ವಿವಿಧ ಮಠಾಧೀಶರ ಹಾಗೂ ಗಣ್ಯರ ಸಮ್ಮುಖದಲ್ಲಿ “ವಿರಾಟಪುರ ವಿರಾಗಿ” ಚಿತ್ರದ ಮೊದಲ ನೋಟ ಅನಾವರಣ.

ಇದು ಆಧುನಿಕ ಬಸವಣ್ಣ ಪೂಜ್ಯ ಹಾನಗಲ್ ಕುಮಾರ ಶಿವಯೋಗಿಗಳ ಜೀವನಾಧಾರಿತ ಚಿತ್ರ.

ಆಧುನಿಕ ಬಸವಣ್ಣ ಎಂದೇ ಖ್ಯಾತರಾಗಿರುವ ಹಾನಗಲ್ ಕುಮಾರ ಶಿವಯೋಗಿಗಳ ಜೀವನಾಧಾರಿತ “ವಿರಾಟಪುರ ವಿರಾಗಿ” ಚಿತ್ರದ ಮೊದಲ ನೋಟ ಇತ್ತೀಚಿಗೆ ಬಿಡುಗಡೆಯಾಯಿತು. ಶ್ರೀಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳು, ಶ್ರೀ ಸದಾಶಿವ ಮಹಾಸ್ವಾಮಿಗಳು ಹಾವೇರಿ, ಶ್ರೀ ಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಘನಬಸವ ಅಮರೇಶ್ವರ ಮಹಾಸ್ವಾಮಿಗಳು ಶಿವಮೊಗ್ಗ, ಕರ್ನಾಟಕ ಚಲನಚಿತ್ರ ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ, ಪದ್ಮಶ್ರೀ ಪುರಸ್ಕೃತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಹಾಗೂ ಮಾಜಿ ಸಚಿವರಾದ ಅಲ್ಲಮ ವೀರಭದ್ರಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು‌.‌ ಬಿ.ಎಸ್ ಲಿಂಗದೇವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ‌.‌ ಸಮಾಧಾನ ತಂಡ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

ಎರಡೂ ವರೆ ವರ್ಷಗಳ ಹಿಂದೆ ಜಡೆಯ ಮಹಾಸ್ವಾಮಿಗಳು ನನಗೆ ಹಾನಗಲ್ ಕುಮಾರ ಶಿವಯೋಗಿಗಳ ಕುರಿತು ಸಿನಿಮಾ ಮಾಡಲು ಹೇಳಿದರು. ಆನಂತರ ನನ್ನ ಆಪ್ತರ ಬಳಿ ಈ ವಿಷಯವನ್ನು ಸಮಾಲೋಚನೆ ಮಾಡಿದೆ. ಅವರೆಲ್ಲರೂ ನೀವು ಈ ಚಿತ್ರವನ್ನು ನಿರ್ದೇಶನ ಮಾಡಿ ಎಂದು ಧೈರ್ಯ ತುಂಬಿದರು. ನಾನು ನಿರ್ದೇಶನಕ್ಕೆ ಮುಂದಾದೆ. ಅನೇಕ ಮಠಾಧೀಶರನ್ನು ಹಾಗೂ ವಿದ್ವಾಂಸರನ್ನು ಸಂಪರ್ಕಿಸಿ ಸ್ಕ್ರಿಪ್ಟ್ ಸಿದ್ದ ಮಾಡಿದೆ. “ಸಮಧಾನ” ತಂಡದಿಂದ ಚಿತ್ರ ನಿರ್ಮಾಣವಾಗಿದೆ.
ಕುಮಾರ ಶಿವಯೋಗಿಗಳ ಪಾತ್ರದಲ್ಲಿ ಸುಚೇಂದ್ರ ಪ್ರಸಾದ್ ಆಭಿನಯಿಸಿದ್ದಾರೆ. ಈಗ ಚಿತ್ರ ಸಿದ್ದವಾಗಿದೆ. ಶಿಕ್ಷಣ, ಆರೋಗ್ಯ ಹಾಗೂ ಮಹಿಳಾ ಸಬಲೀಕರಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳ ಹರಿಕಾರರಾದ ಕುಮಾರ ಶಿವಯೋಗಿಗಳ ಜೀವನಾಧಾರಿತ ಈ ಚಿತ್ರದ ಮೊದಲ ನೋಟ ಪರಮಪೂಜ್ಯರ ಹಾಗೂ ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಗಿರುವುದು ತುಂಬಾ ಸಂತೋಷವಾಗಿದೆ. ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಅಶೋಕ್ ವಿ ರಾಮನ್ ಛಾಯಾಗ್ರಹಣ ಹಾಗೂ ಗುಣಶೇಖರನ್ ಸಂಕಲನ ಈ ಚಿತ್ರಕ್ಕಿದೆ ಎಂದು ನಿರ್ದೇಶಕ ಬಿ.ಎಸ್ ಲಿಂಗದೇವರು ಚಿತ್ರದ ಕುರಿತು ಮಾಹಿತಿ ನೀಡಿದರು.

ಇಂತಹ ಪಾತ್ರದಲ್ಲಿ ನಾನು ಅಭಿನಯಿಸಿರುವುದು ನನ್ನ ಪುಣ್ಯ ಎಂದರು ನಟ ಸುಚೇಂದ್ರ ಪ್ರಸಾದ್.

ನೂರು ವರ್ಷಗಳ ಹಿಂದೆ ಸಮಾಜ ಈ ರೀತಿ ಇರಲಿಲ್ಲ. ಅಂತಹ ಸಮಯದಲ್ಲಿ ಅನೇಕ ಸುಧಾರಣೆಗೆ ಮುಂದಾದ, ಆಧುನಿಕ ಬಸವಣ್ಣ ಎಂದೇ ಎಲ್ಲರಿಂದಲೂ ಕರೆಯಲ್ಪಡುವ ಹಾನಗಲ್ ಕುಮಾರ ಶಿವಯೋಗಿಗಳ ಜೀವನಾಧಾರಿತ ಈ ಚಿತ್ರವನ್ನು ಪ್ರತಿಯೊಬ್ಬರೂ ನೋಡಬೇಕು. ಲಿಂಗ ದೇವರು ನಿರ್ದೇಶನದ ಈ ಚಿತ್ರ ಜನವರಿ 12ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ರಾಜ್ಯದ ಐದು ಕಡೆಗಳಿಂದ ರಥಯಾತ್ರೆ ನಡೆಯಲಿದೆ ಎಂದು ಜಡೆ ಅಮರೇಶ್ವರ ಶ್ರೀಗಳು ತಿಳಿಸಿದರು.

ಶಾಮನೂರು ಶಿವಶಂಕರಪ್ಪ, ನಿರ್ದೇಶಕ ಗಿರೀಶ್ ಕಾಸರವಳ್ಳಿ ಹಾಗೂ ಅಲ್ಲಮ ವೀರಭದ್ರಪ್ಪ ಮುಂತಾದ ಗಣ್ಯರು ಮಾತನಾಡಿ, ಚಿತ್ರಕ್ಕೆ ಶುಭ ಕೋರಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಚಲಿಸುತ್ತಿದ್ದ ಲಾರಿ ಕೆಳಗೆ ತಳ್ಳಿ ಪತ್ನಿ ಕೊಂದ ಪತಿ!

Sun Dec 4 , 2022
  ರಸ್ತೆ ಬದಿಯಲ್ಲಿ ಕ್ಷುಲಕ ವಿಚಾರಕ್ಕೆ ನಡೆದ ಜಗಳ ಪತ್ನಿಯನ್ನು ಚಲಿಸುತ್ತಿದ್ದ ಲಾರಿ ಕೆಳಗೆ ತಳ್ಳಿ ಕೊಲೆ ಮಾಡುವಲ್ಲಿ ಅಂತ್ಯಗೊಂಡ ಘಟನೆ ಚಿಕ್ಕಬಳ್ಳಾಪುರಜಿಲ್ಲೆಯಚಿಂತಾಮಣಿನಗರದಲ್ಲಿನಡೆದಿದೆ. ಶಿಡ್ಲಘಟ್ಟಮೂಲದಸುಮೈರಾಸುಲ್ತಾನ್ (40) ಮೃತಪಟ್ಟಿದ್ದು, ಮುನಿಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಮುನಿಕೃಷ್ಣ ಮತ್ತು ಸುಮೈರಾಕೆಲವುವರ್ಷಗಳಿಂದಲೀವ್‌ ಇನ್‌ ರಿಲೇಶನ್‌ ಶಿಪ್‌ನಲ್ಲಿದ್ದರು. ಇಬ್ಬರೂಸ್ಥಳೀಯರಬಳಿಪತಿ, ಪತ್ನಿ ಎಂದು ಹೇಳಿಕೊಂಡಿದ್ದರು. ಶನಿವಾರ ಬೆಳಿಗ್ಗೆ ನಗರದಗ್ರಂಥಾಲಯಮುಂದೆನಡುರಸ್ತೆಯಲ್ಲಿಇಬ್ಬರು ಜಗಳಮಾಡುತ್ತಿದ್ದರು. ಅದೇ ವೇಳೆರಸ್ತೆಯಲ್ಲಿಬರುತ್ತಿದ್ದ ಲಾರಿ ಗಮನಿಸಿದ ಮುನಿಕೃಷ್ಣ ಉದ್ದೇಶಪೂರ್ವಕವಾಗಿಯೇಸುಮೈರಾಳನ್ನುಲಾರಿಕೆಳಗೆತಳ್ಳಿದ್ದಾನೆ. ಲಾರಿ ಕೆಳಗೆ ಸಿಲುಕಿದ ಸುಮೈರಾಸುಲ್ತಾನ್‌ ಸ್ಥಳದಲ್ಲಿಮೃತಪಟ್ಟಿದ್ದು, ಪಕ್ಕದಲ್ಲಿದ್ದಪೊಲೀಸರುತಕ್ಷಣಸ್ಥಳಕ್ಕೆಆಗಮಿಸಿಆರೋಪಿಮುನಿಕೃಷ್ಣನನ್ನುಬಂಧಿಸಿದ್ದಾರೆ. ಇಬ್ಬರಿಗೂ […]

Advertisement

Wordpress Social Share Plugin powered by Ultimatelysocial