ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಕಾಂಗ್ರೆಸ್ ನಿಂದ ರಾಜ್ಯಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಬೇಸರದಿಂದ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅವರಿಗೆ ಪತ್ರ ಬರೆದು ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ಪಕ್ಷಕ್ಕೆ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆಯಾಗಿದ್ದೆ. ಪಕ್ಷ ಸೇರಿದಾಗಿನಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿಯಿದೆ. ಸಧ್ಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನು ಎರಡು ದಿನಗಳ ಹಿಂದೆ ಕಾಂಗ್ರೆಸ್ ಮುಖ್ಯಮಮ್ತ್ರಿ ಚಂದ್ರು ಅವರನ್ನು ಸಾಂಸ್ಕೃತಿಕ ಸಮಿತಿ ಚೇರ್ ಮೆನ್ ಆಗಿ ನೇಮಕಗೊಳಿಸಿತ್ತು. ಈ ಬಗ್ಗೆಯೂ ಪತ್ರದಲ್ಲಿ ಬರೆದಿರುವ ಚಂದ್ರು, ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿದ ಜವಾಬ್ದಾರಿ ವಹಿಸಿಕೊಳ್ಳುವ ಪ್ರಮೇಯವೇ ಉದ್ಭವಿಸಲ್ಲ ಎಂದು ತಿಳಿಸಿದ್ದಾರೆ.

ಪಕ್ಷಕ್ಕೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದರೂ ಪಕ್ಷ ತಮಗೆ ಗಮನಿಸದೇ ರಾಜ್ಯಸಭೆ ಟಿಕೆಟ್ ನೀಡಿಲ್ಲ ಎಂಬ ಬೇಸರದಿಂದ ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಗಲು ರಾತ್ರಿ ಕೆಲಸ ಮಾಡಿ ರಸ್ತೆ ಗುಂಡಿ ಮುಚ್ಚಿ; ಬಿಬಿಎಂಪಿ ಆಯುಕ್ತರು!

Sun May 29 , 2022
ಬೆಂಗಳೂರು, ಮೇ 29: ಬಿಬಿಎಂಪಿ ವ್ಯಾಪ್ತಿಯಲ್ಲಿ ಫಿಕ್ಸ್ ಮೈ ಸ್ಟ್ರೀಟ್ ಆಯಪ್ ಮೂಲಕ ರಸ್ತೆ ಗುಂಡಿಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಆಯಾ ವಲಯ ವ್ಯಾಪ್ತಿಯ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆ ಹಾಗೂ ವಾರ್ಡ್ ರಸ್ತೆಗಳಲ್ಲಿ ಆದ್ಯತೆ ಮೇರೆಗೆ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಹಾಗೂ ಮಳೆ ಮುಂಜಾಗ್ರತಾ ಕ್ರಮಗಳಿಗೆ ಸಂಬಂಧಿಸಿದಂತೆ ನಡೆದ […]

Advertisement

Wordpress Social Share Plugin powered by Ultimatelysocial