ತರಕಾರಿ ವ್ಯಾಪಾರದಲ್ಲಿನ ಲಾಭವೇ ಮುಳುವಾಯ್ತಾ?.. ಕ್ಯಾಪ್ಸಿಕಂ ರವಿ ಕೊಲೆ ಆರೋಪಿಗಳ ಬಂಧನ

 

ಮೈಸೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಕ್ಯಾಪ್ಸಿಕಂ ರವಿಯನ್ನ ಬರ್ಬರವಾಗಿ ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನ ಹೊರವಲಯದಲ್ಲಿ ಬಂಧಿಸಲಾಗಿದೆ.

ಮೈಸೂರು: ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕ್ಯಾಪ್ಸಿಕಂ ರವಿಯನ್ನ ಬರ್ಬರವಾಗಿ ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನ ಹೊರವಲಯದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳು ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು.

ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆಯ ಇನ್ಸ್​ಪೆಕ್ಟರ್ ರವಿ ನೇತೃತ್ವದ ತನಿಖಾ ತಂಡ ಆರೋಪಿಗಳನ್ನು ಬಂಧಿಸಿದೆ. ಬಳಿಕ ಮೈಸೂರಿಗೆ ಕರೆತಂದು ಅಜ್ಞಾತ ಸ್ಥಳದಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ, ರವಿಯ ಹತ್ಯೆಗೆ ಕಾರಣಗಳನ್ನ ಬಿಚ್ಚಿಟ್ಟಿರುವ ಆರೋಪಿಗಳು ಆತ ತರಕಾರಿ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸಿದ್ದಲ್ಲದೆ, ಕೋಟ್ಯಂತರ ರೂಪಾಯಿ ಅಸ್ತಿ ಸಂಪಾದನೆ ಮಾಡಿದ್ದ. ಒಂದೆರಡು ಬಾರಿ ರವಿ ಬಳಿ ಹಣದ ಸಹಾಯ ಕೇಳಿದಾಗ ಕೊಡಲು ನಿರಾಕರಿಸಿದ್ದ. ಆದ್ದರಿಂದ ದ್ವೇಷ ಉಂಟಾಗಿ ಕೊಲೆ ನಡೆದಿದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ.

ಆರೋಪಿಗಳಿಂದ ಕೊಲೆಗೆ ಬಳಸಿದ್ದ ಮಾರಕಾಸ್ತ್ರಗಳು ಹಾಗೂ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಪಿಎಂಸಿ ಆವರಣಕ್ಕೆ ಕರೆತಂದು ಹತ್ಯೆಮಾಡಿದ ಸ್ಥಳದ ಮಹಜರು ನಡೆಸಿದ್ದಾರೆ. ಆರೋಪಿಗಳು ಮೈಸೂರಿನವರೇ ಆಗಿದ್ದು, ಬಂಡಿಪಾಳ್ಯ ಎಪಿಎಂಸಿ ಮಾರುಕಟ್ಟೆಯ ವರ್ತಕರೇ ಎಂದು ಹೇಳಲಾಗುತ್ತಿದೆ.

ಈ ಪ್ರಕರಣ ಸಂಬಂಧ ಇನ್ನೂ ತನಿಖೆ ನಡೆಯುತ್ತಿರುವುದರಿಂದ ಬಳಿಕ ಸಂಪೂರ್ಣ ಮಾಹಿತಿ ನೀಡುವುದಾಗಿ ಎಸ್​ಪಿ ಆರ್. ಚೇತನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ 6,500 ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ನಿರ್ಧಾರ:

Sun May 8 , 2022
ಬೆಂಗಳೂರು: ರಾಜ್ಯದಲ್ಲಿ 6,500 ಶಾಲಾ ಕಟ್ಟಡಗಳನ್ನು ಈ ವರ್ಷವೇ ನಿರ್ಮಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಆ ಮೂಲಕ ಶಿಕ್ಷಣಕ್ಕೆ ಶಕ್ತಿ ತುಂಬುವುದು ಸರ್ಕಾರದ ಸಂಕಲ್ಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಮೊದಲಿಯಾರ್ ಸೇವಾ ಸಂಘದ ವಜ್ರಮಹೋತ್ಸವ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರಕ್ಕೆ ಅಗತ್ಯ ಮೂಲ ಸವಲತ್ತು ಒದಗಿಸಲು ಆದ್ಯತೆ ನೀಡಲಾಗಿದೆ. ಸರ್ಕಾರದ ಜತೆಗೆ ಸಮುದಾಯದ ಸಹಭಾಗಿತ್ವವೂ ಅಷ್ಟೇ ಮುಖ್ಯವಾಗಿದೆ ಎಂದರು. ನಗರ ಪ್ರದೇಶದಲ್ಲಿ ಶಾಲಾ […]

Advertisement

Wordpress Social Share Plugin powered by Ultimatelysocial