ನಾರಾಯಣ ಗುರುಗಳ ಚಿತ್ರದ ಸ್ತಬ್ಧಚಿತ್ರ ಕೇಂದ್ರ ತಿರಸ್ಕರಿಸಿದ್ದು ತಿರ್ವ ಉಖಂಡನೀಯ: ಎಚ್‌.ಡಿ.ಕೆ

ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ಹೇಳಿದ್ದಾರೆ.  ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸ್ತ್ರೀ ಸಮಾನತೆಯನ್ನು ಪ್ರತಿಪಾದಿಸಿ ಜಾತಿ, ಮತಭೇದಗಳನ್ನು ಧಿಕ್ಕರಿಸಿ ಸಮಾಜೋದ್ಧಾರಕ್ಕೆ ಶ್ರಮಿಸಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳು, “ಮನುಷ್ಯರೆಲ್ಲ ಒಂದೇ ಎಂದು ಹೇಳಿ ಒಂದೇ ಜಾತಿ, ಒಂದೇ ಮತ, ಒಬ್ಬರೇ ದೇವರು” ಎಂದು ಸಾರಿ ಆತ್ಮದಲ್ಲಿ ಅರಿವಿನ ಬೆಳಕು ಮೂಡಿಸಿದವರು. ಅಂಥವರ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳಿವಳಿಕೆ ಇಲ್ಲದ ಅಜ್ಞಾನದ ಪರಮಾವಧಿ. ಆಯ್ಕೆ ಸಮಿತಿಯಲ್ಲಿ ಇಂಥ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಘೋರಿಯಾದ ನಟ ರಿಷಿ!

Sat Jan 15 , 2022
ಕವಲು ದಾರಿ ಸಿನಿಮಾ ಮೂಲಕ ಜನರ ಮೆಚ್ಚುಗೆ ಗಳಿಸಿದ್ದ ನಟ ರಿಷಿ ಅಲ್ಲೇ ಡ್ರಾ ಅಲ್ಲೇ ಬಹುಮನಾ ಚಿತ್ರದ ಹಾಡಿನ ಸೀಕ್ವೆನ್ಸ್‌ವೊಂದರಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಮ್ರಾನ್ ಸರ್ಧಾರಿಯಾ ನೃತ್ಯ ಸಂಯೋಜನೆಯ ಹಾಡಿನಲ್ಲಿ ಅಘೋರಿ ಅವತಾರದಲ್ಲಿ ನಟ ರಿಷಿ ಕಾಣಿಸಿಕೊಂಡಿದ್ದಾರೆ. ಹಾಡಿನಲ್ಲಿ ನೂರಾರು ಡ್ಯಾನ್ಸರ್‌ಗಳು ಮತ್ತು ಜೂನಿಯರ್ ಆರ್ಟಿಸ್ಟ್‌ಗಳು ಕೂಡ ಕಾಣಿಸಿಕೊಂಡಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial