ಮೈಸೂರು-ಧಾರವಾಡ ರೈಲಿನಲ್ಲಿ ಮಧ್ಯರಾತ್ರಿ ಬೆಂಕಿ:

 

ಮಂಡ್ಯ: ಧಾರವಾಡ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ.

ರೈಲು ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ರಾತ್ರಿ 12 ಗಂಟೆ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ರೈಲು ರಾತ್ರಿ 10.30 ರಲ್ಲಿ ಮೈಸೂರಿನಿಂದ ಹೊರಟಿತ್ತು. ಮಂದಗೆರೆ ಬಳಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಚಾಲಕ ರೈಲನ್ನು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ. ಕೂಡಲೇ ಬೋಗಿಯಿಂದ ಪ್ರಯಾಣಿಕರು ಕೆಳಗಿಳಿದ ಹಿನ್ನೆಲೆಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆದರೆ ಇನ್ನೂ ರೈಲಿನಿಂದ ಕೆಳಗೆ ಇಳಿಯುವಾಗ ತಳ್ಳಾಟ ನೂಕಾಟ ನಡೆದಿದ್ದರಿಂದ ಕೆಲ ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. ತಕ್ಷಣವೇ ರೈಲ್ವೆ ಸಿಬ್ಬಂದಿ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ‌ ನಂದಿಸುವ ಕಾರ್ಯ ಮಾಡಿದ್ದಾರೆ. ಬೆಂಕಿ ನಂದಿಸಿದ ಬಳಿಕ ರೈಲು ಸಂಚಾರ ಆರಂಭಿಸಿದೆ. ಒಂದು ಗಂಟೆಗೂ‌ ಹೆಚ್ಚು ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಗಲಭೆ ವೇಳೆ ನಾಲ್ಕೈದು ತಲೆಗಳು ಉರುಳಿದ್ರೆ ಹುಬ್ಬಳ್ಳಿ ಶಾಂತವಾಗಿರುತ್ತಿತ್ತು : ಸಿ.ಟಿ. ರವಿ

Sun May 1 , 2022
  ಹುಬ್ಬಳ್ಳಿ : ಹುಬ್ಬಳ್ಳಿ ಗಲಭೆ ವೇಳೆ ನಾಲ್ಕೈ ತಲೆಗಳು ಉರುಳಿದ್ರೆ ಹುಬ್ಬಳ್ಳಿ ಶಾಂತವಾಗಿರುತ್ತಿತ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿವಾದತ್ಮಾಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿ.ಟಿ. ರವಿ. ಹುಬ್ಬಳ್ಳಿಯಲ್ಲಿ ನಡೆದ ಗಲಭೆ ವೇಳೆ ನಾಲ್ಕೈದು ತಲೆಗಳು ಉರುಳಿದ್ರೆ ಹುಬ್ಬಳ್ಳಿ ಶಾಂತವಾಗಿರ್ತಿತ್ತು. ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಗಲಭೆ ಹತೋಟಿಗೆ ಬಂದಿದೆ ಎಂದು ಹೇಳಿದ್ದಾರೆ. ಇನ್ನು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಗಲಭೆಕೋರರಿಗೆ ಸಹಕಾರ […]

Advertisement

Wordpress Social Share Plugin powered by Ultimatelysocial