ನವೀನ್ ಮೃತದೇಹ ಪಡೆಯಲು ಎಲ್ಲ ಪ್ರಯತ್ನ: ಸಿಎಂ ಬಸವರಾಜ ಬೊಮ್ಮಾಯಿ

 

ಬೆಂಗಳೂರು, ಮಾರ್ಚ್ 05: ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರುಉಕ್ರೇನ್ ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ.ಖಾರ್ಕೀವ್, ಕೀವ್‌ನಲ್ಲಿ ಹೊರಬರಲಾರದ ಪರಿಸ್ಥಿತಿಯೂ ಇದೆ. ಸಿಲುಕಿಕೊಂಡವರನ್ನು ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರೂ ಕಾರ್ಯನಿರತರಾಗಿದ್ದಾರೆ. ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದು ಹೇಳಿದ್ದಾರೆ. ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು, ಉಕ್ರೇನ್ ರಾಯಭಾರ ಕಚೇರಿಯೊಂದಿಗೂ ಮಾತನಾಡಲಾಗಿದೆ ಎಂದರು.

ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಬೊಮ್ಮಾಯಿ ಬಜೆಟ್ ನಲ್ಲಿ ಏನೇನಿದೆ? | 

ಕೇಂದ್ರ ಜಲಶಕ್ತಿ ಸಚಿವರು ಭಾಗವಹಿಸುವ ಜಲಜೀವನ್ ಮಿಷನ್ ಕುರಿತು ದಕ್ಷಿಣ ರಾಜ್ಯ ಗಳ ಪ್ರಾದೇಶಿಕ ಸಭೆಯಲ್ಲಿ ಭಾಗವಹಿಸಿ ನಂತರ ಶಿಕಾರಿಪುರ ದಲ್ಲಿ ರೈತರ ಸಭೆಯಲ್ಲಿ ಪಾಲ್ಗೊಂಡು, ರಾಣಿಬೆನ್ನೂರಿನಲ್ಲಿ ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಅವರ ತಂದೆಯವರನ್ನು ಭೇಟಿಯಾಗಲಿದ್ದೇನೆ ಎಂದರು. ಸರ್ಕಾರದಿಂದ ನವೀನ್ ಕುಟುಂಬಕ್ಕೆ ಪರಿಹಾರ ಕೊಡಲು ನಿರ್ಧರಿಸಲಾಗಿದೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

5 ಬಾರಿ ಪ್ರಿಯಾಂಕಾ ಚೋಪ್ರಾ ಜೋನಾಸ್ ಅವರು ನಿಜವಾದ ದೇಸಿ ಹುಡುಗಿ ಎಂದು ಸಾಬೀತುಪಡಿಸಿದ್ದಾರೆ

Sat Mar 5 , 2022
  ಪ್ರಿಯಾಂಕಾ ಚೋಪ್ರಾ ಜೋನಾಸ್ ಅವಳು ಮಾಡುವ ಎಲ್ಲವನ್ನೂ ಏಸಸ್ ಮಾಡುವ ಬಾಸ್ ಮಹಿಳೆ. ಹಿಂದಿ ಚಲನಚಿತ್ರಗಳಲ್ಲಿ ಅವರ ನಟನಾ ವೃತ್ತಿಯಾಗಿರಲಿ, ಹಾಡುವುದು ಅಥವಾ ಜಾಗತಿಕವಾಗಿ ಉತ್ತಮ ಸಾಧನೆ ಮಾಡುವ ಮೂಲಕ ಭಾರತವನ್ನು ಹೆಮ್ಮೆಪಡುವಂತೆ ಮಾಡುವುದು. ನಟಿಗೆ ಹೃದಯಗಳನ್ನು ಗೆಲ್ಲಲು ಖಚಿತವಾಗಿ ತಿಳಿದಿದೆ. ಆದರೆ ಅಲ್ಲಿ ವಾಸಿಸುವಾಗ ಹೆಚ್ಚಿನ ಜನರು ಪಾಶ್ಚಿಮಾತ್ಯ ಸಂಸ್ಕೃತಿಗೆ ಹೊಂದಿಕೊಳ್ಳುತ್ತಾರೆ, ಆದರೆ PC ಯ ಅದ್ಭುತವೆಂದರೆ ಅವಳು ಹೋದಲ್ಲೆಲ್ಲಾ ತನ್ನ ಭಾರತೀಯತೆಯನ್ನು ಹೇಗೆ ಪೂರ್ಣ ಸ್ವಿಂಗ್‌ನಲ್ಲಿ […]

Advertisement

Wordpress Social Share Plugin powered by Ultimatelysocial