ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರಿಗಿಲ್ಲ  ಪ್ರವೇಶ…!

ಮಹಾಲಯ ಅಮಾವಾಸ್ಯೆ ಅಂಗವಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುವ ಭಕ್ತರಿಗೆ ನಿರಾಸೆ ಕಾದಿದೆ. ಅಕ್ಟೋಬರ್ 5 ರಿಂದ 7 ರ ತನಕ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಮೈಸೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಂಗಳವಾರ, ಬುಧವಾರ ಮತ್ತು ಗುರುವಾರ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ..ಕೋವಿಡ್ ಮಾರ್ಗಸೂಚಿಗಳ ಅನ್ವಯ ಹೆಚ್ಚು ಜನರು ಸೇರದಂತೆ ತಡೆಯಲು ಮೈಸೂರು ಜಿಲ್ಲಾಧಿಕಾರಿ ಗೌತಮ್ ಬುಗಾದಿ ಭಕ್ತರ ಪ್ರವೇಶವನ್ನ ನಿಷೇಧಿಸಿ ಆದೇಶವನ್ನ ಹೊರಡಿಸಿದ್ದಾರೆ. ಅಕ್ಟೋಬರ್ ತಿಂಗಳಿನಲ್ಲಿ ಹಲವು ದಿನಗಳು ಅರಮನೆಗೆ ಸಹ ಜನರ ಭೇಟಿ ನಿರ್ಬಂಧಿಸಲಾಗಿದೆ.

ಇಂದು ಬೆಳಗ್ಗೆ 8.15ರಿಂದ 8.45ರ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದಲ್ಲಿ 2021ನೇ ಸಾಲಿನ ದಸರಾವನ್ನ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಉದ್ಘಾಟನೆ ಮಾಡಿದ್ದರು.ದಸರಾ ಆರಂಭಗೊಂಡ ಬಳಿಕ ಮೈಸೂರು ಅರಮನೆ ಆವರಣದಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಯುವ ದಸರಾ, ದಸರಾ ಆಹಾರ ಮೇಳ ಸೇರಿದಂತೆ ವಿವಿಧ ಕಾರ್ಯಕ್ರಮಗಳು ರದ್ದಾಗಿವೆ. ಅಕ್ಟೋಬರ್ 15ರಂದು ಜಂಬೂ ಸವಾರಿ ನಡೆಯಲಿದೆ. ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಅಕ್ಟೋಬರ್ 15ರಂದು ನಡೆಯಲಿದೆ. ಸಂಜೆ 4.36 ರಿಂದ 4.44ರ ತನಕ ನಂದಿ ಧ್ವಜ ಪೂಜೆ ನಡೆಯಲಿದೆ. ಬಳಿಕ ಸಂಜೆ 5 ರಿಂದ 5.36ರ ತನಕ ಜಂಬೂ ಸವಾರಿ ಅರಮನೆ ಆವರಣದಲ್ಲಿ ಮಾತ್ರ ನಡೆಯಲಿದೆ. ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿ. ವಿಜಯದಶಮಿಯ ದಿನ ಚಿನ್ನದ ಅಂಬಾರಿಯನ್ನ 56 ವರ್ಷದ ಅಭಿಮನ್ಯು ಆನೆ ಹೊರಲಿದೆ. ವಿಕ್ರಮ, ಅಶ್ವತ್ಥಾಮ, ಲಕ್ಷ್ಮೀ, ಚೈತ್ರಾ, ಕಾವೇರಿ, ಧನಂಜಯ, ಗೋಪಾಲಸ್ವಾಮಿ ಆನೆಗಳು ಈ ಬಾರಿಯ ದಸರಾದಲ್ಲಿ ಪಾಲ್ಗೊಳ್ಳುತ್ತಿವೆ.

Please follow and like us:

Leave a Reply

Your email address will not be published. Required fields are marked *

Next Post

ಧ್ವನಿ ಮತ್ತು ಬೆಳಕು ಕಾರ್ಯಕ್ರಮಗಳ ರದ್ದುಮಾಡಿದ ಸರ್ಕಾರ

Thu Oct 7 , 2021
ಮೈಸೂರು ದಸರಾ ಮಹೋತ್ಸವದ ಪೂರ್ವಭಾವಿ ಕಾಮಗಾರಿಗಳು ಪ್ರಗತಿಯಲ್ಲಿರುವುದರಿಂದ ಹಾಗೂ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಹಿನ್ನೆಲೆಯಲ್ಲಿ ಅಕ್ಟೋಬರ್ 4 ರಿಂದ 21ರವರೆಗೆ ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಮೈಸೂರು ಅರಮನೆಯಲ್ಲಿ 2021ನೇ ಸಾಲಿನ ದಸರಾ ಮಹೋತ್ಸವದ ಸಿದ್ಧತೆಗಳು ನಡೆಯುತ್ತಿವೆ. ಮಂಗಳವಾರ ಮೈಸೂರಿನಲ್ಲಿ ಫಿರಂಗಿ ಗಾಡಿಗಳಿಂದ ಕುಶಾಲತೋಪುಗಳನ್ನ ಸಿಡಿಸುವ 2ನೇ ಹಂತದ ತಾಲೀಮು ನಡೆಯಿತು. ಗಜಪಡೆ ಹಾಗೂ ಅಶ್ವಗಳು ಬೆದರದಂತೆ […]

Advertisement

Wordpress Social Share Plugin powered by Ultimatelysocial