ನಯನತಾರಾ ಅವರು ಹಲವಾರು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿದವರು.

ಮುಂಬೈ: ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತರಾಗಿರುವ ನಯನತಾರಾ ಅವರು ಹಲವಾರು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿದವರು. ಅಲ್ಲದೆ ಬಾಲಿವುಡ್ ಗೆ ಪದಾರ್ಪಣೆ ಮಾಡಲು ಸಿದ್ದರಾಗಿದ್ದು, ಶಾರುಖ್ ಖಾನ್ ಅವರ ‘ಜವಾನ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಸ್ಟಾರ್ ನಟಿ ನಯನತಾರಾ ಅವರು ಇತ್ತೀಚೆಗೆ ಕಾಸ್ಟಿಂಗ್ ಕೌಚ್ ನಲ್ಲಿ ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ.

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ನಯನತಾರಾ ತನ್ನ ಕಾಸ್ಟಿಂಗ್ ಕೌಚ್ ಸಂಕಷ್ಟವನ್ನು ಹಂಚಿಕೊಂಡರು. ‘ತಮಗೆ ಅನುಕೂಲಕರ’ವಾಗಿದ್ದರೆ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನೀಡುತ್ತೇವೆ ಎಂಬ ಆಫರ್ ಒಂದೊಮ್ಮೆ ನನಗೆ ಬಂದಿತ್ತು ಎಂದು ನಯಕತಾರಾ ಬಹಿರಂಗಪಡಿಸಿದರು. ಆದರೆ ‘ಇಲ್ಲ’ ಎಂದು ಹೇಳಿ ಆಫರ್ ತಿರಸ್ಕರಿಸುವಷ್ಟು ಧೈರ್ಯವಿತ್ತು, ನಾನು ನನ್ನ ನಟನಾ ಸಾಮರ್ಥ್ಯವನ್ನು ನಂಬುವವಳು ಎಂದು ನಯನತಾರಾ ಹೇಳಿದ್ದಾರೆ.

 ನಟಿಯೊಬ್ಬರು ತನ್ನ ಕಾಸ್ಟಿಂಗ್ ಕೌಚ್ ಅನುಭವವನ್ನು ಹಂಚಿಕೊಂಡಿದ್ದು ಇದೇ ಮೊದಲಲ್ಲ. ಇದಕ್ಕೂ ಮೊದಲು, ಬಿಗ್ ಬಾಸ್ 16 ಖ್ಯಾತಿಯ ಅಂಕಿತ್ ಗುಪ್ತಾ ಮತ್ತು ಇತರರು ಸಿನಿಮಾ ಭರವಸೆಯಲ್ಲಿ ‘ರಾಜಿ’ ಮಾಡಿಕೊಳ್ಳಲು ಹೇಗೆ ಕೇಳಿಕೊಂಡರು ಎಂಬುದನ್ನು ಹಂಚಿಕೊಂಡಿದ್ದರು.

ನಯನತಾರಾ ಅಭಿಮಾನಿಗಳು ‘ಜವಾನ್‌’ ನಲ್ಲಿ ಶಾರುಖ್ ಎದುರು ಅವರನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಖ್ಯಾತ ನಿರ್ದೇಶಕ ಅಟ್ಲೀ ನಿರ್ದೇಶನದ ಚಿತ್ರದಲ್ಲಿ ಶಾರುಖ್ ಖಾನ್, ವಿಜಯ್ ಸೇತುಪತಿ, ಸಾನ್ಯಾ ಮಲ್ಹೋತ್ರಾ, ಸುನಿಲ್ ಗ್ರೋವರ್ ಮುಂತಾದವರು ನಟಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಕಾರಕ್ಕೆ ಬರಲಿದೆ.

Thu Feb 2 , 2023
ಬೆಂಗಳೂರು :ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಕಾರಕ್ಕೆ ಬರಲಿದೆ ಎಂಬ ನಿರೀಕ್ಷೆ ಇರುವುದರಿಂದ ಕೆಲವು ಕಡೆ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಕೆಲವು ತ್ಯಾಗ ಮಾಡುವುದು ಅನಿವಾರ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಜ್ಯ ಚುನಾವಣಾ ಸಮಿತಿ ಸಭೆಗೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ. ಪ್ರತಿ ಜಿಲ್ಲೆಯ ಆಕಾಂಕ್ಷಿಗಳ ಜತೆ ಚರ್ಚೆ ಮಾಡಿ ಕೆಲವು ಹೆಸರುಗಳನ್ನು ಶಿಫಾರಸ್ಸು ಮಾಡಲು ಪಕ್ಷದ ಕಾರ್ಯದರ್ಶಿಗಳು, ಕಾರ್ಯಾಧ್ಯಕ್ಷರು, ಚುನಾವಣಾ […]

Advertisement

Wordpress Social Share Plugin powered by Ultimatelysocial