ಮೈಸೂರಿನಲ್ಲಿ ನಿರ್ಮಾಣವಾಗುತ್ತಿದೆ ದೇಶದ ಮೊದಲ ‘ಡಿಜಿಟಲ್ ಡಿಸ್‌ಪ್ಲೆ ತಾರಾಲಯ’

 

ಮೈಸೂರು, ಮಾ.5: ಡಿಜಿಟಲ್ ಡಿಸ್‌ಪ್ಲೆಗಳ ಮೂಲಕ ಖಗೋಳದ ಆ ಕ್ಷಣದ ಮಾಹಿತಿಯನ್ನು ನೇರವಾಗಿ ಪಡೆದುಕೊಳ್ಳಬಹುದಾದ (ರಿಯಲ್‌ಟೈಂ ಡೇಟಾ) ದೇಶದ ಮೊದಲ ಅತ್ಯಾಧುನಿಕ ಖಗೋಳ ತಾರಾಲಯ ಮೈಸೂರಿನಲ್ಲಿ ನಿರ್ಮಾಣವಾಗುತ್ತಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ.ನಗರದ ಕ್ರಾರ್ಡ್ ಹಾಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶಿಷ್ಟ ಹಿನ್ನೆಲೆಯುಳ್ಳ ಇಂಜಿನ್ ಒಳಗೊಂಡಿರುವ ಈ ಕೇಂದ್ರ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಪರಿಣಾಮಕಾರಿ ತರಬೇತಿ ನೀಡಲು ಅನುಕೂಲವಾಗಲಿದೆ. ಡಿಜಿಸ್ಟಾರ್ ವ್ಯವಸ್ಥೆಯು 7 ಸಿಸ್ಟಮ್ ಮತ್ತು ಡೊಮೆಕ್ಸ್ ಸ್ಕ್ರೀನ್ ಅನ್ನು ಒಳಗೊಂಡಿದೆ. ಈ ವೀಕ್ಷಣಾಲಯದಿಂದ ದೊರೆಯುವ ರಿಯಲ್ ಟೈಂ ಡೇಟಾ ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಸಂಶೋಧನೆ ಕೈಗೊಳ್ಳಬಹುದು. ಮಾತ್ರವಲ್ಲದೇ ಈ ಕೇಂದ್ರದಲ್ಲಿ ಭಾರತ ಹಾಗೂ ಕರ್ನಾಟಕದ ಖಗೋಳಶಾಸದ ಪರಂಪರೆ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. 2023 ರ ಮಾರ್ಚ್ ವೇಳೆಗೆ ಕಾಮಗಾರಿ ಪೂರ್ಣಗೊಂಡು ಸಂಸ್ಥೆಯು ಕಾರ್ಯಾರಂಭವಾಗಲಿದೆ ಎಂದರು.ಮೈಸೂರು ವಿಶ್ವವಿದ್ಯಾನಿಲಯ ಮತ್ತು ಭಾರತೀಯ ಖಗೋಳ ಭೌತಶಾಸ ಸಂಸ್ಥೆ ಸಹಯೋಗದಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಮೈಸೂರಿನಲ್ಲಿ ನಿರ್ಮಿಸಲಾಗುತ್ತಿರುವ ಕಾಸ್ಮೊಲಜಿ ಶಿಕ್ಷಣ ಮತ್ತು ಸಂಶೋಧನ ತರಬೇತಿ ಕೇಂದ್ರ (ಕಾಸ್ಮಾಸ್)ದ ಶಂಕುಸ್ಥಾಪನೆಯನ್ನು ಮಾ. 6 ರಂದು ಬೆ. 10.30ಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ನೆರವೇರಿಸಲಿದ್ದಾರೆ.ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ವಿಶ್ವವಿದ್ಯಾನಿಲಯಕ್ಕೆ ಸೇರಿದ ಜಯಚಾಮರಾಜ ಡೆಯರ್ ಉನ್ನತ ಕಲಿಕಾ ಕೇಂದ್ರಕ್ಕೆ ಸೇರಿದ 3 ಎಕರೆ ಜಾಗದಲ್ಲಿ ತಲೆ ಎತ್ತುತ್ತಿರುವ ಈ ವಿಜ್ಞಾನ ಕೇಂದ್ರದ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್. ಅಶ್ವತ್ಥ ನಾರಾಯಣ, ಸಚಿವ ಎಸ್.ಟಿ. ಸೋಮಶೇಖರ್, ಸಂಸದ ಪ್ರತಾಪ್‌ಸಿಂಹ ಶಾಸಕರಾರ ಎಸ್‌ಎ. ರಾಮದಾಸ್, ಎಲ್. ನಾಗೇಂದ್ರ, ಕೇಂದ್ರ ಸರಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಪ್ರೊ.ಕೆ. ವಿಜಯ ರಾಘವನ್, ಅಟಾಮಿಕ್ ಎನರ್ಜಿ ವಿಭಾಗದ ಕಾರ್ಯದರ್ಶಿ ಕೆ.ಎನ್. ವ್ಯಾಸ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಡಾ.ಎಸ್. ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ತಿಳಿಸಿದರು.ಮೈಸೂರು ವಿಶ್ವವಿದ್ಯಾಲಯ ಕುಲಸಚಿವ ಪ್ರೊಘಿ.ಆರ್.ಶಿವಪ್ಪ, ವಿಶೇಷಾಧಿಕಾರಿ ಡಾ.ಚೇತನ್ ಸೇರಿದಂತೆ ಇತರರು ಇದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉದ್ವಿಗ್ನಗೊಂಡಿದ್ದ ಆಳಂದದಲ್ಲಿ ನಿಷೇಧಾಜ್ಞೆ ವಿಸ್ತರಣೆ

Sat Mar 5 , 2022
  ಕಲಬುರ್ಗಿ: ಕಲ್ಲು ತೂರಾಟ ಪ್ರಕರಣದ ಬೆನ್ನಲ್ಲೇ ಉದ್ವಿಗ್ನಗೊಂಡಿದ್ದ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಯಶವಂತ ಗುರುಕಾರ್ ಆದೇಶ ಹೊರಡಿಸಿದ್ದಾರೆ. ಮಾರ್ಚ್ 6ವರೆಗೆ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಮುಂದುವರೆಸಲಾಗಿದ್ದು, ಮದ್ಯ ಮಾರಾಟ ಕೂಡ ನಿಷೇಧಿಸಲಾಗಿದೆ. ಶಾಂತಿ-ಸುವ್ಯವಸ್ಥೆಗೆ ಯಾವುದೇ ರೀತಿ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.  ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗ ಪೂಜೆ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಆರಂಭವಾಗಿತ್ತಲ್ಲದೇ ಕೇಂದ್ರ […]

Advertisement

Wordpress Social Share Plugin powered by Ultimatelysocial