೃದ್ಧರು, ಜೆಡಿಎಸ್ ವೋಟ್ ಹಾಕೊರಿಗೆ ಉಚಿತ ಶೌರಿಕ ಕೆಲಸ, ಕುಡಿಯನೂರು ಗ್ರಾಮದ ಸವಿತ ಸಮಾಜ ರಾಜೇಶ್ ಎಂಬುವರಿಗೆ ಉಚಿತವಾಗಿ ಅಂಗಡಿ ಮಾಡಿಕೊಟ್ಟ ಜೆಡಿಎಸ್ ಮುಖಂಡ, ಅಂಗಡಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ರಾಮೇಗೌಡ […]

Advertisement

Wordpress Social Share Plugin powered by Ultimatelysocial