ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗ ಜಮಾಹಿಸಿದ ಪ್ರತಿಭಟನಾಕಾರರು

 

ಪದೇ ಪದೇ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಮಾರಕವಾಗಿರುವ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿರುದ್ಧ ರೈತ ಸಂಘದ ವತಿಯಿಂದ ಅಹೋರಾತ್ರಿ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ

ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗ ಜಮಾಹಿಸಿದ ಪ್ರತಿಭಟನಾಕಾರರು

ತಾಲೂಕು ಪಂಚಾಯಿತಿ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡರು

ತಾಲೂಕು ಪಂಚಾಯಿತಿ ಕಚೇರಿಯಲ್ಲೆ ಅಡುಗೆ ತಯಾರಿಸಿ ಊಟ ಮಾಡಿ ಅಲ್ಲೇ ಮಲಗುವ ಮೂಲಕ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು

ಜಿಲ್ಲಾ ರೈತ ಸಂಘದ ಅಧ್ಯಕ್ಷ ವಿದ್ಯಾಸಾಗರ್ ಹಾಗೂ ಪ್ರಧಾನ ಕಾರ್ಯದರ್ಶಿ ಹಿಮಾವು ರಘು ಮಾತನಾಡಿ ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಕಳಪೆ ಕಾಮಗಾರಿ ವಿರುದ್ಧ ಧ್ವನಿಯೆತ್ತಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಎತ್ತಂಗಡಿ ಮಾಡಿಸಿರುವ ಅಧಿಕಾರಿಗಳ ನಡೆಯನ್ನು ಖಂಡಿಸಿದರು
ಕಳೆದ ಆರು ತಿಂಗಳಿನಿಂದ ನಾಲ್ಕು ಮಂದಿ ಪಿಡಿಒಗಳನ್ನು ವರ್ಗಾವಣೆ ಮಾಡಲಾಗಿದೆ ಇದರಿಂದ ಗ್ರಾಮದ ಅಭಿವೃದ್ಧಿ ಕುಂಠಿತವಾಗುತ್ತಿದೆ ನಾವು ಯಾರ ಪರವು ಇಲ್ಲ ಇದನ್ನು ಕೇಳಿದರೆ ಇ ಒ ಶ್ರೀನಿವಾಸ್ ರವರು ಅಸಡ್ಡೆಯಾಗಿ ನಡೆದುಕೊಳ್ಳುತ್ತಿದ್ದಾರೆ ಹಾಗಾಗಿ ಸಂಬಂಧಪಟ್ಟ ಜಿ ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ಥಳಕ್ಕೆ ಬರುವವರೆಗೂ ಅಹೋರಾತ್ರಿ ಪ್ರತಿಭಟನಾ ಧರಣಿ ಮುಂದುವರಿಸುವುದಾಗಿ ಎಚ್ಚರಿಸಿದರು

ಯಾವುದೇ ಅಹಿತಕರ ಘಟನೆ ನಡೆಯದಂತೆ ವೃತ್ತ ನಿರೀಕ್ಷಕ ಲಕ್ಷ್ಮಿಕಾಂತ್ ತಳವಾರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿತ್ತು

ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಸತೀಶ್ ರಾವ್ ಮುಖಂಡರಾದ ಶಿವಣ್ಣ ಶಂಕರ್ ನಾಯ್ಕ ವೆಂಕಟೇಗೌಡ ಗ್ರಾಪಂ ಸದಸ್ಯರಾದ ವಣಕಾರನಾಯಕ ಕೃಷ್ಣನಾಯಕ ಕೃಷ್ಣಕುಮಾರ್ ಮಹಾದೇವನಾಯಕ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಇ ಡಿ ತನಿಖೆ ಒಳಪಡಿಸುವದನ್ನು ಖಂಡಿಸಿ ತಾಲೂಕಾ ತಹಸೀಲ್ದಾರ್ ಕಾರ್ಯಾಲಯ ಮುಂದೆ ಮೌನ ಪ್ರತಿಭಟನೆ

Tue Jul 26 , 2022
ಸಿಂಧನೂರು:ಬಸನಗೌಡ ಬಾದರ್ಲಿ ಪ್ರಧಾನ ಕಾರ್ಯದರ್ಶಿಗಳು ಕೆಪಿಸಿಸಿ ಇವರ ನೇತೃತ್ವದಲ್ಲಿ ತಾಲೂಕಾ ಕಾಂಗ್ರೆಸ್ ವತಿಯಿಂದ ಬಿಜೆಪಿ ಪಕ್ಷವು ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷರಾದ ಸೋನಿಯ ಗಾಂಧಿ ಅವರ ಮೇಲೆ ಸುಖ ಸುಮನೆ ಇ ಡಿ ತನಿಖೆ ಒಳಪಡಿಸುವದನ್ನು ಖಂಡಿಸಿ ತಾಲೂಕಾ ತಹಸೀಲ್ದಾರ್ ಕಾರ್ಯಾಲಯ ಮುಂದೆ ಮೌನ ಪ್ರತಿಭಟನೆ ಎಐಸಿಸಿ ಅಧ್ಯಕ್ಷರಾದ ಸೋನಿಯ ಗಾಂಧಿ ಅವರ ವಿರುದ್ಧ ಕೇಂದ್ರ ಬಿಜೆಪಿ ಸರ್ಕಾರವು ದ್ವೇಷದ ರಾಜಕಾರಣ ಮತ್ತು ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿ ನಮ್ಮ […]

Advertisement

Wordpress Social Share Plugin powered by Ultimatelysocial