ಮಧ್ಯಪ್ರದೇಶದಿಂದ ವಿದೇಶಕ್ಕೆ ಹಾರಲಿದ್ದಾನೆ “ಮೈ ಹೀರೋ” .

ಎ.ವಿ .ಸ್ಟುಡಿಯೋಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ “ಮೈ ಹೀರೊ” ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಮಧ್ಯಪ್ರದೇಶದ ಮಹೇಶ್ವರ ಎಂಬ ಸ್ಥಳದಲ್ಲೇ ಹೆಚ್ಚಿನ ಚಿತ್ರೀಕರಣವಾಗಿದೆ. ಒಂದು ಹಾಡು ಹಾಗೂ ಮಾತಿನ ಭಾಗದ ಚಿತ್ರೀಕರಣ ಅಲ್ಲಿ ನಡೆದಿದೆ. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್, ಬಾಲನಟ ವೇದಿಕ್ ಕೌಶಿಕ್, ದತ್ತಣ್ಣ, ಅಂಕಿತ ಅಮರ್ ಹಾಗೂ ಅಲ್ಲಿನ ಸ್ಥಳೀಯ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಕೊನೆಯ ಹಂತದ ಚಿತ್ರೀಕರಣ ಯು ಎಸ್ ಎ ನಲ್ಲಿ ನಡೆಯಲಿದೆ.

ಇಡೀ ವಿಶ್ವದಲ್ಲೇ ಇರುವ ಸಾಮಾಜಿಕ ಸಮಸ್ಯೆಯೊಂದರ ಕುರಿತಾದ ಚಿತ್ರವಿದು. ಅವಿನಾಶ್ ವಿಜಯಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಎ.ವಿ.ಸ್ಟುಡಿಯೋಸ್ ಮೂಲಕ ಈ ಚಿತ್ರವನ್ನು ಅವಿನಾಶ್ ವಿಜಯಕುಮಾರ್ ಅವರೆ ನಿರ್ಮಿಸುತ್ತಿದ್ದಾರೆ.

ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಈ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ದತ್ತಣ್ಣ, ಪ್ರಕಾಶ್ ಬೆಳವಾಡಿ, ನಿರಂಜನ್ ದೇಶಪಾಂಡೆ, ಅಂಕಿತ ಅಮರ್, ತನುಜಾ ಕೃಷ್ಣಪ್ಪ, ನವೀನ್ ಬೊಂದೇಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಹಾಗೂ ವೀನಸ್ ನಾಗರಾಜ್ ಅವರ ಛಾಯಾಗ್ರಹಣ “ಮೈ ಹೀರೊ” ಚತ್ರಕ್ಕಿದ್ದು, ಎ.ವಿ.ಸ್ಟುಡಿಯೋಸ್ ಸಂಭಾಷಣೆ ಬರೆದಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರಿನಲ್ಲಿ ಪೊನ್ನಿಯಿನ್ ಸೆಲ್ವನ್-2 ಅದ್ಧೂರಿ ಪ್ರಚಾರ.!

Sun Apr 23 , 2023
ಮಣಿರತ್ನಂ ಡ್ರೀಮ್ ಪ್ರಾಜೆಕ್ಟ್ ‘ಪೊನ್ನಿಯಿನ್ ಸೆಲ್ವನ್ 2’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ ತಿಂಗಳ 28ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸುತ್ತಿದೆ. ಉತ್ತರ ಭಾರತದಲ್ಲಿ ಪ್ರಚಾರ ಮುಗಿಸಿರುವ ಚಿತ್ರತಂಡ ದಕ್ಷಿಣದಲ್ಲಿ ಭರದ ಪ್ರಚಾರ ಕಾರ್ಯ ನಡೆಸುತ್ತಿದೆ. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಮೋಷನ್ ಮಾಡಿರುವ ಪಿಎಸ್-2 ಬಳಗ ಬೆಂಗಳೂರಿನಲ್ಲಿ ನಿನ್ನೆ ಪ್ರಮೋಷನ್ ಕಹಳೆ ಮೊಳಗಿಸಿದೆ. ನಿನ್ನೆ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಟ ವಿಕ್ರಂ, ತ್ರಿಷಾ, ಕಾರ್ತಿ ಹಾಗೂ ಜಯಂರವಿ ಭಾಗಿಯಾಗಿದ್ದರು. […]

Advertisement

Wordpress Social Share Plugin powered by Ultimatelysocial