ಮುರುಗೇಶ್ ನಿರಾಣಿ:ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಹೊಸದಾಗಿ ವಿಮಾನ ನಿಲ್ದಾಣ;

ಬೆಂಗಳೂರು: ಬಾಗಲಕೋಟೆ ಸೇರಿದಂತೆ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಹೊಸದಾಗಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಖಾತೆ ಸಚಿವ ಮುರುಗೇಶ್ ನಿರಾಣಿ ಪ್ರಕಟಿಸಿದ್ದಾರೆ.

ಸದ್ಯಕ್ಕೆ ರಾಜ್ಯದಲ್ಲಿ ಎಂಟು ವಿಮಾನ ನಿಲ್ದಾಣಗಳಿವೆ. ಈ ಹೊಸ ನಾಲ್ಕು ವಿಮಾನ ನಿಲ್ದಾಣಗಳ ನಿರ್ಮಾಣದೊಂದಿಗೆ ಪ್ರತಿ 100 ಕಿಲೋಮೀಟರ್ ವ್ಯಾಪ್ತಿಯಲ್ಲಿ ಒಂದು ವಿಮಾನ ನಿಲ್ದಾಣಗಳು ಲಭ್ಯವಾಗಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಬಾಗಲಕೋಟೆ, ರಾಯಚೂರು, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಹೊಸದಾಗಿ ವಿಮಾನ ನಿಲ್ದಾಣಗಳು ಆರಂಭವಾಗಲಿವೆ. ಈ ಉದ್ದೇಶಕ್ಕಾಗಿ ನಿವೇಶನಗಳನ್ನು ಪರಿಶೀಲಿಸಲಾಗಿದೆ. ಕನಿಷ್ಠ 500 ಎಕರೆ ಜಮೀನನ್ನು ಈ ಉದ್ದೇಶಕ್ಕೆ ಗುರುತಿಸಲಾಗಿದ್ದು, ರಾಜ್ಯ ಮುಂದಿನ ದಿನಗಳಲ್ಲಿ ವಿಮಾನ ಉತ್ಪಾದನಾ ಘಟಕವನ್ನು ಕೂಡಾ ಹೊಂದಲಿದೆ ಎಂದು ಹೇಳಿದರು.

ಈ ವರ್ಷದ ನವೆಂಬರ್ 2ರಿಂದ 4ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, ಸುಮಾರು 10 ಲಕ್ಷ ಕೋಟಿ ರೂಪಾಯಿ ಹೂಡಿಕೆ ಹರಿದುಬರುವ ನಿರೀಕ್ಷೆ ಇದೆ ಎಂದರು. ಹಿಂದಿನ ಜಾಗತಿಕ ಹೂಡಿಕೆದಾರರ ಸಮಾವೇಶ ಯಶಸ್ವಿಯಾಗಿದ್ದು, ಹೊಸ ಸಮಾವೇಶದ ಮೂಲಕ ಕನಿಷ್ಠ 10 ಲಕ್ಷ ಮಂದಿ ನಿರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಲಿದೆ ಎಂದು ಭರವಸೆ ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

COVID:ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ ಒಂದೇ ದಿನ 525 ಜನ ಬಲಿ;

Sun Jan 23 , 2022
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 3,33,533 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದ ಪಾಸಿಟಿವಿಟಿ ರೇಟ್ ಶೇ.17.78ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಕುಸಿತವಾಗಿದ್ದು, 24 ಗಂಟೆಯಲ್ಲಿ 525 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 489409ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 2187205 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 259168 ಜನರು ಕೋವಿಡ್ ನಿಂದ […]

Advertisement

Wordpress Social Share Plugin powered by Ultimatelysocial