ಸಂದೀಪ್ ಕಿಶನ್ ಪ್ಯಾನ್ ಇಂಡಿಯಾ ‘ಮೈಕಲ್’ ಚಿತ್ರದ ಫಸ್ಟ್ ಲುಕ್ ರಿಲೀಸ್!

ಸಂದೀಪ್ ಕಿಶನ್, ವಿಜಯ್ ಸೇತುಪತಿ ಮುಖ್ಯಭೂಮಿಕೆಯಲ್ಲಿರುವ ಮೈಕಲ್ ಚಿತ್ರ ಒಂದಿಲ್ಲ ಒಂದು ಕಾರಣಕ್ಕೆ ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ಈ ಬಳಗಕ್ಕೆ ನಟ, ನಿರ್ದೇಶಕ ಗೌತಮ್ ವಾಸುದೇವ್ ಮೆನನ್ ಸೇರ್ಪಡೆಗೊಂಡಿದ್ದರು. ಇದೀಗ ಬಹುತೇಕ ಎಲ್ಲ ಕೆಲಸಗಳನ್ನು ಮುಗಿಸಿಕೊಳ್ಳಲು ಸಜ್ಜಾಗುತ್ತಿರುವ ಈ ಸಿನಿಮಾ ಇನ್ನೇನು ಶೀಘ್ರದಲ್ಲಿ ರಿಲೀಸ್ ದಿನಾಂಕವನ್ನೂ ಘೋಷಿಸಲಿದೆ. ಅದಕ್ಕೂ ಮುನ್ನ ಇದೀಗ ಈ ಚಿತ್ರದ ಹೊಸದಾದ ಫಸ್ಟ್ ಲುಕ್ ಬಿಡುಗಡೆ ಆಗಿದೆ.

ಶ್ರೀ ವೆಂಕಟೇಶ್ವರ ಸಿನಿಮಾಸ್​ ಎಲ್ಎಲ್​ಪಿ, ಕರಣ್ ಸಿ ಪ್ರೊಡಕ್ಷನ್ಸ್ ಎಲ್​ಎಲ್​ಪಿ ಬ್ಯಾನರ್​ನಲ್ಲಿ ಭರತ್ ಚೌಧರಿ, ಪುಷ್ಕರ್ ರಾಮ್ ಮೋಹನ್ ರಾವ್ ಮೈಕಲ್ ಸಿನಿಮಾಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಚಿತ್ರವನ್ನು ರಂಜಿತ್ ಜಯೆಕೊಡಿ ನಿರ್ದೇಶನ ಮಾಡುತ್ತಿದ್ದಾರೆ. ವಿಶೇಷ ಏನೆಂದರೆ, ಕೇವಲ ತೆಲುಗು ಮಾತ್ರವಲ್ಲದೆ, ಕನ್ನಡ, ತಮಿಳು, ಮಲಯಾಳಂ, ಹಿಂದಿಯಲ್ಲಿಯೂ ಈ ಸಿನಿಮಾ ಸಿದ್ಧವಾಗುತ್ತಿದೆ.

ಮಾಸ್ ಆ್ಯಕ್ಷನ್ ಮತ್ತು ಕಮರ್ಷಿಯಲ್ ಅಂಶಗಳುಳ್ಳ ಈ ಸಿನಿಮಾ, ಸದ್ಯ ಚಿತ್ರೀಕರಣದಲ್ಲಿ ಬಿಜಿಯಾಗಿದೆ. ಈ ಚಿತ್ರದಲ್ಲಿ ಕಿಶನ್ ಗೆ ನಾಯಕಿಯರಾಗಿ ದಿವ್ಯಾಂಶ ಕೌಶಿಕ್, ವರಲಕ್ಷ್ಮಿ ಶರತ್ ಕುಮಾರ್ ನಟಿಸಿದರೆ‌, ವರುಣ್ ಸಂದೇಶ್ ಪ್ರಮುಖ ಪಾತ್ರದಲ್ಲಿದ್ದಾರೆ.

ಇನ್ನು ಈವರೆಗೂ ಕಂಟೆಂಟ್ ಬೇಸ್ಡ್​ ಮತ್ತು ಕಮರ್ಷಿಯಲ್ ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ ನಟ ಸಂದೀಪ್ ಕಿಶನ್, ಈ ಚಿತ್ರದಲ್ಲಿ ಹಿಂದೆಂದೂ ಕಾಣಿಸದ ಲುಕ್​ನಲ್ಲಿ ಎದುರಾಗುತ್ತಿದ್ದಾರೆ. ಈ ಸಿನಿಮಾದ ಸಲುವಾಗಿ ದೇಹವನ್ನು ಹುರಿಗೊಳಿಸಿದ್ದಾರೆ. ಸಿಕ್ಸ್ ಪ್ಯಾಕ್ ಅವತಾರ, ಖಡಕ್ ಲುಕ್, ಲಾಂಗ್ ಹೇರ್ ನಿಂದಲೇ ಹೊಸ ಸಂದೀಪ್ ಕಿಶನ್ ಮೈಕಲ್ ಸಿನಿಮಾದಲ್ಲಿ ಕಾಣಿಸಲಿದ್ದಾರೆ..

ವಿಜಯ್ ಸೇತುಪತಿ, ಗೌತಮ್ ಮೆನನ್ ಜತೆಗೆ ತೆರೆ ಹಂಚಿಕೊಳ್ಳುವ ಮೂಲಕ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿಡಿಲು ಬಡಿದು ಮೃತಪಟ್ಟವರ ಕುಟುಂಬಕ್ಕೆ ₹ 10 ಲಕ್ಷ ಪರಿಹಾರ

Sat May 7 , 2022
  ಮೊಳಕಾಲ್ಮುರು: ತಾಲ್ಲೂಕಿನ ಮೇಗಲಹಟ್ಟಿಯಲ್ಲಿ ಗ್ರಾಮದಲ್ಲಿ ಮೇ 4ರಂದು ಸಿಡಿಲು ಬಡಿದು ಮೃತಪಟ್ಟಿದ್ದ ತಾಯಿ, ಮಗನ ಕುಟುಂಬಕ್ಕೆ ಶುಕ್ರವಾರ ಸರ್ಕಾರದ ಪರಿಹಾರವನ್ನು ಸಚಿವ ಬಿ. ಶ್ರೀರಾಮುಲು ವಿತರಿಸಿದರು. ಘಟನೆಯಲ್ಲಿ ಕುರಿಗಾಹಿ ವೃತ್ತಿ ಮಾಡುತ್ತಿದ್ದ ನಾಯಕ ಜನಾಂಗದ ತಾಯಿ ಹಾಗೂ ಮಗ ಇಬ್ಬರು ಮೃತಪಟ್ಟಿದ್ದು, ಪ್ರಕೃತಿ ವಿಕೋಪ ನಿಧಿಯಿಂದ ತಲಾ ₹5 ಲಕ್ಷದಂತೆ ₹10 ಲಕ್ಷವನ್ನು ಕುಟುಂಬ ಸದಸ್ಯರಿಗೆ ವಿತರಣೆ ಮಾಡಲಾಯಿತು. ಮಳೆಗಾಲದಲ್ಲಿ ಕುರಿ, ದನಗಾಹಿಗಳು, ಕೂಲಿ ಕಾರ್ಮಿಕರು ಎಚ್ಚರದಿಂದ ಇರಬೇಕು. ಹೊಲದಲ್ಲಿ […]

Advertisement

Wordpress Social Share Plugin powered by Ultimatelysocial