ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು “ಲವ್ ಬರ್ಡ್ಸ್” ಚಿತ್ರದ ಸುಮಧುರ ಹಾಡು .

 

ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು “ಲವ್ ಬರ್ಡ್ಸ್” ಚಿತ್ರದ ಸುಮಧುರ ಹಾಡು .

ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ “ಲವ್ ಬರ್ಡ್ಸ್” ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ “ನೀನೇ ದೊರೆತ ಮೇಲೆ” ಎಂಬ ಹಾಡು ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

ಅಶ್ವಿನಿ ಪುನೀತ್ ರಾಜಕುಮಾರ್ ಅವರು ಇತ್ತೀಚೆಗೆ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು. ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ಮಾಸ್ತಿ ಮುಂತಾದವರು ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಕೌಟುಂಬಿಕ ಚಿತ್ರಗಳು ಇತ್ತೀಚೆಗೆ ಬರುತ್ತಿರುವುದು ಸ್ವಲ್ಪ ಕಡಿಮೆ. ಆ ಸಮಯದಲ್ಲಿ ನನಗೆ ಉತ್ತಮ ಕೌಟುಂಬಿಕ ಚಿತ್ರವೊಂದನ್ನು ನಿರ್ದೇಶಿಸಬೇಕೆಂದು ಆಸೆಯಾಯಿತು. ನಿರ್ಮಾಪಕ ಕಡ್ಡಿಪುಡಿ ಚಂದ್ರು ಕಥೆ ಮೆಚ್ಚಿ ನಿರ್ಮಾಣಕ್ಕೆ ಮುಂದಾದರು. ಪ್ರತಿಯೊಬ್ಬರ ಜೀವನದಲ್ಲೂ ಮದುವೆ ಮಹತ್ತರವಾದ ಘಟ್ಟ. ಎಲ್ಲರಿಗೂ ಮದುವೆ ಬಗ್ಗೆ ಸಾಕಷ್ಟು ಕನಸುಗಳಿರುತ್ತದೆ. ಆ ಪ್ರಸಂಗಕ್ಕೆ ತಕ್ಕದಾದ ಹಾಡೊಂದನ್ನು ಕವಿರಾಜ್ ಅದ್ಭುತವಾಗಿ ಬರೆದಿದ್ದಾರೆ. ಅರ್ಜುನ್ ಜನ್ಯ ಅಷ್ಟೇ ಚೆನ್ನಾಗಿ ಸಂಗೀತ ನೀಡಿದ್ದಾರೆ. ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಚೆನ್ನಾಗಿ ನಟಿಸಿದ್ದಾರೆ ಎಂದು ನಿರ್ದೇಶಕ ಪಿ.ಸಿ.ಶೇಖರ್ ಹಾಡಿನ ಬಗ್ಗೆ ಮಾಹಿತಿ ನೀಡಿದರು.
.
ನಮ್ಮ “ಲವ್ ಮಾಕ್ಟೇಲ್” ಚಿತ್ರದ ಮೊದಲ ಹಾಡನ್ನು ಪುನೀತ್ ಸರ್ ಹಾಗೂ ಆಶ್ವಿನಿ ಅವರಿಗೆ ತೋರಿಸಿದ್ದೆವು. ಇಬ್ಬರು ನೋಡಿ ಮನಸಾರೆ ಹರಸಿದ್ದರು. ಈ ಚಿತ್ರದ ಹಾಡನ್ನು ಅಶ್ವಿನಿ ಪುನೀತ್ ರಾಜಕುಮಾರ್ ಅವರು ಬಿಡುಗಡೆ ಮಾಡಿರುವುದು ಸಂತೋಷವಾಗಿದೆ ಎಂದರು ಮಿಲನ ನಾಗರಾಜ್.

ಮದುವೆಗೆ ಸಂಬಂಧಿಸಿದ
ಈ ಹಾಡು ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ ಎಂದು ಸಾಹಿತಿ ಕವಿರಾಜ್ ತಿಳಿಸಿದರು. ಹಾಡು ಬಿಡುಗಡೆ ಮಾಡಿದ್ದ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಹಾಗು ಆಗಮಿಸಿದ್ದ ಗಣ್ಯರಿಗೆ ನಿರ್ಮಾಪಕ ಕಡ್ಡಿಪುಡಿ ಚಂದ್ರು ಧನ್ಯವಾದ ತಿಳಿಸಿದರು.

ಡಾರ್ಲಿಂಗ್ ಕೃಷ್ಣ, ಮಿಲನ ನಾಗರಾಜ್, ಸಂಯುಕ್ತ ಹೊರನಾಡು, ಸಾಧುಕೋಕಿಲ, ರಂಗಾಯಣ ರಘು, ಅವಿನಾಶ್, ವೀಣಾ ಸುಂದರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟುಹಬ್ಬದಂದು ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ “ಕಬ್ಜ” ಬಿಡುಗಡೆ

ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ನಿಂದ ಸಿನಿರಸಿಕರಿಗೆ ಯುಗಾದಿ ಹಬ್ಬಕ್ಕೆ ಭರ್ಜರಿ ಉಡುಗೊರೆ .

ಕರ್ನಾಟಕ ಮಾತ್ರವಲ್ಲದೆ, ಇಡೀ ಭಾರತಾದ್ಯಂತ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಕನ್ನಡಿಗರ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”, 2023 ರ ಮಾರ್ಚ್ 17 ಅಂದರೆ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ನಾಡಿನ ದೊಡ್ಡ ಹಬ್ಬವಾದ ಯುಗಾದಿ ಕೂಡ ಸಮೀಪದಲ್ಲಿರುವುದು ವಿಶೇಷ.

ಇಂಡಿಯನ್ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಮುಖ ಪಾತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸಿರುವ ಹಾಗೂ ಆರ್ ಚಂದ್ರು ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರು ನೀಡುತ್ತಿದ್ದ ಪ್ರೋತ್ಸಾಹ ಅಪಾರ. ಚಿತ್ರದ ಕೆಲವು ತುಣುಕುಗಳನ್ನು ಅವರಿಗೆ ತೋರಿಸಿದ್ದಾಗ ಹಾಲಿವುಡ್ ಚಿತ್ರ ಇದ್ದ ಹಾಗೆ ಇದೆ ಎಂದು ಹೇಳಿ ಮೆಚ್ಚುಗೆ ಸೂಚಿಸಿದ್ದರು. ಸಹೃದಯಿ, ಅಭಿಮಾನಿಗಳ ಪಾಲಿಗಂತೂ ದೇವರೆ ಆಗಿರುವ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ನಮ್ಮ “ಕಬ್ಬ” ಚಿತ್ರವನ್ನು ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದೇವೆ. ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಹಾಗೂ ಹೊಸವರ್ಷದ ಮೊದಲ ದಿನವಾದ ಯುಗಾದಿ ಹಬ್ಬದ ಸಮೀಪದಲ್ಲೇ ನಮ್ಮ ಚಿತ್ರ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ ಎಂದು ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆ ತಿಳಿಸಿದೆ‌.

ಕಳೆದವರ್ಷ ಕನ್ನಡದ ಸಾಕಷ್ಟು ಚಿತ್ರಗಳು ಭರ್ಜರಿ ಯಶಸ್ವಿಯಾಗಿ ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ನೋಡುವಂತಾಗಿತ್ತು. ಈಗ ಎಲ್ಲೆಡೆ ಅಷ್ಟೇ ಕುತೂಹಲದಿಂದ ಕಾಯತ್ತಿರುವ ಹಾಗೂ ಐಎಂಡಿಬಿ 2023ರ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡಿದಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಚಿತ್ರ “ಕಬ್ಜ”ದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಆಭಿಮಾನಿಗಳ ಕಾತುರಕ್ಕೆ ಚಿತ್ರತಂಡದಿಂದ ಉತ್ತರ ಸಿಕ್ಕಿದೆ.

ಈಗಾಗಲೇ ಫಸ್ಟ್ ಲುಕ್, ಟೀಸರ್ ಮೂಲಕ ಅಭಿಮಾನಿಗಳ ಮನ ಗೆದ್ದಿರುವ “ಕಬ್ಜ” ಚಿತ್ರ ಅತೀ ದೊಡ್ಡ ಯಶಸ್ಸು ಕಾಣಲಿ ಎಂಬುದೇ ಪ್ರತಿಯೊಬ್ಬ ಕನ್ನಡಾಭಿಮಾನಿಯ ಹಾರೈಕೆ.

 

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸೆಟ್ಟೇರಿತು ಕೆ ಆರ್ ಎಸ್ ಪ್ರೊಡಕ್ಷನ್ಸ್ ಚೊಚ್ಚಲ ಸಿನಿಮಾ- ಅಥರ್ವ ಆರ್ಯ ನಿರ್ದೇಶನದ ಸಿನಿಮಾ!

Tue Jan 24 , 2023
ಕೆ ಆರ್ ಎಸ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಚೊಚ್ಚಲ ಚಿತ್ರದ ಮುಹೂರ್ತ ಇಂದು ನೆರವೇರಿದೆ. ಈಗಾಗಲೇ ‘ಜೂಟಾಟ’, ‘ಗುಬ್ಬಚ್ಚಿ’ ಸಿನಿಮಾ ನಿರ್ದೇಶಿಸಿರುವ ಅಥರ್ವ ಆರ್ಯ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೂರನೇ ಚಿತ್ರ ಇದಾಗಿದೆ. ಚಿತ್ರದಲ್ಲಿ ಸಂಜಯ್ ಹಾಗೂ ಜೀವಿತ ವಸಿಷ್ಠ ನಾಯಕ ನಾಯಕಿಯಾಗಿ ನಟಿಸುತ್ತಿದ್ದು, ನೆನಪಿರಲಿ ಪ್ರೇಮ್ ಪ್ರಮುಖ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಚಿತ್ರದ ಮುಹೂರ್ತ ಆಚರಿಸಿಕೊಂಡ ಚಿತ್ರತಂಡ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.ತಬಲ ನಾಣಿ ಮಾತನಾಡಿ ಮೊದಲ […]

Advertisement

Wordpress Social Share Plugin powered by Ultimatelysocial