ಮುಂದಿನ ಹಣಕಾಸು ವರ್ಷದಲ್ಲಿ ಅನುಷ್ಠಾನ ಸಾಧ್ಯತೆ

4 ಕಾರ್ಮಿಕ ಸಂಹಿತೆ: ಮುಂದಿನ ಹಣಕಾಸು ವರ್ಷದಲ್ಲಿ ಅನುಷ್ಠಾನ ಸಾಧ್ಯತೆ

ನವದೆಹಲಿ: 13 ರಾಜ್ಯಗಳು ನಿಯಮ ರೂಪಿಸಿರುವುದರಿಂದ ನಾಲ್ಕು ಕಾರ್ಮಿಕ ಸಂಹಿತೆಗಳು ಮುಂದಿನ ಹಣಕಾಸು ವರ್ಷದಲ್ಲಿ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೇಂದ್ರ ಕಾರ್ಮಿಕ ಸಚಿವಾಲಯವು ನಿಯಮಗಳನ್ನು ರೂಪಿಸಿ ಆಗಿದೆ.

2021ರ ಫೆಬ್ರುವರಿಯಲ್ಲಿ ಈ ಸಂಹಿತೆಗಳಿಗೆ ಕರಡು ನಿಯಮಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರವು ಪೂರ್ಣಗೊಳಿಸಿದೆ. ಇವುಗಳಿಗೆ ಸಂಬಂಧಿಸಿದಂತೆ ಬಹುತೇಕ ರಾಜ್ಯ ಸರ್ಕಾರಗಳು ಅಧಿಸೂಚನೆಯಲ್ಲಿ ಪ್ರಕಟಿಸಿವೆ. ಹೀಗಾಗಿ 2022-23ನೇ ಹಣಕಾಸು ವರ್ಷದಲ್ಲಿ ಕಾಯ್ದೆಗಳು ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಉತ್ತರಾಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸಗಡ, ಒಡಿಶಾ, ಅರುಣಾಚಲ ಪ್ರದೇಶ, ಹರಿಯಾಣ, ಜಾರ್ಖಂಡ್, ಪಂಜಾಬ್‌, ಮಣಿಪುರ, ಬಿಹಾರ, ಹಿಮಾಚಲ ಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರ ತಮ್ಮ ಅಧಿಸೂಚನೆಯಲ್ಲಿ ಪ್ರಕಟಿಸಿವೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಡಿಕೆ, ಕಾಫಿ, ಮೆಣಸು ಹಾಗೂ ತರಕಾರಿ ಬೆಲೆ ಮಾರುಕಟ್ಟೆ ಬೆಲೆ

Mon Dec 20 , 2021
ಕರ್ನಾಟಕದಲ್ಲಿ ಇಂದು (ಡಿಸೆಂಬರ್ 19) ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ, ಕಾಫಿ, ಮೆಣಸು, ತರಕಾರಿ, ಬೆಳೆಕಾಳು ಹಾಗೂ ರಬ್ಬರ್‌ನ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಉಂಟಾಗಿದ್ದ ಹಣ್ಣು, ತರಕಾರಿ ಪೂರೈಕೆಯಲ್ಲಿ ವ್ಯತ್ಯಯ ಇದೀಗ ಸಮರ್ಪಕವಾಗಿದೆ. ಸಗಟು ಮಾರುಕಟ್ಟೆ ದರದಲ್ಲಿ ಏರಿಳಿತ ಇನ್ನೂ ಮುಂದುವರೆದಿದೆ. ಹವಾಮಾನ ಮುನ್ಸೂಚನೆಯಂತೆ ಮಳೆ ಆಂಧ್ರ, ತಮಿಳುನಾಡು, ಕೇರಳದಲ್ಲಿ ಮುಂದುವರೆಯುವ ಸಾಧ್ಯತೆಯಿದೆ. ಆದರೆ, ಓಮಿಕ್ರಾನ್ ಭೀತಿ […]

Advertisement

Wordpress Social Share Plugin powered by Ultimatelysocial