ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಅಂಗಡಿ ಧ್ವಂಸ ನಾಲ್ವರು ಆರೋಪಿಗಳ ಬಂಧನ!

 

ಧಾರವಾಡ, ಏಪ್ರಿಲ್ 11: ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಅಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಅಂಗಡಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ತಮ್ಮ ಕಲ್ಲಂಗಡಿ ಅಂಗಡಿಯನ್ನು ಧ್ವಂಸ ಮಾಡಿರುವುದಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲೀಕ ನಬಿಸಾಬ್ ಧಾರವಾಡದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದ ಪೊಲೀಸರು ಮೈಲಾರಪ್ಪ ಗುಡ್ಡಪ್ಪನವರ, ಮಹಾಲಿಂಗ ಐಗಳಿ, ಚಿದಾನಂದ ಕಲಾಲ ಹಾಗೂ ಕುಮಾರ ಕಟ್ಟಿಮನಿ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಧಾರವಾಡದಲ್ಲಿ ನಡೆದ ಘಟನೆಯ ಕುರಿತು ಶನಿವಾರ ವಿಡಿಯೋವೊಂದನ್ನು ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರು. ಸಮಾಜ ಶಾಂತಿ ಕದಡುತ್ತಿರುವ ಇಂಥ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದರು.

ಕಳೆದ ಶನಿವಾರ ಧಾರವಾಡ ಹೊರವಲಯದಲ್ಲಿ ಇರುವ ನುಗ್ಗೆಕೆರೆ ಆಂಜನೇಯನ ದೇವಸ್ಥಾನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿದ್ದರು. ಈ ವೇಳೆ ದೇವಸ್ಥಾನದ ಬಳಿಯಲ್ಲಿ ಹಿಂದೂಯೇತರ ಅಂಗಡಿಗಳನ್ನು ಹಾಕದಂತೆ 15 ದಿನಗಳ ಹಿಂದೆಯೇ ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಹಿಂದೂಯೇತರ ಅಂಗಡಿಗಳನ್ನು ಬಂದ್ ಮಾಡಿಸಬೇಕು ಎಂದು ಮನವಿ ನೀಡಿದ್ದರು. ಅದಾಗ್ಯೂ, ಶನಿವಾರ ದೇವಸ್ಥಾನದ ಬಳಿಯಲ್ಲಿ ಹಿಂದೂಯೇತರ ಅಂಗಡಿಗಳನ್ನು ಹಾಕಲಾಗಿತ್ತು. ಇದರಿಂದ ಕೆರಳಿದ ಕೆಲವು ಮಂದಿ ದೇವಸ್ಥಾನದ ಬಳಿ ಹಾಕಲಾಗಿದ್ದ ಹಿಂದೂಯೇತರ ಅಂಗಡಿಗಳಲ್ಲಿನ ಹಣ್ಣು ಮತ್ತು ಕಾಯಿಗಳನ್ನು ರಸ್ತೆಗೆ ಎಸೆದು ಧ್ವಂಸಗೊಳಿಸಿದ್ದರು.

ಧಾರವಾಡದ ನುಗ್ಗೆಕೆರೆ ಆಂಜನೇಯನ ದೇವಸ್ಥಾನದ ಬಳಿ ನಬಿಸಾಬ್ ಎಂಬುವವರ ಅಂಗಡಿ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಕಲ್ಲಂಗಡಿಯನ್ನು ರಸ್ತೆಗೆಸೆದು ಹಾಳು ಮಾಡಿರುವ ಘಟನೆ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದರು. ರಾಮಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಉಗ್ರರಿಗಿಂತ ಕೀಳಾಗಿ ವರ್ತಿಸಿದ್ದಾರೆ. ಇವರ ವಿರುದ್ಧ ಉಗ್ರ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದರು. ದುಷ್ಕರ್ಮಿಗಳು ನಡೆಸಿದ ಈ ಪೈಶಾಚಿಕ ಕೃತ್ಯದ ಬಗ್ಗೆ ಕಲ್ಲಂಗಡಿ ಕಳೆದುಕೊಂಡ ನಬಿಸಾಬಿ ಹಾಗೂ ದೇಗುಲದ ಮುಖ್ಯಸ್ಥರು ನೀಡಿರುವ ಈ ಹೇಳಿಕೆಗಳನ್ನು ಸರ್ಕಾರ ಗಂಭಿರವಾಗಿ ಪರಿಗಣಿಸಬೇಕು ಎಂಬುದಾಗಿ ಅವರು ಸರ್ಕಾರವನ್ನು ಒತ್ತಾಯ ಮಾಡಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೆಜಿಎಫ್​ ಚಾಪ್ಟರ್​ 2 ನೋಡಲು ಅಭಿಮಾನಿಗಳು ಕಾತರದಿಂದ ಎದುರು ನೋಡುತ್ತಿದ್ದಾರೆ.!

Mon Apr 11 , 2022
  ನವದೆಹಲಿ: ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಕೆಜಿಎಫ್​ ಚಾಪ್ಟರ್​ 2 ನೋಡಲು ಅಭಿಮಾನಿಗಳು ಕಾತರದಿಂದ ಎದುರು ನೋಡುತ್ತಿದ್ದಾರೆ. ಏಪ್ರಿಲ್​ 14ರಂದು ಚಿತ್ರ ವಿಶ್ವದಾದ್ಯಂತ ತೆರೆಗೆ ಅಪ್ಪಳಿಸಲಿದೆ. ಮುಂಗಡ ಟಿಕೆಟ್ ಕಾಯ್ದಿರಿಸುವಿಕೆಯಲ್ಲೂ ಕೆಜಿಎಫ್​ ಚಾಪ್ಟರ್​ 2 ದಾಖಲೆ ಬರೆದಿದ್ದು, ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಚಿತ್ರವನ್ನು ಹಿಂದಿಕ್ಕಿದೆ. ಇನ್ನು ಚಿತ್ರ ಹೇಗಿರಲಿದೆ ಎಂಬ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇರಲಿದೆ. ಅದಕ್ಕೆ ಉತ್ತರ ಇಲ್ಲಿದೆ. ಯುನೈಟೆಡ್​ ಅರಬ್​ ಎಮಿರೇಟ್ಸ್​ (ಯುಎಇ) ಮೂಲದ ಸ್ವಘೋಷಿತ ಸಿನಿಮಾ […]

Advertisement

Wordpress Social Share Plugin powered by Ultimatelysocial