BANDH:ನಾಳೆ ಕರ್ನಾಟಕ ಬಂದ್ ಅನುಮಾನ?

ಬೆಂಗಳೂರು: ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಿಷೇಧಕ್ಕೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಶುಕ್ರವಾರ ಕರೆ ನೀಡಿರುವ ‘ಕರ್ನಾಟಕ ಬಂದ್’ಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಜತೆಗೆ ಕನ್ನಡಪರ ಸಂಘಟನೆಗಳಿಂದಲೇ ಅಪಸ್ವರ ವ್ಯಕ್ತವಾಗಿದ್ದು, ಬಂದ್ ರ್ಯಾಲಿಗೆ ಸೀಮಿತವಾಗುವ ಲಕ್ಷಣಗಳು ಗೋಚರಿಸಿವೆ.

ಕರ್ನಾಟಕ ರಕ್ಷಣ ವೇದಿಕೆಯ ಟಿ.ಎ.ನಾರಾಯಣಗೌಡ, ಜಯ ಕರ್ನಾಟಕ ಅಧ್ಯಕ್ಷ ಜಗದೀಶ್, ಹೋಟೆಲ್ ಉದ್ಯಮ, ಕ್ಯಾಬ್ ಚಾಲಕರು ಸೇರಿ ಹಲವು ಸಂಘ-ಸಂಸ್ಥೆಗಳು ಕರ್ನಾಟಕ ಬಂದ್​ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಸಹ ಬಂದ್ ಹಿಂಪಡೆಯಬೇಕು. ಎಂಇಎಸ್ ವಿರುದ್ಧ ಕಾನೂನಾತ್ಮಕ ಕ್ರಮದ ಭರವಸೆ ನೀಡಿದೆ.

ಕರ್ನಾಟಕ ರಕ್ಷಣ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ, ಬಂದ್ ಸಮಯ ಇದಲ್ಲ. ಡಿ.31ರ ಬದಲಾಗಿ ಬೇರೆ ದಿನ ನಿಗದಿ ಮಾಡಬೇಕೆಂದು ಮನವಿ ಮಾಡಿದ್ದಾರೆ. ಈ ಕುರಿತು ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್​ಗೆ ಬಹಿರಂಗ ಪತ್ರ ಬರೆದು, ಬಂದ್ ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ. ಮತ್ತೊಂದೆಡೆ ಕರ್ನಾಟಕ ರಕ್ಷಣ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಬಂದ್ ವಿರೋಧಿಸಿ ಮತ್ತು ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಗುರುವಾರ ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ. ಇದರಲ್ಲಿ 30ಕ್ಕೂ ಅಧಿಕ ಸಂಘಟನೆಗಳು ಭಾಗವಹಿಸಲಿದ್ದಾರೆ ಎಂದು ನಾರಾಯಣಗೌಡ ಹೇಳಿಕೆ ಕೊಟ್ಟಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ವಾಟಾಳ್ ನಾಗರಾಜ್, ಶುಕ್ರವಾರ ಬಂದ್​ಗೆ ಕರೆ ನೀಡಲಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ ಎಂದು ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು. ಒಕ್ಕೂಟದಲ್ಲಿ ಗುರುತಿಸಿಕೊಂಡಿರುವ ನಿರ್ವಪಕ ಸಾ.ರಾ.ಗೋವಿಂದು, ಬಂದ್​ಗೆ ವಿರೋಧ ಮಾಡುವವರು ಇದ್ದೇ ಇರುತ್ತಾರೆ. ಬಂದ್ ಮಾಡಿಯೇ ತೀರುತ್ತೇವೆ. ಈ ಸಂಬಂಧ ಗುರುವಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ಸೇರಿ ಹೋರಾಟದ ರೂಪುರೇಷೆಗಳ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಬಂದ್ ಕೈ ಬಿಡುವಂತೆ ಸಿಎಂ ಮನವಿ:

 ಕರೊನಾ ಸಂಕಷ್ಟದಲ್ಲಿ ಸಾಕಷ್ಟು ಆರ್ಥಿಕ ನಷ್ಟ ಉಂಟಾಗಿದೆ. ಕರ್ನಾಟಕ ಬಂದ್ ಮಾಡುವುದು ಪರಿಹಾರವಲ್ಲ. ಬಂದ್ ಕೈ ಬಿಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಈಗಾಗಲೆ ಎಂಇಎಸ್ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ. ಎಂಇಎಸ್ ನಿಷೇಧಕ್ಕೆ ಕಾನೂನು ವ್ಯಾಪ್ತಿಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ಬಂದ್ ಕೈಬಿಟ್ಟು ಬೇರೆ ಮಾರ್ಗ ಕಂಡುಕೊಳ್ಳುವಂತೆ ಕೋರಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ವಿಷ್ಣುವರ್ಧನ್​ 12ನೇ ವರ್ಷದ ಪುಣ್ಯಸ್ಮರಣೆ: ಫ್ಯಾನ್ಸ್​ ಮನದಲ್ಲಿ ವಿಷ್ಣುದಾದ ನೆನಪು ಅಮರ

Thu Dec 30 , 2021
ವಿಷ್ಣುವರ್ಧನ್​ ಅವರು ನಮ್ಮನ್ನೆಲ್ಲ ಅಗಲಿ 12 ವರ್ಷ ಕಳೆದಿದೆ. ಇಂದಿಗೂ ಅಭಿಮಾನಿಗಳು ಅವರನ್ನು ಸಖತ್​ ಮಿಸ್​ ಮಾಡಿಕೊಳ್ಳುತ್ತಾರೆ. ಪುಣ್ಯಸ್ಮರಣೆ ಅಂಗವಾಗಿ ಅನೇಕ ಕಾರ್ಯಕ್ರಮಗಳು ನಡೆಯುತ್ತಿವೆ. ಕನ್ನಡ ಚಿತ್ರರಂಗ ಕಂಡ ಅಪ್ರತಿಮ ಕಲಾವಿದರಲ್ಲಿ ವಿಷ್ಣುವರ್ಧನ್ ಕೂಡ ಒಬ್ಬರು. 200 ಸಿನಿಮಾಗಳಲ್ಲಿ ನಟಿಸಿದ ಅವರು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದರು. ಒಟ್ಟಾರೆ ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆ ದೊಡ್ಡದು. ಎಷ್ಟೇ ಹೊಸ ಹೀರೋಗಳು ಬರಬಹುದು. ಆದರೆ ವಿಷ್ಣುದಾದ ರೀತಿಯ ಇನ್ನೊಬ್ಬ ನಟ ಕನ್ನಡ […]

Advertisement

Wordpress Social Share Plugin powered by Ultimatelysocial