ಬೆಂಗಳೂರಿನಲ್ಲಿ BE/ B. Tech ಪದವೀಧರರಿಗೆ ಬಂಪರ್ ಉದ್ಯೋಗ ಅವಕಾಶ.

ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್​  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸೈಂಟಿಫಿಕ್ ಆಫೀಸರ್ C  ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಜನವರಿ 25, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್​/ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆ ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್​
ಹುದ್ದೆ ಸೈಂಟಿಫಿಕ್ ಆಫೀಸರ್ C (IT)
ವಿದ್ಯಾರ್ಹತೆ ಬಿಇ/ ಬಿ.ಟೆಕ್
ವೇತನ ಮಾಸಿಕ ₹ 89,900
ಉದ್ಯೋಗದ ಸ್ಥಳ ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ ಜನವರಿ 25, 2023

ವಿದ್ಯಾರ್ಹತೆ:
ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ವೇತನ:
ಮಾಸಿಕ 89,900 ರೂ.

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಕಂಡ ವಿಳಾಕಸಕ್ಕೆ ಭರ್ತಿ ಮಾಡಿದ ಅಪ್ಲಿಕೇಶನ್ ನಮೂನೆ ಹಾಗೂ ಅಗತ್ಯ ದಾಖಲಾತಿಗಳನ್ನು ಕಳುಹಿಸಿಕೊಡಿ.

ಮುಖ್ಯಸ್ಥರು
ಆಡಳಿತ ಮತ್ತು ಹಣಕಾಸು
ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರ
ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್
GKVK ಪೋಸ್ಟ್
ಬಳ್ಳಾರಿ ರಸ್ತೆ
ಬೆಂಗಳೂರು-560065

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 25, 2023
ಹಾರ್ಡ್​ ಕಾಪಿ ಕಳುಹಿಸಲು ಕೊನೆ ದಿನ: ಜನವರಿ 27, 2023

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಲಿದೆ ಎಂದು ಹೇಳಲಾಗಿದೆ.

Sun Jan 15 , 2023
ದೈನಂದಿನ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಕಂಗೆಟ್ಟಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಲಿದೆ ಎಂದು ಹೇಳಲಾಗಿದೆ. ವಿದ್ಯುಚ್ಛಕ್ತಿ ನಿಗಮದ ಸಿಬ್ಬಂದಿ ವರ್ಗಕ್ಕೆ ಕೊಡಬೇಕಾಗಿರುವ ನಿವೃತ್ತಿ ವೇತನದ ಮೊತ್ತವನ್ನು ಗ್ರಾಹಕರ ಮೇಲೆ ವರ್ಗಾಯಿಸಲು ಸರ್ಕಾರ ಮುಂದಾಗಿದ್ದು, ಹೀಗಾಗಿ ವಿದ್ಯುತ್ ದರದಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ತಣ್ಣೀರು ಬಾವಿ ಮೊತ್ತಕ್ಕೆ ಸಂಬಂಧಿಸಿದಂತೆ 1,657 ಕೋಟಿ ರೂಪಾಯಿಗಳನ್ನು ತೆರಿಗೆ ಮೂಲಕ ಸಂಗ್ರಹಿಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಇದು ಕೂಡಾ […]

Advertisement

Wordpress Social Share Plugin powered by Ultimatelysocial