ಜನಪ್ರಿಯ ಯೋಜನೆಗಳ ಬಗ್ಗೆ ಅಧಿಕಾರಿಗಳ ಕಳವಳ!

ಭಾರತದ ವಿವಿಧ ರಾಜ್ಯಗಳಲ್ಲಿ ಘೋಷಿಸಿರುವ ಜನಪರ ಯೋಜನೆಗಳ ಬಗ್ಗೆ ಪ್ರಧಾನಿ ಜೊತೆಗಿನ ಸಭೆಯಲ್ಲಿ ಹಿರಿಯ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಈ ಯೋಜನೆಗಳು ಆರ್ಥಿಕವಾಗಿ ಲಾಭದಾಯಕವಲ್ಲ, ರಾಜ್ಯಗಳ ಸ್ಥಿತಿಯೂ ಶ್ರೀಲಂಕಾದಂತೆಯೇ ಆಗಬಹುದೆಂದು ಅಧಿಕಾರಿಗಳು ಪ್ರಧಾನಿಗಳೆದುರು ಆತಂಕ ವ್ಯಕ್ತಪಡಿಸಿದ್ದಾರೆ.

ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸತತ ನಾಲ್ಕು ಗಂಟೆಗಳ ಕಾಲು ಸುದೀರ್ಘ ಸಭೆ ನಡೆಸಿದ್ರು. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸಚಿವ ಪಿಕೆ ಮಿಶ್ರಾ ಮತ್ತು ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ಸೇರಿದಂತೆ ಕೇಂದ್ರ ಸರ್ಕಾರದ ಇತರ ಉನ್ನತ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. 2014ರಿಂದೀಚೆಗೆ ಕಾರ್ಯದರ್ಶಿಗಳೊಂದಿಗೆ ಪ್ರಧಾನಿ ಮೋದಿ ಅವರು ನಡೆಸಿದ ಒಂಭತ್ತನೇ ಸಭೆ ಇದಾಗಿತ್ತು.

24ಕ್ಕೂ ಹೆಚ್ಚು ಕಾರ್ಯದರ್ಶಿಗಳು ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಇದನ್ನೆಲ್ಲ ಗಮನವಿಟ್ಟು ಆಲಿಸಿದ್ದಾರಂತೆ. ಆರ್ಥಿಕವಾಗಿ ಹಿಂದುಳಿದಿರುವ ರಾಜ್ಯಗಳಲ್ಲಿ ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಲಾದ ಜನಪರ ಯೋಜನೆಯ ಬಗ್ಗೆ ಇಬ್ಬರು ಕಾರ್ಯದರ್ಶಿಗಳು ಉಲ್ಲೇಖಿಸಿದ್ದಾರೆ. ಈ ಯೋಜನೆ ಆರ್ಥಿಕವಾಗಿ ಸಮರ್ಥನೀಯವಾಗಿಲ್ಲ, ಇದು ರಾಜ್ಯಗಳನ್ನು ಶ್ರೀಲಂಕಾದ ದಾರಿಯಲ್ಲಿ ಕೊಂಡೊಯ್ಯಬಹುದು ಎಂದರು.

ಹಿಂಜರಿತದ ಮನಸ್ಥಿತಿಯಿಂದ ಹೊರಬರುವಂತೆ ಸಲಹೆ ನೀಡಿದ ಮೋದಿ, ಹೆಚ್ಚುವರಿ ನಿರ್ವಹಣೆಯನ್ನು ನಿಭಾಯಿಸಲು ಹೊಸ ಸವಾಲನ್ನು ಎದುರಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ. ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಯಶಸ್ವಿಯಾಗಿಸುವುದನ್ನು ಬಿಟ್ಟು ಬಡತನದ ನೆಪ ಹೇಳುವ ಹಳೆಯ ಅಭ್ಯಾಸವನ್ನು ಕೈಬಿಡಿ ಅಂತಾ ಹೇಳಿದ್ದಾರೆ. ಕೋವಿಡ್‌ ತುರ್ತು ಸಂದರ್ಭದಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಿದ್ದನ್ನು ಮೋದಿ ಉಲ್ಲೇಖಿಸಿದ್ರು.

ತಂತಮ್ಮ ಇಲಾಖೆಗಳ ಕಾರ್ಯದರ್ಶಿಗಳು ಎಂದುಕೊಳ್ಳಬೇಡಿ. ನೀವೆಲ್ಲರೂ ಭಾರತ ಸರ್ಕಾರದ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಬೇಕು. ಒಗ್ಗಟ್ಟಿನಲ್ಲಿ ತಂಡವಾಗಿ ಕೆಲಸ ಮಾಡಬೇಕು ಅಂತಾ ಮೋದಿ ಸಲಹೆ ನೀಡಿದ್ರು. ಆಯಾ ಸಚಿವಾಲಯಗಳಿಗೆ ಸಂಬಂಧಿಸಿದ ನೀತಿಗಳಲ್ಲಿರುವ ಲೋಪದೋಷಗಳ ಬಗ್ಗೆ ಪ್ರತಿಕ್ರಿಯೆ ಮತ್ತು ಸಲಹೆಗಳನ್ನು ನೀಡುವಂತೆ ಅವರು ಕಾರ್ಯದರ್ಶಿಗಳಿಗೆ ತಿಳಿಸಿದರು. ಆಡಳಿತದಲ್ಲಿ ಒಟ್ಟಾರೆ ಸುಧಾರಣೆಗಳಿಗೆ ಹೊಸ ಹೊಸ ಆಲೋಚನೆಗಳನ್ನು ಸೂಚಿಸಲು ಪ್ರಧಾನಿ ಮೋದಿ ಕಾರ್ಯದರ್ಶಿಗಳ ಆರು-ವಲಯಗಳ ಗುಂಪುಗಳನ್ನು ಸಹ ರಚಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಿಂದೂಪರ ಸಂಘಟನೆಗಳ ವಿರುದ್ದ ಎಚ್‌ಡಿಕೆ ಸಮರ:

Mon Apr 4 , 2022
  ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಇದುವರೆಗಿನ ರಾಜಕೀಯ ಜೀವನದಲ್ಲಿ ಒಂದು ನಿಲುವು/ಸಿದ್ದಾಂತದ ಪರವಾಗಿ ನಿಂತವರಲ್ಲ ಎನ್ನುವುದು ಅವರ ಪಕ್ಷದಲ್ಲೇ ಕೇಳಿಬರುತ್ತಿರುವ ಮಾತು. ಕಳೆದ ಕೆಲವು ದಿನಗಳ ಅವರ ಹೇಳಿಕೆಗಳನ್ನು ನೋಡಿದರೆ, ಅದನ್ನು ಪುಷ್ಟೀಕರಿಸುವಂತಿದೆ. ಬಿಜೆಪಿಯವರೂ ನಾಚಿಸುವಂತೆ ಕಾಂಗ್ರೆಸ್ ಮುಖಂಡರ ವಿರುದ್ದ ಅದರಲ್ಲೂ ಪ್ರಮುಖವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸುತ್ತಿದ್ದ ಕುಮಾರಸ್ವಾಮಿಯವರು ಈಗ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ವಿರುದ್ದ ತಿರುಗಿ ಬೀಳುತ್ತಿದ್ದಾರೆ. ಹಿಜಾಬ್ ಸೇರಿದಂತೆ […]

Advertisement

Wordpress Social Share Plugin powered by Ultimatelysocial