ಜನ ಸಾಮಾನ್ಯರಿಗೆ ಮತ್ತೊಂದು ಶಾಕ್;

 

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೋವಿಡ್ 4ನೇ ಅಲೆ ಆತಂಕದ ನಡುವೆ ಜನಸಾಮಾನ್ಯರಿಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ-ಕೆಎಂಎಫ್ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ಹಾಲಿನ ದರ ಏರಿಕೆ ಮಾಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದ್ದಾರೆ.

ನಂದಿನಿ ಹಾಲಿನ ದರಕ್ಕೆ ಹೋಲಿಸಿದರೆ ಇತರ ಸಂಸ್ಥೆಗಳ ಹಾಲಿನ ದರ ಲೀಟರ್ ಗೆ 8ರಿಂದ 10 ರೂಪಾಯಿ ಹೆಚ್ಚಿವೆ. ಹಾಗಾಗಿ ನಂದಿನಿ ಹಾಲಿನ ದರ ಲೀಟರ್ ಗೆ 3 ರೂಪಾಯಿ ಹೆಚ್ಚಿಸಬೇಕು. ಕರ್ನಾಟಕದ 14 ಹಾಲು ಒಕ್ಕೂಟಗಳು ಲೀಟರ್ ಗೆ 5 ರೂಪಾಯಿ ದರ ಹೆಚ್ಚಿಸುವಂತೆ ಮನವಿ ಮಾಡಿದ್ದವು. ಆದರೆ ಗ್ರಾಹಕರಿಗೆ ಹೊರೆಯಾಗಬಾರದು ಎಂಬ ಕಾರಣಕ್ಕೆ 3 ರೂಪಾಯಿ ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ.

ಒಟ್ಟಾರೆ ಹಾಲಿನ ದರ ಭಾರಿ ಏರಿಕೆಯಾಗಲಿದ್ದು, ಮೇ 1 ರಿಂದಲೇ ಪರಿಷ್ಕೃತ ದರ ಜಾರಿಗೆ ಬರುವ ಸಾಧ್ಯತೆ ದಟ್ಟವಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬೇಸಿಗೆ ಬಿಸಿಲಿನ ತಾಪ ಹೆಚ್ಚುತ್ತಿದ್ದಂತೆ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ

Wed Apr 27 , 2022
  ನೀರಿನ ಸಮಸ್ಯೆಯೂ ತೀವ್ರಗೊಳ್ಳುತ್ತಿದೆ. ಬಹುತೇಕ ಮಳೆಯಾಶ್ರಿತ ಪ್ರದೇಶವಾದ ತಾಲ್ಲೂಕಿನಲ್ಲಿ ತಾಪ ಹೆಚ್ಚುತ್ತಿದ್ದಂತೆ ನೀರಿನ ಮೂಲಗಳು ಬತ್ತಿ ಹೋಗುತ್ತಿವೆ. ಕುಡಿಯುವ ನೀರಿಗಾಗಿ ಜನ ತೆರೆದ ಬಾವಿ ಹಾಗೂ ಕೊಳವೆಬಾವಿಗಳನ್ನು ಅವಲಂಬಿಸಿದ್ದಾರೆ. ಈಗಾಗಲೇ ಸಾಕಷ್ಟು ಕಡೆ ತೆರೆದ ಬಾವಿಗಳಲ್ಲಿ ನೀರು ಕಡಿಮೆಯಾಗಿದೆ. ಕೊಳವೆ ಬಾವಿಗಳು ಕೂಡ ಕೈಕೊಟ್ಟಿವೆ. ಹೀಗಾಗಿ ತಾಲ್ಲೂಕಿನ ಗಡಿ ಗ್ರಾಮಗಳ ಜನ-ಜಾನುವಾರುಗಳು ಕುಡಿಯುವ ನೀರಿಗಾಗಿ ಪಕ್ಕದ ಮಹಾರಾಷ್ಟ್ರಕ್ಕೆ ಗುಳೆ ಹೋಗುವ ಅನಿವಾರ್ಯತೆ ಎದುರಾಗಿದೆ. ‘ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ತಾಲ್ಲೂಕಿನ […]

Advertisement

Wordpress Social Share Plugin powered by Ultimatelysocial