ಮುಖ್ಯಮಂತ್ರಿಗಳೇ ರಾಜಧರ್ಮ ಪಾಲಿಸಿ.‌ ಇಲ್ಲದಿದ್ದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನೀವು ಅಯೋಗ್ಯರಾಗಿ ಬಿಡುತ್ತೀರಿ. ಮುನೀರ್ ಕಾಟಿಪಳ್ಳ ಆಗ್ರಹ

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಲಿದ್ದು, ಇದೇ ವೇಳೆ ಅದೇ ಗ್ರಾಮದಲ್ಲಿ ವಾರದ ಹಿಂದಷ್ಟೇ ಹತ್ಯೆಗೀಡಾಗಿರುವ ಮಹಮ್ಮದ್ ಮಸೂದ್ ಮನೆಗೂ ಭೇಟಿ ನೀಡಬೇಕು ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ.

‘ಬೊಮ್ಮಾಯಿಯವರು ಕರ್ನಾಟಕ ರಾಜ್ಯಕ್ಕೆ ಮುಖ್ಯಮಂತ್ರಿ. ಆರು ಕೋಟಿ ಕನ್ನಡಿಗರಿಗೂ ಅವರೇ ಮುಖ್ಯಮಂತ್ರಿ. ಬಿಜೆಪಿ ಪಕ್ಷದವರಿಗೆ, ಒಂದು ಮತ ಧರ್ಮಕ್ಕೆ ಮಾತ್ರ ಮುಖ್ಯಮಂತ್ರಿ ಅಲ್ಲ. ಬೆಳ್ಳಾರೆಯಲ್ಲಿ ಕೊಲೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಇಂದು ನೀವು ಭೇಟಿ ನೀಡುವಾಗ ಅದೇ ಗ್ರಾಮದಲ್ಲಿ ವಾರದ ಹಿಂದೆ ಮತೀಯ ದ್ವೇಷಕ್ಕೆ ಬಲಿಯಾದ ಅಮಾಯಕ ಹುಡುಗ ಮಹಮ್ಮದ್ ಮಸೂದ್ ಮನೆಗೂ ಭೇಟಿ ನೀಡಬೇಕು. ಪ್ರವೀಣ್ ನ ವಿಧವೆ ಹೆಂಡತಿ, ಅನಾಥ ತಂದೆ ತಾಯಿಯರಿಗೆ ಸಾಂತ್ವನ ಹೇಳುವಾಗ, ಮಸೂದ್ ನ ವಿಧವೆ ತಾಯಿಗೂ ಸಾಂತ್ವನ ಹೇಳಬೇಕು’ ಎಂದು ತಿಳಿಸಿದ್ದಾರೆ.

‘ಯಾವುದೇ ಕಾರಣಕ್ಕು ತಾರತಮ್ಯ ಎಸಗಬಾರದು. ಕೊಲೆ ಗೀಡಾದ ಎರಡೂ ಕುಟುಂಬದ ಹೆಣ್ಣು ಜೀವಗಳು ಸಮಾನವಾಗಿ ನೊಂದಿವೆ. ಮುಖ್ಯಮಂತ್ರಿಗಳೇ ರಾಜಧರ್ಮ ಪಾಲಿಸಿ.‌ ಇಲ್ಲದಿದ್ದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನೀವು ಅಯೋಗ್ಯರಾಗಿ ಬಿಡುತ್ತೀರಿ. ಕನ್ನಡ ನಾಡಿನ ಮಹಾನ್ ಪರಂಪರೆಗೆ, ಮುಖ್ಯಮಂತ್ರಿ ಸ್ಥಾನದ ಘನತೆಗೆ ಅಪಚಾರ ಎಸಗಬೇಡಿ‌. ಇದು ನಿಮ್ಮಲ್ಲಿ ಕಳಕಳಿಯ ಮನವಿ’ ಎಂದು ಮುನೀರ್ ಕಾಟಿಪಳ್ಳ *ಪ್ರಕಟನೆಯಲ್ಲಿ ತಿಳಿಸಿದ್ದಾರೆ*.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಈಗ 18 ತುಂಬುವ ಮೊದಲೇ ವೋಟರ್ ಐಡಿಗೆ ಅರ್ಜಿ ಸಲ್ಲಿಸಿ

Thu Jul 28 , 2022
  ನವದೆಹಲಿ,ಜುಲೈ. 28: ಈಗ 17 ವರ್ಷ ಮೇಲ್ಪಟ್ಟ ಯುವಕರು 18 ವರ್ಷ ತುಂಬಿದಾಗ ಮತದಾರರಾಗಿ ಸೇರ್ಪಡೆಗೊಳ್ಳಲು ಮುಂಚಿತವಾಗಿ ಅರ್ಜಿ ಸಲ್ಲಿಸಬಹುದು ಎಂದು ಚುನಾವಣಾ ಆಯೋಗ (ಇಸಿ) ಪ್ರಕಟಣೆ ಹರಡಿಸಿದೆ. 17 ವರ್ಷಕ್ಕಿಂತ ಮೇಲ್ಪಟ್ಟ ಯುವಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಮುಂಗಡವಾಗಿ ಅರ್ಜಿ ಸಲ್ಲಿಸಬಹುದು. ಈಗ ಒಂದು ವರ್ಷದ ಜನವರಿ 1ರಂದು 18 ವರ್ಷ ವಯಸ್ಸನ್ನು ತಲುಪುವ ಪೂರ್ವಾಪೇಕ್ಷಿತ ಮಾನದಂಡವನ್ನು ನಿರೀಕ್ಷಿಸಬೇಕಾಗಿಲ್ಲ ಎಂದು ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ. […]

Advertisement

Wordpress Social Share Plugin powered by Ultimatelysocial