ಮೈಸೂರು ದಸರಾಗೆ ಖರ್ಚಾಗಿದ್ದೆಷ್ಟು? ಉಳಿತಾಯವಾಗಿದ್ದೆಷ್ಟು..?

ಮೈಸೂರು, ನವೆಂಬರ್ 1: 2021ರ ಮೈಸೂರು ದಸರಾ ಮಹೋತ್ಸವಕ್ಕೆ ಸರ್ಕಾರ 6 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಇದರಲ್ಲಿ 5,42,07,679 ರೂ. ಖರ್ಚಾಗಿದ್ದು, 57 ಲಕ್ಷ ರೂಪಾಯಿಗೂ ಹೆಚ್ಚು ಹಣ ಉಳಿತಾಯವಾಗಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಖರ್ಚು- ವೆಚ್ಚಗಳ ಮಾಹಿತಿ ಬಿಡುಗಡೆ ಮಾಡಿದರು.ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಇತಿಹಾಸದಲ್ಲಿ ಎರಡನೇ ಬಾರಿಗೆ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನದ ಖರ್ಚು- ವೆಚ್ಚಗಳ ಸಂಪೂರ್ಣ ಮಾಹಿತಿಯನ್ನು ಅರಮನೆ ಮಂಡಳಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬಿಡುಗಡೆಗೊಳಿಸಿದರು.‍‌ಮೈಸೂರು ದಸರಾಗೆ 4,22,07,679 ರೂಪಾಯಿ ಖರ್ಚಾಗಿದೆ. ಶ್ರೀರಂಗಪಟ್ಟಣ, ಚಾಮರಾಜನಗರ ದಸರಾ ಆಚರಣೆಗೆ ತಲಾ 50 ಲಕ್ಷ ರೂ., ಅರಕಲಗೂಡು ದಸರಾಗೆ 20 ಲಕ್ಷ ರೂ. ಬಿಡುಗಡೆ ಮಾಡಿದ್ದು, ಒಟ್ಡು 5,42,07,679 ರೂ. ಹಣ ಖರ್ಚಾಗಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ವಿವರಿಸಿದರು.ಮೈಸೂರು ದಸರಾ ಆಮಂತ್ರಣ ಪತ್ರಿಕೆ, ಮುದ್ರಣ ಇತ್ಯಾದಿಗಳಿಗೆ 5,91,960 ರೂ. ಖರ್ಚಾಗಿದ್ದರೆ, ಗಣ್ಯರು ಮತ್ತು ಕಲಾವಿದರ ಸಾರಿಗೆ ವ್ಯವಸ್ಥೆಗೆ 29,16,416 ರೂ. ಖರ್ಚಾಗಿದೆ. ಜಂಬೂಸವಾರಿ ಮೆರವಣಿಗೆಗೆ 37,50,772 ರೂ., ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಕಲಾವಿದರ ಸಂಭಾವನೆಗೆ 1,03,64,272 ರೂ. ಖರ್ಚಾಗಿದೆ.ಸ್ತಬ್ಧಚಿತ್ರ ನಿರ್ಮಾಣಕ್ಕೆ 18,85,102 ರೂ., ಆನೆಗಳ‌ ನಿರ್ವಹಣೆಗೆ 50 ಲಕ್ಷ ರೂ., ದಸರಾ ಕಾರ್ಯಕ್ರಮಗಳ ವೇದಿಕೆ ಮತ್ತು ವಿದ್ಯುತ್ ಕಾಮಗಾರಿಗಳ ವ್ಯವಸ್ಥೆಗಾಗಿ 93,80,000 ರೂ., ವೆಬ್ ಕ್ಯಾಸ್ಟಿಂಗ್‌ಗೆ 11,09,200 ರೂ. ವೆಚ್ಚವಾಗಿದೆ. ಅರಮನೆಗೆ ಗೌರವ ಸಂಭಾವನೆಯಾಗಿ 40 ಲಕ್ಷ ರೂ., ದೂರದರ್ಶನದಲ್ಲಿ ಜಂಬೂಸವಾರಿ ನೇರಪ್ರಸಾರ ಮಾಡಿದ್ದಕ್ಕೆ 6,22,513 ರೂ., ದಸರಾ ಆನೆಗಳು ಹಾಗೂ ಕಾವಾಡಿಗರ ವಿಮೆಗೆ 24 ಸಾವಿರ ರೂ. ಭರಿಸಲಾಗಿದೆ ಎಂದು ಮಾಹಿತಿ ಒದಗಿಸಿದರು.

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಸರ್ಕಾರ ಆದೇಶ : ನ. 8 ರಿಂದ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ..!

Tue Nov 2 , 2021
ನವೆಂಬರ್ 8ರಿಂದ ಅನ್ವಯವಾಗುವಂತೆ ಎಲ್ಲಾ ಹಂತದ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಪುನರಾರಂಭಿಸಲು ಕೇಂದ್ರ ಸರ್ಕಾರ ಸೋಮವಾರ ತೀರ್ಮಾನಿಸಿದೆ.ಬಯೋಮೆಟ್ರಿಕ್ ಯಂತ್ರಗಳ ಪಕ್ಕದಲ್ಲಿ ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಇರಿಸಲಾಗುತ್ತದೆ ಮತ್ತು ಬಯೋಮೆಟ್ರಿಕ್ ಹಾಜರಾತಿ ಮಾಡುವ ಮೊದಲು ಮತ್ತು ನಂತರ ಎಲ್ಲಾ ಉದ್ಯೋಗಿಗಳು ತಮ್ಮ ಕೈಗಳನ್ನು ಸ್ಯಾನಿಟೈಸರ್ ನಿಂದ ಶುಚಿಗೊಳಿಸಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳುವುದು ಇಲಾಖೆಯ ಮುಖ್ಯಸ್ಥರ ಜವಾಬ್ದಾರಿಯಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada […]

Advertisement

Wordpress Social Share Plugin powered by Ultimatelysocial