ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ರಂಝಾನ್ ಹಬ್ಬದ ಸಂಭ್ರಮ.!

ಒಂದು ತಿಂಗಳ ಕಾಲ ಉಪವಾಸ ವ್ರತ ಆಚರಿಸಿದ ಮುಸ್ಲಿಂ ಬಾಂಧವರು ಸಂಭ್ರಮ, ಸಡಗರದಿಂದ ಈದ್ ಹಬ್ಬವನ್ನು ಆಚರಿಸುತ್ತಿದ್ದಾರೆ. ದಕ್ಷಿಣ ಕನ್ನಡ
ಜಿಲ್ಲೆಯ ಎಲ್ಲಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡಲಾಯಿತು. ಮಂಗಳೂರು ನಗರದ ಬಾವುಟಗುಡ್ಡೆ ಈದ್ಗಾ ಮಸ್ಜಿದ್‌ನಲ್ಲಿ ಬಂದರ್ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ, ಉಳ್ಳಾಲ ಕೇಂದ್ರ ಜುಮಾ ಮಸ್ಜಿದ್‌ನಲ್ಲಿ ಸಾಮೂಹಿಕ ಈದ್ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು. ಉಳಿದಂತೆ ನಗರದ ಪಂಪ್‌ವೆಲ್‌ನ ಮಸ್ಜಿದುತ್ತಖ್ವಾ, ಹಂಪನಕಟ್ಟೆಯ ಮಸ್ಜಿದುನ್ನೂರ್, ಸ್ಟೇಟ್‌ಬ್ಯಾಂಕ್‌ನ ಇಬ್ರಾಹೀಂ ಖಲೀಲ್ ಮಸ್ಜಿದ್, ಕಂಕನಾಡಿ ರಹ್ಮಾನಿಯಾ ಜುಮಾ ಮಸ್ಜಿದ್, ನಗರದ ವಾಸ್‌ಲೇನ್ ಇಹ್ಸಾನ್ ಮಸ್ಜಿದ್, ಪಾಂಡೇಶ್ವರದ ಪೊಲೀಸ್‌‌ ಲೇನ್ ಫೌಝಿಯಾ ಜುಮಾ ಮಸ್ಜಿದ್, ಬಂದರ್ ಕಚ್ಚೀ ಮೇಮನ್ ಜುಮಾ ಮಸ್ಜಿದ್, ಬಂದರ್ ಕಂದುಕ ಬದ್ರಿಯಾ ಜುಮಾ ಮಸ್ಜಿದ್, ಬೋಳಾರ ಮುಹಿಯುದ್ದೀನ್ ಜುಮಾ ಮಸ್ಜಿದ್, ಕುದ್ರೋಳಿ ಜಾಮೀಯಾ ಜುಮಾ ಮಸ್ಜಿದ್, ಬಿಕರ್ನಕಟ್ಟೆ ಅಹಸನುಲ್ ಮಸಾಜೀದ್, ಕುದ್ರೋಳಿ ಸಲಫಿ ಮಸೀದಿಯ ಈದ್ಗಾ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಜುಮಾ ಮಸ್ಜಿದ್ ಮತ್ತು ಈದ್ಗಾಗಳಲ್ಲಿ ನಮಾಝ್ ಹಾಗೂ ಖುತ್ಬಾ ನೆರವೇರಿಸಲಾಯಿತು.

ತದನಂತರ ಎಳೆಯ ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಉಪವಾಸಿಗರು ಹೊಸ ಬಟ್ಟೆಬರೆ ಧರಿಸಿ, ಸುಗಂಧ ಹಚ್ಚಿ ಹಬ್ಬವನ್ನು ಅತ್ಯಂತ ಶ್ರದ್ಧೆಯಿಂದ ಸಂಭ್ರಮಿಸಿದರು. ಈದ್ ನಮಾಝ್-ಖುತ್ಬಾದ ಬಳಿಕ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರಿಗಾಗಿ ಪ್ರಾರ್ಥಿಸಿದರು. ಬಳಿಕ ಕುಟುಂಬಸ್ಥರು, ಸ್ನೇಹಿತರು, ಸಮೀಪದ ನಿವಾಸಿಗಳ ಮನೆಗೆ ತೆರಳಿ ಈದ್ ಶುಭಾಶಯ ಕೋರಿದರು. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲಾ ಮಸೀದಿ-ಈದ್ಗಾಗಳಲ್ಲಿ ವಿಶೇಷ ನಮಾಝ್, ಪ್ರವಚನ ಬಳಿಕ ಪರಸ್ಪರ ಹಸ್ತಲಾಘವ, ಆಲಿಂಗನ ಮೂಲಕ ಹಬ್ಬದ ಶುಭಾಶಯ ವಿನಿಮಯ ಹಾಗೂ ಮನೆಗಳಲ್ಲಿ ಹಬ್ಬದ ಸಂಭ್ರಮ ಕಂಡು ಬಂತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಕೆಜಿಎಫ್: ಅಧ್ಯಾಯ 2' ಬಾಕ್ಸ್ ಆಫೀಸ್ ಕಲೆಕ್ಷನ್ಸ್, ದಿನ 19:'ದಂಗಲ್' ಗಳಿಕೆಯನ್ನು ದಾಟಿದ ಚಿತ್ರ!

Tue May 3 , 2022
ದಕ್ಷಿಣ ನಟ ಯಶ್ ಪ್ರಸ್ತುತ ತಮ್ಮ ಇತ್ತೀಚಿನ ಚಿತ್ರ ಕೆಜಿಎಫ್: ಅಧ್ಯಾಯ 2 ರ ಯಶಸ್ಸಿನಲ್ಲಿ ಮುಳುಗಿದ್ದಾರೆ.ಅಭಿಮಾನಿಗಳು ಮತ್ತು ಚಿತ್ರರಂಗದಲ್ಲಿ ಗಮನಾರ್ಹ ಹೆಸರುಗಳನ್ನು ಮೆಚ್ಚಿಸಿದ ಈ ಚಲನಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ತನ್ನ ವ್ಯವಹಾರದಲ್ಲಿ ಅಭೂತಪೂರ್ವ ಬೆಳವಣಿಗೆಯನ್ನು ದಾಖಲಿಸಿದೆ. ಅದರ ಪ್ರಥಮ ಪ್ರದರ್ಶನದ ಮೂರನೇ ವಾರದಲ್ಲಿ,ಆಕ್ಷನ್-ಥ್ರಿಲ್ಲರ್ ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ರೂ 1000 ಕೋಟಿ ಕ್ಲಬ್‌ಗೆ ಪ್ರವೇಶಿಸುವ ಮೂಲಕ ಸಾಂಕ್ರಾಮಿಕ ನಂತರದ ಯುಗದಲ್ಲಿ ಹಲವಾರು ದಾಖಲೆಗಳನ್ನು ಮುರಿಯಿತು. ಪ್ರಶಾಂತ್ ನೀಲ್ ಅವರ ನೇತೃತ್ವದಲ್ಲಿ,ಇತ್ತೀಚಿನ […]

Advertisement

Wordpress Social Share Plugin powered by Ultimatelysocial